1 ಪೂರ್ವಕಾಲ ವೃತ್ತಾಂತ 12:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ, “ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯವನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ‘ಮೂವತ್ತು ಪ್ರಮುಖ’ರ ಪಡೆಯಲ್ಲಿ ಮುಖ್ಯಸ್ಥನಾದ ಅಮಾಸೈ ಆತ್ಮಾವೇಶವುಳ್ಳವನಾಗಿ ಹೀಗೆ ಕೂಗಿ ಹೇಳಿದನು: “ಜೆಸ್ಸೆಯ ಮಗ ದಾವೀದನಿಗೆ ಶುಭವಾಗಲಿ! ನಾವೆಲ್ಲರು ನಿಮ್ಮವರು; ನಿಮಗೂ ನಿಮ್ಮ ಸಹಾಯಕರಿಗೂ ಶುಭವಾಗಲಿ! ದೇವರು ನಿಮಗೆ ಜಯಪ್ರದರಾಗಿದ್ದಾರೆ.” ದಾವೀದ ಅವರನ್ನು ಸ್ವಾಗತಿಸಿ ತನ್ನ ಸೈನ್ಯದಲ್ಲಿ ಮುಖ್ಯಾಧಿಕಾರಿಗಳನ್ನಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಗ ಮೂವತ್ತು ಮಂದಿಯಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ - ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯಪ್ರಧನಾಗಿದ್ದಾನೆ ಎಂದು ನುಡಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇವಿುಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಮೂವತ್ತು ಮಂದಿ ಶೂರರ ನಾಯಕನಾದ ಅಮಾಸೈಯು ಆತ್ಮನಿಂದ ತುಂಬಿದವನಾಗಿ ಹೇಳಿದ್ದೇನೆಂದರೆ: “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನಗೆ ಸೇರಿದವರು; ನಿನಗೆ ಸಮಾಧಾನ ಕೋರುವವರು; ನಿನಗೆ ಸಹಾಯ ಮಾಡುವವರಿಗೆ ಸಮಾಧಾನ ಕೋರುವೆವು; ಯಾಕೆಂದರೆ ನಿನ್ನ ದೇವರು ನಿನಗೆ ಸಹಾಯಮಾಡುತ್ತಿದ್ದಾನೆ.” ದಾವೀದನು ಇವರನ್ನು ಸ್ವಾಗತಿಸಿ ತನ್ನ ಸೈನ್ಯಾಧಿಪತಿಗಳನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಆತ್ಮವು ಮೂವತ್ತು ಮಂದಿ ಅಧಿಪತಿಗಳ ಮುಖ್ಯಸ್ಥನಾದ ಅಮಾಸೈಯ ಮೇಲೆ ಬಂತು. ಅವನು ಹೀಗೆ ಹೇಳಿದನು, “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನ್ನ ಜೊತೆಯಿದ್ದೇವೆ; ಜಯವು ನಿನ್ನದೇ, ನಿನಗೆ ಸಹಾಯ ಮಾಡುವವರಿಗೆ ಜಯವು; ಏಕೆಂದರೆ ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾರೆ.” ಆಗ ದಾವೀದನು ಅವರನ್ನು ಅಂಗೀಕರಿಸಿ, ಅವರನ್ನು ದಂಡಿನ ಅಧಿಪತಿಗಳಾಗಿ ಮಾಡಿದನು. ಅಧ್ಯಾಯವನ್ನು ನೋಡಿ |
ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ, ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿ, “ನಿನ್ನ ವಿಷಯದಲ್ಲಿ, ನನ್ನ ಹೃದಯವು ಯಥಾರ್ಥವಾಗಿರುವಂತೆ ನಿನ್ನ ಹೃದಯವು ಯಥಾರ್ಥವಾಗಿರುವುದೋ?” ಎಂದು ಕೇಳಿದನು. ಅವನು, “ಹೌದು” ಎಂದು ಉತ್ತರ ಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಯನ್ನು ಕೊಡು” ಎನ್ನಲು ಅವನು ತನ್ನ ಕೈಯನ್ನು ಕೊಟ್ಟನು. ಯೇಹುವು ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.