1 ಪೂರ್ವಕಾಲ ವೃತ್ತಾಂತ 12:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೆಹೋವನ ಆಜ್ಞೆಯಂತೆ ಸೌಲನ ರಾಜ್ಯವನ್ನು ದಾವೀದನಿಗೆ ಒಪ್ಪಿಸುವುದಕ್ಕೋಸ್ಕರ ಹೆಬ್ರೋನಿನಲ್ಲಿದ್ದ ಅವನ ಬಳಿಗೆ ಗುಂಪುಗುಂಪುಗಳಾಗಿ ಬಂದ ಯುದ್ಧಸನ್ನದ್ಧರಾಗಿದ್ದವರ ಲೆಕ್ಕ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸರ್ವೇಶ್ವರಸ್ವಾಮಿ ವಾಗ್ದಾನ ಮಾಡಿದಂತೆ ಸೌಲನಿಗೆ ಬದಲಾಗಿ ದಾವೀದನನ್ನು ಅರಸನನ್ನಾಗಿ ಮಾಡಲು, ಅನೇಕ ಸಿದ್ಧಸೈನಿಕರು ಹೆಬ್ರೋನಿಗೆ ಬಂದು ದಾವೀದನ ಸೈನ್ಯದಲ್ಲಿ ಸೇರಿದರು. ಅವರ ಸಂಖ್ಯೆಗಳು ಈ ಕೆಳಕಂಡಂತಿವೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯೆಹೋವನ ಆಜ್ಞೆಯಂತೆ ಸೌಲನ ರಾಜ್ಯವನ್ನು ದಾವೀದನಿಗೆ ಒಪ್ಪಿಸುವದಕ್ಕೋಸ್ಕರ ಹೆಬ್ರೋನಿನಲ್ಲಿದ್ದ ಅವನ ಬಳಿಗೆ ಗುಂಪು ಗುಂಪುಗಳಾಗಿ ಬಂದ ಯುದ್ಧಸನ್ನದ್ಧರ ಲೆಕ್ಕ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ದಾವೀದನು ಹೆಬ್ರೋನಿನಲ್ಲಿದ್ದಾಗ ಯುದ್ಧಸನ್ನದ್ಧರಾಗಿದ್ದವರು ದಾವೀದನಿಗೆ ಸೌಲನ ರಾಜ್ಯವನ್ನು ಕೊಡಲು ಬಂದರು. ಇದು ಯೆಹೋವನು ಮುಂತಿಳಿಸಿದಂತೆ ಆಯಿತು. ಅವರ ಸಂಖ್ಯೆಯು ಹೀಗಿದೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಯೆಹೋವ ದೇವರ ವಾಕ್ಯದ ಪ್ರಕಾರ ಸೌಲನ ರಾಜ್ಯವನ್ನು ದಾವೀದನ ಕಡೆಗೆ ತಿರುಗಿಸುವುದಕ್ಕೆ, ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಯುದ್ಧಕ್ಕೆ ಆಯುಧಗಳನ್ನು ಧರಿಸಿಕೊಂಡು ಬಂದ ದಂಡುಗಳ ಸಂಖ್ಯೆ ಇದು: ಅಧ್ಯಾಯವನ್ನು ನೋಡಿ |
ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.