Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 13:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮಂಜೂಷವನ್ನು ದಾವೀದ ನಗರಕ್ಕೆ ತಾರದೇ, ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದನ್ನು ಜೆರುಸಲೇಮಿಗೆ ತನ್ನೊಂದಿಗೆ ತೆಗೆದುಕೊಂಡು ಹೋಗಲಿಲ್ಲ. ಗತ್ ಊರಿನ ನಿವಾಸಿ ಓಬೇದೆದೋಮನ ಮನೆಯಲ್ಲಿ ಅದನ್ನು ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದನ್ನು ದಾವೀದನಗರಕ್ಕೆ ತಾರದೆ ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದಾವೀದನು ದೇವರಿಗೆ ಭಯಪಟ್ಟನು. ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಓಬೇದೆದೋಮನ ಮನೆಯಲ್ಲಿಯೇ ಬಿಟ್ಟನು. ಓಬೇದೆದೋಮನು ಗತ್ ಊರಿನವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹಾಗೆಯೇ ದಾವೀದನು ಮಂಜೂಷವನ್ನು ದಾವೀದನ ಪಟ್ಟಣಕ್ಕೆ ತನ್ನ ಬಳಿಗೆ ಸೇರಿಸಿಕೊಳ್ಳದೆ, ಗಿತ್ತೀಯನಾದ ಓಬೇದ್ ಏದೋಮನ ಮನೆಗೆ ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 13:13
9 ತಿಳಿವುಗಳ ಹೋಲಿಕೆ  

ಓಬೇದೆದೋಮನ ಮಕ್ಕಳಲ್ಲಿ ಶೆಮಾಯನು ಚೊಚ್ಚಲನು, ಯೆಹೋಜಾಬಾದನು ಎರಡನೆಯವನು. ಯೋವಾಹನು ಮೂರನೆಯವನು, ಸಾಕಾರನು ನಾಲ್ಕನೆಯವನು, ನೆತನೇಲನು ಐದನೆಯವನು,


ತಮ್ಮ ಸಹೋದರರೊಳಗೆ ಎರಡನೆಯ ದರ್ಜೆಯವರಾದ ಜೆಕರ್ಯ, ಬೇನ್, ಯಾಜೀಯೇಲ್ ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ, ಮಾಸೇಯ, ಮತ್ತಿತ್ಯ ಎಲೀಫೆಲೇಹು, ಮಿಕ್ನೇಯ ದ್ವಾರಪಾಲಕರಾದ ಓಬೇದೆದೋಮ ಮತ್ತು ಯೆಗೀಯೇಲ್ ಇವರನ್ನು ನೇಮಿಸಿದನು.


ಇವರೆಲ್ಲರೂ ಓಬೇದೆದೋಮನ ಸಂತಾನದವರು. ಇವರು, ಇವರ ಮಕ್ಕಳು ಸಮರ್ಥರೂ, ಸೇವೆಯಲ್ಲಿ ಗಟ್ಟಿಗರೂ ಆಗಿದ್ದವರೂ. ಇವರೂ ಇವರ ಸಹೋದರರೂ ಕೂಡಿ ಅರವತ್ತೆರಡು ಜನರು.


ಅವರಲ್ಲಿ ಆಸಾಫನು ಪ್ರಧಾನನು. ಜೆಕರ್ಯನು ಎರಡನೆಯವನು. ಯೆಗೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್, ಯೆಗೀಯೇಲ್ ಇವರು ಸ್ವರಮಂಡಲ, ಕಿನ್ನರಿ ಮೊದಲಾದ ವಾದ್ಯಗಳನ್ನು ನುಡಿಸುವವರು, ಆಸಾಫನು ಕೈತಾಳ ಹಾಕುವುದಕ್ಕೆ ನೇಮಿಸಲಾಯಿತು.


ಆದರೆ ಬೇರೋತ್ಯರು ಗಿತ್ತಯಿಮಿಗೆ ಓಡಿಹೋಗಿ, ಇಂದಿನ ವರೆಗೂ ಅಲ್ಲೇ ಪ್ರವಾಸಿಗಳಾಗಿದ್ದಾರೆ.


ಆ ದಿನ ದಾವೀದನು ದೇವರಿಗೆ ಭಯಪಟ್ಟು, “ದೇವರ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ” ಎಂದುಕೊಂಡು


ದಾವೀದನೂ ಇಸ್ರಾಯೇಲ್ಯರ ಹಿರಿಯರೂ ಮತ್ತು ಸಹಸ್ರಾಧಿಪತಿಗಳೂ ಓಬೇದೆದೋಮನ ಮನೆಯಲ್ಲಿದ್ದ ಯೆಹೋವನ ಒಡಂಬಡಿಕೆ ಮಂಜೂಷವನ್ನು ಉತ್ಸಾಹದಿಂದ ತರುತ್ತಿರುವಾಗ,


ಅನಂತರ ದಾವೀದನು ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಆರಿಸಿಕೊಂಡು ಅವರ ಸಂಗಡ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು