1 ಪೂರ್ವಕಾಲ ವೃತ್ತಾಂತ 12:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ನೀವು ಸ್ನೇಹಭಾವದಿಂದ ಸಹಾಯ ಮಾಡುವುದಕ್ಕಾಗಿ ನನ್ನ ಬಳಿಗೆ ಬಂದಿರುವುದಾದರೆ ನಿಮ್ಮೊಡನೆ ನನಗೆ ಐಕ್ಯಭಾವವಿರುವುದು. ನಿರಪರಾಧಿಯಾದ ನನ್ನನ್ನು ನನ್ನ ವಿರೋಧಿಗಳಿಗೆ ಒಪ್ಪಿಸುವ ಕುಯುಕ್ತಿಯಿಂದ ಬಂದಿರುವುದಾದರೆ ನಮ್ಮ ಪೂರ್ವಿಕರ ದೇವರು ನಿಮ್ಮನ್ನು ನೋಡಿ ದಂಡಿಸಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದಾವೀದನು ಅವರನ್ನು ಎದುರುಗೊಂಡು “ಸ್ನೇಹಿತರಂತೆ ನನಗೆ ಸಹಾಯ ಮಾಡಲು ಬಂದಿದ್ದರೆ ನಿಮಗೆ ಇಲ್ಲಿ ಸ್ವಾಗತ. ನಮ್ಮೊಂದಿಗೆ ಸೇರಿಕೊಳ್ಳಿ, ನಾನು ನಿಮಗೆ ಯಾವ ತೊಂದರೆಯನ್ನು ಕೊಟ್ಟಿಲ್ಲ. ಆದರೆ ನೀವು ನನ್ನನ್ನು ನನ್ನ ವೈರಿಗಳಿಗೆ ಹಿಡಿದುಕೊಡಲು ಬಂದಿದ್ದರೆ ನಮ್ಮ ಪಿತೃಗಳ ದೇವರು ಅದನ್ನು ಬಲ್ಲವರಾಗಿದ್ದು ನಿಮ್ಮನ್ನು ದಂಡಿಸುವರು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನೀವು ಸ್ನೇಹಭಾವದಿಂದ ಸಹಾಯಮಾಡುವದಕ್ಕಾಗಿ ನನ್ನ ಬಳಿಗೆ ಬಂದಿರುವದಾದರೆ ನಿಮ್ಮೊಡನೆ ನನಗೆ ಐಕ್ಯಭಾವವಿರುವದು; ನಿರಪರಾಧಿಯಾದ ನನ್ನನ್ನು ನನ್ನ ವಿರೋಧಿಗಳಿಗೆ ಒಪ್ಪಿಸುವ ಕುಯುಕ್ತಿಯಿಂದ ಬಂದಿರುವದಾದರೆ ನಮ್ಮ ಪಿತೃಗಳ ದೇವರು ನಿಮ್ಮನ್ನು ನೋಡಿ ದಂಡಿಸಲಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅವರನ್ನು ಎದುರುಗೊಳ್ಳಲು ದಾವೀದನು ಹೊರಬಂದು, “ನೀವು ಸಮಾಧಾನದಿಂದ ನನಗೆ ಸಹಾಯ ಮಾಡಲು ಬಂದಿದ್ದರೆ ನಿಮ್ಮನ್ನು ಸ್ವಾಗತಿಸುತ್ತೇನೆ. ಆದರೆ ನೀವು ನನ್ನ ಮೇಲೆ ಹೊಂಚುಹಾಕಲು ಬಂದಿರುವುದಾದರೆ ನಾನು ನಿರಪರಾಧಿಯಾಗಿರುವ ಕಾರಣ ನಮ್ಮ ಪೂರ್ವಿಕರ ದೇವರು ನಿಮ್ಮನ್ನು ಶಿಕ್ಷಿಸಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ದಾವೀದನು ಅವರನ್ನು ಎದುರುಗೊಳ್ಳಲು ಹೊರಟುಹೋಗಿ ಅವರಿಗೆ ಉತ್ತರವಾಗಿ, “ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ, ನನ್ನ ಹೃದಯವು ನಿಮ್ಮ ಸಂಗಡ ಒಂದಾಗಿರುವುದು. ಆದರೆ ದೋಷವು ನನ್ನ ಕೈಯಲ್ಲಿ ಇಲ್ಲದಿರುವಾಗ, ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ, ನಮ್ಮ ಪಿತೃಗಳ ದೇವರು ನೋಡಿ ನ್ಯಾಯತೀರಿಸಲಿ,” ಎಂದನು. ಅಧ್ಯಾಯವನ್ನು ನೋಡಿ |
ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ, ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿ, “ನಿನ್ನ ವಿಷಯದಲ್ಲಿ, ನನ್ನ ಹೃದಯವು ಯಥಾರ್ಥವಾಗಿರುವಂತೆ ನಿನ್ನ ಹೃದಯವು ಯಥಾರ್ಥವಾಗಿರುವುದೋ?” ಎಂದು ಕೇಳಿದನು. ಅವನು, “ಹೌದು” ಎಂದು ಉತ್ತರ ಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಯನ್ನು ಕೊಡು” ಎನ್ನಲು ಅವನು ತನ್ನ ಕೈಯನ್ನು ಕೊಟ್ಟನು. ಯೇಹುವು ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.
ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ, “ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯವನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು.