Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಫಿಲಿಷ್ಟಿಯರು ಪಸ್ದಮ್ಮೀಮಿನಲ್ಲಿ ಯುದ್ಧಕ್ಕೆ ಬಂದಾಗ ಇವನು ದಾವೀದನ ಜೊತೆಯಲ್ಲಿದ್ದನು. ಅಲ್ಲಿ ಒಂದು ಜವೆಗೋದಿಯ ಹೊಲವಿತ್ತು. ಇಸ್ರಾಯೇಲರು ಫಿಲಿಷ್ಟಿಯರಿಗೆ ಹೆದರಿ ಓಡಿಹೋಗಲು ಪ್ರಯತ್ನಿಸಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಈತ ಪಸ್ದಮ್ಮೀಮಿ ಎಂಬಲ್ಲಿ ಫಿಲಿಷ್ಟಿಯರಿಗೆ ವಿರುದ್ಧ ಹೂಡಿದ ಕಾಳಗದಲ್ಲಿ ದಾವೀದನ ಪರವಾಗಿ ಹೋರಾಡಿದನು. ಇಸ್ರಯೇಲರು ಹಿಂಜರಿದು ಓಡಿಹೋಗುತ್ತಿದ್ದಾಗ ಇವನು ಜವೆಗೋದಿಯ ಹೊಲದಲ್ಲಿ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಫಿಲಿಷ್ಟಿಯರು ಪಸ್ದಮ್ಮೀವಿುನಲ್ಲಿ ಯುದ್ಧಕ್ಕೆ ಕೂಡಿಕೊಂಡಾಗ ಇವನು ದಾವೀದನ ಜೊತೆಯಲ್ಲಿದ್ದನು. ಅಲ್ಲಿ ಒಂದು ಜವೆಗೋದಿಯ ಹೊಲವಿತ್ತು; ಇಸ್ರಾಯೇಲ್ಯರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಪಸ್ಥಮ್ಮೀಮ್ ಎಂಬ ಸ್ಥಳದಲ್ಲಿ ಇವನು ದಾವೀದನೊಂದಿಗಿದ್ದನು. ಅಲ್ಲಿಗೆ ಫಿಲಿಷ್ಟಿಯರು ಯುದ್ಧಮಾಡಲು ಬಂದಿದ್ದರು. ಆ ಸ್ಥಳದ ಒಂದು ಹೊಲದಲ್ಲಿ ಬಾರ್ಲಿಯ ಬೆಳೆಯು ಬೆಳೆದು ನಿಂತಿತ್ತು. ಫಿಲಿಷ್ಟಿಯರ ಎದುರಿನಿಂದ ಇಸ್ರೇಲರು ಓಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಪಸ್ ದಮ್ಮೀಮ್ ಎಂಬಲ್ಲಿ ಫಿಲಿಷ್ಟಿಯರು ಜವೆಗೋಧಿ ತುಂಬಿರುವ ಹೊಲದಲ್ಲಿ ಯುದ್ಧಕ್ಕಾಗಿ ಸೇರಿದಾಗ ಇವನು ದಾವೀದನ ಸಂಗಡ ಇದ್ದನು. ಅಲ್ಲಿ ಇಸ್ರಾಯೇಲ್ ಸೈನ್ಯದವರು ಫಿಲಿಷ್ಟಿಯರ ಎದುರಿನಿಂದ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:13
4 ತಿಳಿವುಗಳ ಹೋಲಿಕೆ  

ಫಿಲಿಷ್ಟಿಯರು ಯುದ್ಧ ಮಾಡುವುದಕ್ಕೋಸ್ಕರ ಯೆಹೂದ ದೇಶದ ಸೋಕೋವಿನಲ್ಲಿ ಸೈನ್ಯವನ್ನು ಕೂಡಿಸಿಕೊಂಡು ಬಂದು ಸೋಕೋವಿಗೂ ಅಜೇಕಕ್ಕೂ ಮಧ್ಯದಲ್ಲಿರುವ ಎಫೆಸ್ದಮ್ಮೀಮಿನಲ್ಲಿ ಪಾಳೆಯಮಾಡಿಕೊಂಡರು.


ಇಸ್ರಾಯೇಲರು ಹೋದ ನಂತರ ಇವನು ನಿಂತುಕೊಂಡು, ಕತ್ತಿ ಹಿಡಿದು, ಕೈ ಸೋತು ಹೋಗುವ ತನಕ ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನದಲ್ಲಿ ಯೆಹೋವನು ಮಹಾಜಯವನ್ನುಂಟುಮಾಡಲು ಇಸ್ರಾಯೇಲರು ಸುಲಿದುಕೊಳ್ಳುವುದಕ್ಕಾಗಿ ಹಿಂದಿರುಗಿದರು.


ಆ ವೀರರು ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದರು. ಹೀಗೆ ಯೆಹೋವನು ಅವನಿಗೆ ಮಹಾ ಜಯವನ್ನುಂಟುಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು