1 ಪೂರ್ವಕಾಲ ವೃತ್ತಾಂತ 12:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಇದಲ್ಲದೆ ಇಸ್ಸಾಕಾರ್, ಜೆಬುಲೂನ್, ನಫ್ತಾಲಿ ಮೊದಲುಗೊಂಡು ಎಲ್ಲಾ ಸಮೀಪ ಪ್ರಾಂತ್ಯಗಳವರು ಎತ್ತು, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಆಹಾರ ಪದಾರ್ಥಗಳನ್ನು ಹೊತ್ತುಕೊಂಡು ಬಂದರು. ಅವರು ತರತರದ ರೊಟ್ಟಿ, ಅಂಜೂರಹಣ್ಣಿನ ಉಂಡೆ, ಒಣಗಿದ ದ್ರಾಕ್ಷಿಗೊಂಚಲು, ದ್ರಾಕ್ಷಾರಸ, ಎಣ್ಣೆ, ಅನೇಕ ದನಕುರಿಗಳು ಇವುಗಳನ್ನು ತಂದರು. ಇಸ್ರಾಯೇಲರೊಳಗೆ ಮಹಾ ಸಂಭ್ರಮ ಸಂತೋಷವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ದೂರದ ಉತ್ತರದಲ್ಲಿದ್ದ ಇಸ್ಸಾಕಾರ್, ಜೆಬುಲೂನ್, ನಫ್ತಾಲಿ ಗೋತ್ರಗಳ ಜನರು ತಮ್ಮ ಎತ್ತು, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ರೊಟ್ಟಿ, ಅಂಜೂರ, ಒಣದ್ರಾಕ್ಷಿ, ದ್ರಾಕ್ಷಾರಸ, ಎಣ್ಣೆಗಳನ್ನು ಹೊತ್ತುತಂದರು. ಭೋಜನಕ್ಕೆ ಕುರಿದನಗಳನ್ನು ಸಹ ತೆಗೆದುಕೊಂಡು ಬಂದರು. ನಾಡಿನಲ್ಲೆಲ್ಲಾ ಸಂತೋಷ ಸಂಭ್ರಮವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಇದಲ್ಲದೆ ಇಸ್ಸಾಕಾರ್ ಜೆಬುಲೂನ್ ನಫ್ತಾಲಿ ಮೊದಲುಗೊಂಡು ಎಲ್ಲಾ ಸಮೀಪ ಪ್ರಾಂತಗಳವರು ಎತ್ತು, ಕತ್ತೆ, ಹೇಸರಕತ್ತೆ, ಒಂಟೆ ಇವುಗಳ ಮೇಲೆ ಆಹಾರಪದಾರ್ಥಗಳನ್ನು ಹೇರಿಕೊಂಡು ಬಂದರು. ಅವರು ತಂದವುಗಳಾವವಂದರೆ - ತರತರದ ರೊಟ್ಟಿ, ಅಂಜೂರ ಹಣ್ಣಿನ ಉಂಡೆ, ಒಣಗಿದ ದ್ರಾಕ್ಷೇಗೊಂಚಲು, ದ್ರಾಕ್ಷಾರಸ, ಎಣ್ಣೆ, ಅನೇಕ ದನಕುರಿಗಳು ಇವೇ. ಇಸ್ರಾಯೇಲ್ಯರೊಳಗೆ ಮಹಾ ಸಂತೋಷವಿತ್ತಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಇದಲ್ಲದೆ ಇವರ ನೆರೆಹೊರೆಯವರಾದ ಇಸ್ಸಾಕಾರ್, ನಫ್ತಾಲಿ, ಜೆಬುಲೂನ್ ಕುಲದವರು ಸಹ ಅಡಿಗೆ ಮಾಡಿಸಿ ಒಂಟೆಗಳ, ಹೇಸರಕತ್ತೆಗಳ, ಎತ್ತುಗಳ ಮತ್ತು ದನಕರುಗಳ ಮೇಲೆ ಹೇರಿಕೊಂಡು ಬಂದು ಒದಗಿಸಿದರು. ಅವರು ಬೇಕಾದಷ್ಟು ಗೋಧಿಹಿಟ್ಟನ್ನು, ಒಣಅಂಜೂರವನ್ನು, ದ್ರಾಕ್ಷಿಯನ್ನು, ದ್ರಾಕ್ಷಾರಸವನ್ನು, ಎಣ್ಣೆಯನ್ನು, ದನಕರುಗಳನ್ನು ಮತ್ತು ಕುರಿಗಳನ್ನು ಒದಗಿಸಿದರು. ಇಸ್ರೇಲರೆಲ್ಲರೂ ಹರ್ಷದಿಂದ ತುಂಬಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಇದಲ್ಲದೆ ಅವರ ನೆರೆಯವನಾದ ಇಸ್ಸಾಕಾರ್, ಜೆಬುಲೂನ್, ನಫ್ತಾಲಿಯರು ಮೊದಲುಗೊಂಡು ಎಲ್ಲರೂ ತಮ್ಮ ಎತ್ತು, ಕತ್ತೆ, ಹೇಸರಗತ್ತೆ ಮತ್ತು ಒಂಟೆಗಳ ಮೇಲೆಯೂ ರೊಟ್ಟಿಗಳನ್ನೂ ಆಹಾರವನ್ನೂ, ಹಿಟ್ಟನ್ನೂ ಅಂಜೂರದ ಉಂಡೆಗಳನ್ನೂ ಒಣಗಿದ ದ್ರಾಕ್ಷಿ ಗೊಂಚಲುಗಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ದನಕುರಿಗಳನ್ನೂ ಬಹಳವಾಗಿ ತಂದರು. ಇಸ್ರಾಯೇಲಿನಲ್ಲಿ ಸಂತೋಷವಿತ್ತು. ಅಧ್ಯಾಯವನ್ನು ನೋಡಿ |