Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಇಸ್ಸಾಕಾರ್ಯರಿಂದ ಇನ್ನೂರು ಮುಖ್ಯಸ್ಥರು. ಇವರು ಸಮಯೋಚಿತಜ್ಞಾನವುಳ್ಳವರಾಗಿ ಇಸ್ರಾಯೇಲರು ಮಾಡತಕ್ಕದ್ದನ್ನು ಅರಿತವರಾಗಿದ್ದರು. ಇವರ ಸಹೋದರರೆಲ್ಲರೂ ಇವರ ಆಜ್ಞೆಗೆ ಬದ್ಧರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಇಸ್ಸಾಕಾರ ಗೋತ್ರದಿಂದ: 200 ಜನ ನಾಯಕರು ಹಾಗೂ ಅವರೊಂದಿಗಿದ್ದ ಸೈನಿಕರು; (ಇಸ್ರಯೇಲರು ಏನು ಮಾಡಬೇಕು, ಅದನ್ನು ಮಾಡಲು ಯಾವುದು ಉತ್ತಮ ಸಮಯ ಎಂಬುದನ್ನು ಈ ನಾಯಕರು ತಿಳಿದಿದ್ದರು);

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಇಸ್ಸಾಕಾರ್ಯರಿಂದ ಇನ್ನೂರು ಮಂದಿ ಮುಖ್ಯಸ್ಥರು; ಇವರು ಸಮಯೋಚಿತ ಜ್ಞಾನವುಳ್ಳವರಾಗಿ ಇಸ್ರಾಯೇಲ್ಯರು ಮಾಡತಕ್ಕದ್ದನ್ನು ಅರಿತವರು; ಇವರ ಸಹೋದರರೆಲ್ಲರೂ ಇವರ ಆಜ್ಞೆಗೆ ಒಳಗಾಗಿದ್ದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಇಸ್ಸಾಕಾರ್ ಕುಲದಿಂದ ಇನ್ನೂರು ಮಂದಿ ಜ್ಞಾನಿಗಳು ಬಂದಿದ್ದರು. ಇವರು ಸಮಯೋಚಿತ ಜ್ಞಾನವುಳ್ಳವರಾಗಿದ್ದರು ಮತ್ತು ಇಸ್ರೇಲರಿಗೆ ಯೋಗ್ಯವಾದದ್ದನ್ನು ತಿಳಿದವರಾಗಿದ್ದರು; ಇವರ ಸಂಬಂಧಿಕರೂ ಇವರೊಂದಿಗಿದ್ದರು ಮತ್ತು ಇವರ ಆಜ್ಞೆಗೆ ಒಳಪಟ್ಟವರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲರು ಮಾಡತಕ್ಕದ್ದು ಯಾವುದೆಂದು ತಿಳಿಯತಕ್ಕಂಥ ಕಾಲಗಳನ್ನು ಪರೀಕ್ಷಿಸಿ ತಿಳಿದವರು ಬಂದರು. ಅವರ ಯಜಮಾನರು 200 ಮಂದಿಯಾಗಿದ್ದರು. ಅವರ ಸಹೋದರರೆಲ್ಲರು ಇವರ ಆಜ್ಞಾಧೀನರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:32
15 ತಿಳಿವುಗಳ ಹೋಲಿಕೆ  

ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.


ವಿಧಿನಾಯ್ಯಗಳನ್ನು ಬಲ್ಲವರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು.


ಜ್ಞಾನವೂ, ತಿಳಿವಳಿಕೆಯೂ, ರಕ್ಷಣಾಕಾರ್ಯದ ಸಮೃದ್ಧಿಯೂ ಇರುವುದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವುದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ ನಿಧಿಯಾಗುವುದು.


ಬೆಳಗ್ಗೆ, ‘ಆಕಾಶವು ಮೋಡ ಕವಿದುಕೊಂಡು ಕೆಂಪಾಗಿದ್ದರೆ ಈಹೊತ್ತು ಗಾಳಿ ಮಳೆ ಬರುತ್ತದೆ’ ಅನ್ನುತ್ತೀರಿ. ಆಕಾಶದಲ್ಲಿ ಕಾಣುವ ಸೂಚನೆಗಳನ್ನು ತಿಳಿದುಕೊಳ್ಳಬಲ್ಲವರಾಗಿದ್ದೀರಿ, ಆದರೆ ಈ ಕಾಲದ ಸೂಚನೆಗಳನ್ನು ತಿಳಿದುಕೊಳ್ಳಲು ನಿಮಗೆ ಸಾಧ್ಯವಿಲ್ಲವೋ?


ಹತ್ತು ಮಂದಿ ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ಬಲಕ್ಕಿಂತಲೂ ಜ್ಞಾನಿಗೆ ಜ್ಞಾನದಿಂದ ಉಂಟಾಗುವ ಬಲವು ಹೆಚ್ಚು.


ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, ಮೂಢರ ಮೂರ್ಖತನ ಮೋಸಕರ.


ಜ್ಞಾನಿಗೆ ತ್ರಾಣ, ಬಲ್ಲವನಿಗೆ ಬಹು ಬಲ.


ಇಸ್ಸಾಕಾರನು ಕುರಿಯ ಹಟ್ಟಿಗಳ ನಡುವೆ ಮಲಗಿಕೊಂಡಿರುವ ಬಲವುಳ್ಳ ಕತ್ತೆಯಂತಿರುವನು.


ಯೆಹೋವನ ನಾಮದಲ್ಲಿ ಭಯಭಕ್ತಿಯಿಡುವುದು ಸುಜ್ಞಾನವೇ, ಎಂದು ಯೆರೂಸಲೇಮಿನ ಪಟ್ಟಣಕ್ಕೆ ಎಚ್ಚರಿಕೆ ನೀಡುವ ಯೆಹೋವನ ನುಡಿ. ಬೀಸಿ ಬರುವ ಶಿಕ್ಷೆಯ ದಂಡಕ್ಕೆ ಎಚ್ಚರವಾಗಿರಿ. ಅದನ್ನು ನೇಮಿಸಿದವನು ಯಾರೆಂದು ತಿಳಿದುಕೊಳ್ಳಿರಿ.


ಯುದ್ಧದ ಆಯುಧಗಳಿಗಿಂತಲೂ ಜ್ಞಾನವೇ ಉತ್ತಮ. ಆದರೆ ಒಬ್ಬ ಪಾಪಿಯು ಬಹಳ ಶುಭವನ್ನು ಹಾಳುಮಾಡುತ್ತಾನೆ.


ಮನಸ್ಸೆಯ ಅರ್ಧ ಕುಲದಿಂದ ದಾವೀದನ ಪಟ್ಟಾಭಿಷೇಕಕ್ಕೆ ಹೋಗಬೇಕೆಂದು ಹೆಸರುಹೆಸರಾಗಿ ನೇಮಿಸಲ್ಪಟ್ಟವರು ಹದಿನೆಂಟು ಸಾವಿರ ಸೈನಿಕರು.


ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು. ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು (ಬಲವುಳ್ಳವು); ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೊಟ್ಯಾಂತರ ಜನರೂ ಮನಸ್ಸೆ ಕುಲದ ಲಕ್ಷಾಂತರ ಮಂದಿಯೂ ಇಂಥವರೇ” ಎಂದು ಹೇಳಿದನು.


ಇವರ ಹೆಂಡತಿ ಮಕ್ಕಳೂ, ಇವರ ಗೋತ್ರ ಕುಟುಂಬಗಳಿಗೆ ಸೇರುವ ಯುದ್ಧಭಟರು ಮತ್ತು ಹೆಂಡತಿ, ಮಕ್ಕಳು ಒಟ್ಟು ಮೂವತ್ತಾರು ಸಾವಿರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು