Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮತ್ತೊಮ್ಮೆ ಏಳುವರೆ ಅಡಿ ಎತ್ತರದ ಅತಿ ಬಲವಾದ ಈಟಿಯನ್ನು ಹೊಂದಿದ್ದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿದ್ದ ಈಟಿಯು ನೇಕಾರರ ಕುಂಟೆಯಂತಿತ್ತು. ಆದರೆ ಇವನ ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಇನ್ನೊಮ್ಮೆ ಏಳುವರೆ ಅಡಿ ಎತ್ತರದ, ಅತೀ ಬಲವಾದ ಈಟಿಯನ್ನು ಹೊಂದಿದ್ದ, ಬಲಾಢ್ಯನಾದ ಈಜಿಪ್ಟನೊಬ್ಬನನ್ನು ಸೋಲಿಸಿದನು. ಆ ಈಜಿಪ್ಟಿನವನ ಕೈಯಲ್ಲಿ ಬಲವಾದ ಈಟಿ ಇತ್ತು. ಇವನಾದರೋ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ, ಅವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು ಅದರಿಂದಲೇ ಅವನನ್ನು ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮತ್ತೊಮ್ಮೆ ಐದು ಮೊಳ ಎತ್ತರವಾದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿ ನೇಯ್ಗೆಗಾರರ ಕುಂಟೆಯಂತಿರುವ ಒಂದು ಬರ್ಜಿಯಿತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಈಜಿಪ್ಟಿನಲ್ಲಿ ಅತ್ಯಂತ ಎತ್ತರವಾಗಿದ್ದ ಮಹಾಸೈನಿಕನೊಬ್ಬನನ್ನು ಬೆನಾಯನು ಕೊಂದುಹಾಕಿದನು. ಅವನು ಏಳೂವರೆ ಅಡಿ ಎತ್ತರವಾಗಿದ್ದನು. ಅವನ ಕೈಯಲ್ಲಿದ್ದ ಈಟಿಯು ದೊಡ್ಡ ಕಂಬದಂತೆ ಇತ್ತು. ಬೆನಾಯನ ಕೈಯಲ್ಲಿ ಒಂದು ದೊಣ್ಣೆಮಾತ್ರ ಇತ್ತು. ಬೆನಾಯನು ಅವನ ಹತ್ತಿರ ಹೋಗಿ ಅವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು ಅದರಿಂದಲೇ ಅವನನ್ನು ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನು ಏಳುವರೆ ಅಡಿ ಎತ್ತರವಾಗಿದ್ದ ಒಬ್ಬ ಈಜಿಪ್ಟಿನವನನ್ನು ಹೊಡೆದುಬಿಟ್ಟನು; ಆ ಈಜಿಪ್ಟಿನವನ ಕೈಯಲ್ಲಿ ನೇಯ್ಗೆಗಾರರ ಕುಂಟೆಯಷ್ಟು ದಪ್ಪವಾದ ಒಂದು ಈಟಿ ಇದ್ದರೂ, ತಾನು ಒಂದು ಕೋಲು ಹಿಡಿದುಕೊಂಡು ಅವನ ಬಳಿಗೆ ಹೋಗಿ, ಈಜಿಪ್ಟಿನವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು, ಅವನ ಈಟಿಯಿಂದಲೇ ಅವನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:23
6 ತಿಳಿವುಗಳ ಹೋಲಿಕೆ  

ಅವನ ಬರ್ಜಿಯ ಹಿಡಿಕೆಯು ನೇಯಿಗಾರ ಕುಂಟೆಯಷ್ಟು ಗಾತ್ರವಾಗಿತ್ತು. ಅದರ ಅಲಗು ಆರುನೂರು ತೊಲೆ ಕಬ್ಬಿಣದಿಂದ ಮಾಡಿದ್ದು. ಅವನ ಗುರಾಣಿಯನ್ನು ಹೊರುವವನು ಅವನ ಮುಂದೆ ಹೋಗುತ್ತಿದ್ದನು.


ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಯಾಯೀರನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನ ತಮ್ಮನಾದ ಲಹ್ಮೀಯನನ್ನು ಕೊಂದನು. ಲಹ್ಮೀಯನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು.


ಈ ಪ್ರಕಾರ ದಾವೀದನು ಕತ್ತಿಯಿಂದಲ್ಲ ಬರೀ ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನನ್ನು ಸೋಲಿಸಿ, ಕೊಂದು ಹಾಕಿದನು ಫಿಲಿಷ್ಟಿಯರು ತಮ್ಮ ರಣವೀರನು ಸತ್ತುಹೋದದ್ದನ್ನು ಕಂಡು ಓಡಿಹೋದರು.


ಫಿಲಿಷ್ಟಿಯರ ಪಾಳೆಯದಿಂದ ಗತ್ ಊರಿನವನಾದ ಗೊಲ್ಯಾತನೆಂಬ ಒಬ್ಬ ರಣಶೂರನು ಹೊರಟುಬಂದನು. ಅವನು ಆರುವರೆ ಮೊಳ ಎತ್ತರವಾಗಿದ್ದನು.


(ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈ ಅಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)


ಈ ಪರಾಕ್ರಮ ಕೃತ್ಯದಿಂದ ಯೆಹೋಯಾದನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುವಾಸಿಯಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು