Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದಾವೀದನು ಇಸ್ರಾಯೇಲರನ್ನು ಕರೆದುಕೊಂಡು ಅಂದಿನಕಾಲದಲ್ಲಿ ಯೆಬೂಸೆನಿಸಿಕೊಂಡಿದ್ದ ಯೆರೂಸಲೇಮಿಗೆ ಮುತ್ತಿಗೆ ಹಾಕಲು ಹೊರಟನು. ಆ ಪ್ರಾಂತ್ಯದ ಮೂಲನಿವಾಸಿಗಳು ಯೆಬೂಸಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಕಾಲದಲ್ಲಿ ಜೆರುಸಲೇಮ್ ಪಟ್ಟಣವನ್ನು ‘ಯೆಬೂಸ’ ಎಂದು ಕರೆಯಲಾಗುತ್ತಿತ್ತು. ಅಲ್ಲಿಯ ಮೂಲನಿವಾಸಿಗಳಾದ ಯೆಬೂಸಿಯರು ಆ ಪ್ರದೇಶದಲ್ಲಿ ಇನ್ನೂ ವಾಸಿಸುತ್ತಿದ್ದರು. ಅರಸ ದಾವೀದನೂ ಎಲ್ಲಾ ಇಸ್ರಯೇಲರೂ ಜೆರುಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದಾವೀದನು ಇಸ್ರಾಯೇಲ್ಯರೆಲ್ಲರನ್ನೂ ಕರಕೊಂಡು ಯೆಬೂಸೆನಿಸಿಕೊಂಡಿದ್ದ ಯೆರೂಸಲೇವಿುಗೆ ವಿರೋಧವಾಗಿ ಹೊರಟನು. ಆ ಪ್ರಾಂತದ ಮೂಲನಿವಾಸಿಗಳು ಯೆಬೂಸಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದಾವೀದನೂ ಎಲ್ಲಾ ಇಸ್ರೇಲರೂ ಜೆರುಸಲೇಮಿಗೆ ಹೊರಟರು. ಆ ಕಾಲದಲ್ಲಿ ಜೆರುಸಲೇಮನ್ನು ಯೆಬೂಸ್ ಎಂದು ಕರೆಯುತ್ತಿದ್ದರು. ಯಾಕೆಂದರೆ ಜೆರುಸಲೇಮ್ ಪಟ್ಟಣದಲ್ಲಿ ಯೆಬೂಸಿಯರು ವಾಸಿಸುತ್ತಿದ್ದರು. ಆ ಪಟ್ಟಣದಲ್ಲಿದ್ದ ಜನರು ದಾವೀದನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದಾವೀದನೂ, ಸಮಸ್ತ ಇಸ್ರಾಯೇಲರೂ ಯೆಬೂಸಿಯರ ವಿರುದ್ಧವಾಗಿ ಯೆರೂಸಲೇಮಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:4
10 ತಿಳಿವುಗಳ ಹೋಲಿಕೆ  

ಯೆರೂಸಲೇಮಿನಲ್ಲಿದ್ದ ಯೆಬೂಸಿಯರನ್ನು ಬೆನ್ಯಾಮೀನ್ಯರು ಹೊರಡಿಸಿಬಿಡಲಿಲ್ಲ. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇಮಿನಲ್ಲಿಯೇ ವಾಸವಾಗಿದ್ದಾರೆ.


ಯೆಬೂಸಿಯರು ದಾವೀದನಿಗೆ, “ನೀನು ಒಳಗೆ ಬರಲು ಸಾಧ್ಯವಿಲ್ಲ” ಎಂದು ಹೇಳಿದರು. ಆದರೂ ಅವನು ದಾವೀದನಗರವೆನಿಸಿಕೊಳ್ಳುವ ಚೀಯೋನ್ ಕೋಟೆಯನ್ನು ಸ್ವಾಧೀನಮಾಡಿಕೊಂಡನು.


ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಯೆರೂಸಲೇಮಿನಲ್ಲೇ ವಾಸವಾಗಿದ್ದಾರೆ.


ಬೆನ್ ಹಿನ್ನೋಮ್ ಕಣಿವೆಗೆ ಹೋಗುತ್ತದೆ. ಅಲ್ಲಿಂದ ಅದು ಯೆರೂಸಲೇಮ್ ಪಟ್ಟಣವು ಕಟ್ಟಲ್ಪಟ್ಟಿರುವ ಯೆಬೂಸಿಯರ ಬೆಟ್ಟದ ದಕ್ಷಿಣ ಮಾರ್ಗವಾಗಿ ಹಿನ್ನೋಮ್ ಕಣಿವೆಯ ಪಶ್ಚಿಮದಲ್ಲಿರುವ ರೆಫಾಯೀಮ್ ಕಣಿವೆಯ ಉತ್ತರದಲ್ಲಿರುವ ಬೆಟ್ಟದ ತುದಿಗೆ ಹೋಗುತ್ತದೆ.


ಅಮೋರಿಯರೂ, ಕಾನಾನ್ಯರೂ, ಗಿರ್ಗಾಷಿಯರೂ, ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ,” ಎಂದು ವಾಗ್ದಾನ ಮಾಡಿದನು.


ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು ಇವೇ. ಬೆನ್ಯಾಮೀನ ಗೋತ್ರಗಳಿಗೆ ದೊರಕಿದ ಸ್ವತ್ತು ಇವೇ.


ಐಗುಪ್ತ ದೇಶದಲ್ಲಿ ನಿಮಗುಂಟಾದ ದುರವಸ್ಥೆಯಿಂದ ನಿಮ್ಮನ್ನು ಬಿಡಿಸಿ, ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಹಿವ್ವಿಯರೂ, ಯೆಬೂಸಿಯರೂ, ವಾಸವಾಗಿರುವ ದೇಶಕ್ಕೆ ಬರಮಾಡಬೇಕೆಂದು ನಿರ್ಣಯಿಸಿದ್ದೇನೆ” ಎಂಬುದಾಗಿ ಅವರಿಗೆ ಹೇಳು.


ಇದಲ್ಲದೆ ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು