Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದಾವೀದನು ಲವಲವಿಕೆಯಿಂದ, “ಬೇತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದು ಕೊಡುವುದಾದರೆ ಎಷ್ಟೋ ಒಳ್ಳೆಯದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದಾವೀದನು ತನ್ನೂರನ್ನು ಜ್ಞಾಪಿಸಿಕೊಂಡು ಅಸ್ವಸ್ಥನಾಗಿ ‘ಬೆತ್ಲೆಹೇಮಿನ ದ್ವಾರದ ಬಳಿಯಿರುವ ಬಾವಿಯಿಂದ ನನಗೆ ಕುಡಿಯಲು ಯಾರಾದರೂ ನೀರನ್ನು ತಂದುಕೊಡಬಲ್ಲಿರೋ!’ ಎಂದು ತನ್ನ ಅಪೇಕ್ಷೆಯನ್ನು ವ್ಯಕ್ತಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ದುರ್ಗದಲ್ಲಿದ್ದ ದಾವೀದನು ಲವಲವಿಕೆಯಿಂದ - ಬೇತ್ಲೆಹೇಮ್ ಊರಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದುಕೊಡುವದಾದರೆ ಎಷ್ಟೋ ಒಳ್ಳೇದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದಾಹಗೊಂಡಿದ್ದ ದಾವೀದನು ತನ್ನ ಊರಿನ ನೀರು ಕುಡಿಯಲು ಬಯಸಿ, “ಬೆತ್ಲೆಹೇಮಿನ ನಗರದ್ವಾರದ ಬಳಿಯಲ್ಲಿರುವ ಬಾವಿಯಿಂದ ಯಾರಾದರೂ ನೀರು ತಂದುಕೊಡುವುದಾದರೆ ಎಷ್ಟೋ ಒಳ್ಳೆಯದು” ಎಂದು ಅವನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ದಾವೀದನು, “ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವವನ್ಯಾರು,” ಎಂದು ಬಹು ಆಶೆಯಿಂದ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:17
11 ತಿಳಿವುಗಳ ಹೋಲಿಕೆ  

ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು.


ಅದಕ್ಕೆ ಯೇಸು “ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು” ಅಂದನು.


ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ.


ಕೈಚಾಚಿ ಬೇಡುತ್ತೇನೆ; ಒಣನೆಲವು ನೀರಿಗಾಗಿ ಹೇಗೋ, ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ


ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ, ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ.


ಫಿಲಿಷ್ಟಿಯರು ಬೇತ್ಲೆಹೇಮಿನಲ್ಲಿ ಒಂದು ಕಾವಲು ದಂಡನ್ನು ಇಟ್ಟಿದ್ದರು. ಆಗ ದಾವೀದನು ದುರ್ಗದಲ್ಲಿದ್ದನು.


ಕೂಡಲೆ ಆ ಮೂವರು ವೀರರು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿ ಹೋಗಿ, ಬೇತ್ಲೆಹೇಮ್ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು.


ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು