Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 10:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸೌಲನಿದ್ದ ಕಡೆಯಲ್ಲಿ ಯುದ್ಧವು ಬಹು ಘೋರವಾಗಿತ್ತು. ಬಿಲ್ಲುಗಾರರು ಅವನಿಗೆ ಗುರಿಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಘೋರ ಯುದ್ಧದ ಮಧ್ಯದಲ್ಲಿ ಸೌಲನು ತಪ್ಪಿಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ವೈರಿ ಬಾಣವು ಅವನಿಗೆ ತಾಕಲು ಅವನು ತೀವ್ರ ಗಾಯಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸೌಲನಿದ್ದ ಕಡೆಯಲ್ಲಿ ಯುದ್ಧವು ಬಹು ಘೋರವಾಗಿತ್ತು. ಬಿಲ್ಲುಗಾರರು ಅವನಿಗೆ ಗುರಿಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸೌಲನ ಸುತ್ತಲೂ ಯುದ್ಧವು ಬಹು ಘೋರವಾಗಿ ನಡೆಯಿತು. ಬಿಲ್ಲುಗಾರರು ತಮ್ಮ ಬಿಲ್ಲುಗಳಿಂದ ಸೌಲನ ಕಡೆಗೆ ಗುರಿಯಿಟ್ಟು ಹೊಡೆದು ಅವನನ್ನು ಗಾಯಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯುದ್ಧವು ಸೌಲನಿದ್ದ ಕಡೆಯಲ್ಲಿ ಬಹುಘೋರವಾಗಿತ್ತು; ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದಾಗ ಅವನು ತೀವ್ರವಾಗಿ ಗಾಯಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 10:3
6 ತಿಳಿವುಗಳ ಹೋಲಿಕೆ  

ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳಲಾರನು. ಬಲಿಷ್ಠನು ತನ್ನ ಬಲವನ್ನು, ತನ್ನ ಪ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಾರನು.


ಫಿಲಿಷ್ಟಿಯರು ಸೌಲನನ್ನೂ, ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ, ಅವನ ಮಕ್ಕಳಾದ ಯೋನಾತಾನನ್ನೂ, ಅಬೀನಾದಾಬನನ್ನೂ ಮತ್ತು ಮಲ್ಕೀಷೂವನನ್ನೂ ಕೊಂದರು.


ಆಗ ಸೌಲನು ತನ್ನ ಆಯುಧ ಹೊರುವವನಿಗೆ, “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು, ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನಗೆ ಅಪಕೀರ್ತಿ ತಂದಾರು” ಎಂದು ಹೇಳಲು ಅವನು ಹೆದರಿ ಹಿಂಜರಿದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು, ಅದರ ಮೇಲೆ ಬಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು