Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸೌಲನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗುವ ಫಿಲಿಷ್ಟಿಯರ ಜೊತೆಯಲ್ಲಿ ದಾವೀದನೂ ಹೋಗುತ್ತಿರುವಾಗ ಕೆಲವು ಜನ ಮನಸ್ಸೆಯವರು ಬಂದು ಅವನೊಡನೆ ಸೇರಿಕೊಂಡರು. ದಾವೀದನು ನಿಜವಾಗಿ ಫಿಲಿಷ್ಟಿಯರಿಗೆ ಸಹಾಯಕನು ಆಗಿರಲಾರನೆಂದು, ಅವರ ಪ್ರಭುಗಳು, “ಇವನು ನಮ್ಮ ತಲೆಗಳನ್ನು ಕಡಿದು ತಿರುಗಿ ತನ್ನ ಯಜಮಾನನಾದ ಸೌಲನೊಂದಿಗೆ ಸೇರಿಕೊಂಡಾನು” ಎಂಬುದಾಗಿ ಆಲೋಚಿಸಿ ಅವನನ್ನು ಹಿಂದಕ್ಕೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅರಸ ಸೌಲನಿಗೆ ವಿರುದ್ಧ ಯುದ್ಧಮಾಡಲು ಫಿಲಿಷ್ಟಿಯರೊಂದಿಗೆ ಹೋಗುತ್ತಿದ್ದಾಗ ಮನಸ್ಸೆ ಗೋತ್ರದ ಕೆಲವು ಜನ ಸೈನಿಕರು ಬಂದು ದಾವೀದನ ಪಕ್ಷದಲ್ಲಿ ಸೇರಿಕೊಂಡರು. ದಾವೀದನು ನಿಜವಾಗಿಯೂ ಫಿಲಿಷ್ಟಿಯರಿಗೆ ಸಹಾಯಮಾಡಲಿಲ್ಲ. ತನ್ನ ಮೊದಲಿನ ಯಜಮಾನ ಸೌಲನಿಗೆ ತಮ್ಮನ್ನು ಹಿಡಿದುಕೊಡಬಹುದೆಂಬ ಭಯ ಫಿಲಿಷ್ಟಿಯ ರಾಜರುಗಳಿಗೆ ಇದ್ದುದರಿಂದ ಅವರು ಅವನನ್ನು ಚಿಕ್ಲಗಿಗೆ ಹಿಂದಕ್ಕೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಸೌಲನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗುವ ಫಿಲಿಷ್ಟಿಯರ ಜೊತೆಯಲ್ಲಿ ದಾವೀದನೂ ಹೋಗುತ್ತಿರುವಾಗ ಕೆಲವು ಮಂದಿ ಮನಸ್ಸೆಯವರು ಬಂದು ಅವನನ್ನು ಕೂಡಿಕೊಂಡರು. ದಾವೀದನು ನಿಜವಾಗಿ ಫಿಲಿಷ್ಟಿಯರಿಗೆ ಸಹಾಯಕನಾಗಲಿಲ್ಲ; ಅವರ ಪ್ರಭುಗಳು - ಇವನು ನಮ್ಮ ತಲೆಗಳನ್ನು ಕಡಿದು ತಿರಿಗಿ ತನ್ನ ಯಜಮಾನನಾದ ಸೌಲನೊಂದಿಗೆ ಸೇರಿಕೊಂಡಾನು ಎಂಬದಾಗಿ ಆಲೋಚಿಸಿ ಅವನನ್ನು ಹಿಂದಕ್ಕೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮನಸ್ಸೆಕುಲದಿಂದಲೂ ಕೆಲವರು ದಾವೀದನನ್ನು ಸೇರಿಕೊಂಡರು. ದಾವೀದನು ಸೌಲನೊಂದಿಗೆ ಯುದ್ಧಮಾಡಲು ಫಿಲಿಷ್ಟಿಯರೊಂದಿಗೆ ಸೇರಿಕೊಂಡಾಗ ಮನಸ್ಸೆಯವರು ದಾವೀದನ ಬಳಿಗೆ ಬಂದರು. ದಾವೀದನೂ ಅವನ ಜನರೂ ನಿಜವಾಗಿಯೂ ಫಿಲಿಷ್ಟಿಯರಿಗೆ ಸಹಾಯಮಾಡಿರಲಿಲ್ಲ. ಫಿಲಿಷ್ಟಿಯ ಪ್ರಧಾನರು ದಾವೀದನು ಯುದ್ಧಕ್ಕೆ ಬರಬಾರದೆಂದು ಹೇಳಿ ಹಿಂದಕ್ಕೆ ಕಳುಹಿಸಿದರು. “ಇವನು ತನ್ನ ಅರಸನೊಟ್ಟಿಗೆ ಸೇರಿದರೆ ನಮ್ಮ ರುಂಡಗಳೇ ಕತ್ತರಿಸಲ್ಪಡುವವು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದಾವೀದನು ಸೌಲನ ಮೇಲೆ ಯುದ್ಧಮಾಡಲು ಫಿಲಿಷ್ಟಿಯರ ಸಂಗಡ ಬರುತ್ತಿರುವಾಗ, ಮನಸ್ಸೆಯವರಲ್ಲಿ ಕೆಲವರು ದಾವೀದನ ಕಡೆಗೆ ಸೇರಿದರು. ಆದರೆ ಇವರು ಅವರಿಗೆ ಸಹಾಯ ಕೊಡದೆ ಇದ್ದರು. ಏಕೆಂದರೆ ಫಿಲಿಷ್ಟಿಯರ ಅಧಿಪತಿಗಳು ಯೋಚನೆ ಮಾಡಿದ ತರುವಾಯ, “ಅವನು ನಮಗೆ ಮೋಸಮಾಡಿ, ತನ್ನ ಯಜಮಾನನಾದ ಸೌಲನ ಕಡೆಗೆ ಸೇರಿದರೆ, ನಮ್ಮ ತಲೆಗಳು ಬಿದ್ದು ಹೋಗುವುವು,” ಎಂದು ಹೇಳಿ ಅವನನ್ನು ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:19
7 ತಿಳಿವುಗಳ ಹೋಲಿಕೆ  

ಆದುದ್ದರಿಂದ ನೀನೂ, ನಿನ್ನ ಸಂಗಡ ಬಂದ ನಿನ್ನ ಒಡೆಯನ ಸೇವಕರೂ, ನಾಳೆ ಬೆಳಿಗ್ಗೆ ಎದ್ದು ಹೊತ್ತು ಮೂಡಿದ ಕೂಡಲೆ ಹಿಂದಿರುಗಿ ಹೋಗಿರಿ” ಎಂದು ಹೇಳಿದನು.


ಅವನು ಹಿಂತಿರುಗಿ ಚಿಕ್ಲಗಿಗೆ ಹೋಗುವಾಗ ಮನಸ್ಸೆ ಕುಲದ ಸಹಸ್ರಾಧಿಪತಿಗಳಾದ ಅದ್ನ, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹು ಮತ್ತು ಚಿಲ್ಲೆತೈ ಎಂಬುವರು ಬಂದು ಅವನೊಂದಿಗೆ ಸೇರಿಕೊಂಡರು.


ಅದಕ್ಕೆ ಅವನು, “ನೀವು ಸಮಾಧಾನವಾಗಿರಿ. ನೀವೇನೂ ಭಯಪಡಬೇಡಿರಿ ನಿಮಗೂ ನಿಮ್ಮ ತಂದೆಗೂ ದೇವರಾಗಿರುವಾತನು ನಿಮ್ಮ ಚೀಲಗಳಲ್ಲಿ ಹಣವನ್ನು ಇಟ್ಟಿರಬೇಕು. ನಿಮ್ಮ ಹಣವು ನನಗೆ ಮುಟ್ಟಿತು” ಎಂದು ಹೇಳಿ, ಅವನು ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದನು.


ಆಗ ಗಿದ್ಯೋನನ ಮೇಲೆ ಯೆಹೋವನ ಆತ್ಮವು ಬಂದಿತ್ತು. ಅವನು ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು.


ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇಸ್ರಾಯೇಲನಾದ ಇತ್ರನು, ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗೈಲ್ ಎಂಬುವಳನ್ನು ಸಂಗಮಿಸಿದ್ದರಿಂದ ಈ ಅಮಾಸನು ಹುಟ್ಟಿದನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ಚೀಯೋನಿಗೆ ಅವಮಾನವಾಯಿತಲ್ಲಾ ಎಂದು ಬಹಳವಾಗಿ ಕುದಿಯುತ್ತೇನೆ. ಅತಿರೋಷಗೊಂಡು ಕುದಿಯುತ್ತೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು