Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 13:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ನಮ್ಮ ಬಳಿಗೆ ಕೂಡಿ ಬಂದ ಮೇಲೆ ನಾವು ಸೌಲನ ಕಾಲದಲ್ಲಿ ಅಲಕ್ಷ್ಯಮಾಡಿದ್ದ ನಮ್ಮ ದೇವರ ಮಂಜೂಷವನ್ನು ತೆಗೆದುಕೊಂಡು ಬರೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅನಂತರ ನಾವು ಹೋಗಿ ಅರಸ ಸೌಲ ನಿರ್ಲಕ್ಷಿಸಿದ್ದ ದೇವಮಂಜೂಷವನ್ನು ತೆಗೆದುಕೊಂಡು ಬರೋಣ,” ಎಂದು ಜನರೆಲ್ಲರಿಗೆ ಸಲಹೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ನಮ್ಮ ಬಳಿಗೆ ಕೂಡಿಬಂದ ಮೇಲೆ ನಾವು ಸೌಲನ ಕಾಲದಲ್ಲಿ ಅಲಕ್ಷ್ಯಮಾಡಿದ ನಮ್ಮ ದೇವಮಂಜೂಷವನ್ನು ತೆಗೆದುಕೊಂಡು ಬರೋಣ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾವೆಲ್ಲರೂ ಹೋಗಿ ಒಡಂಬಡಿಕೆಯ ಪೆಟ್ಟಿಗೆಯನ್ನು ಜೆರುಸಲೇಮಿಗೆ ತರೋಣ. ಸೌಲನು ಅರಸನಾಗಿದ್ದಾಗ ನಾವು ಒಡಂಬಡಿಕೆಯ ಪೆಟ್ಟಿಗೆಯ ಬಗ್ಗೆ ಆಸಕ್ತಿವಹಿಸಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಮ್ಮ ದೇವರ ಮಂಜೂಷವನ್ನು ನಮ್ಮ ಬಳಿಗೆ ತಿರುಗಿ ತರಿಸೋಣ. ಸೌಲನ ದಿವಸಗಳಲ್ಲಿ ಅದನ್ನು ವಿಚಾರಿಸಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 13:3
11 ತಿಳಿವುಗಳ ಹೋಲಿಕೆ  

ಅವನು, “ನಾನು ಹೋಗಿ ಆ ಫಿಲಿಷ್ಟಿಯರನ್ನು ಹೊಡೆಯಬಹುದೋ” ಎಂದು ಯೆಹೋವನನ್ನು ಕೇಳಿದನು. ಆತನು ಅವನಿಗೆ, “ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ಊರನ್ನು ರಕ್ಷಿಸು” ಎಂದು ಉತ್ತರ ಕೊಟ್ಟನು.


ನಾನು ಅವನಿಗೋಸ್ಕರ ದೇವರ ಸನ್ನಿಧಿಯಲ್ಲಿ ವಿಚಾರಮಾಡಿದ್ದು ಇದೇ ಮೊದಲನೆಯ ಸಾರಿಯೋ? ಇದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕರ ಮೇಲೆ ಅವನ ಮನೆಯವರ ಮೇಲೆ ಇಂಥ ಮಾತನ್ನು ಹೊರಿಸಬಾರದು. ಈ ವಿಷಯದಲ್ಲಿ ನಿನ್ನ ಸೇವಕನಿಗೆ ಸ್ವಲ್ಪವೂ ಗೊತ್ತಿರಲಿಲ್ಲ” ಎಂದು ಉತ್ತರ ಕೊಟ್ಟನು.


ಅವನು ಇವನಿಗೆ ಯೆಹೋವನ ಚಿತ್ತವನ್ನು ತಿಳಿಸಿ, ಆಹಾರವನ್ನೂ, ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನೂ ಕೊಟ್ಟನು” ಎಂದು ಹೇಳಿದನು.


ಸೌಲನು ತನ್ನ ಸೈನಿಕರನ್ನು, “ಬನ್ನಿರಿ; ನಾವು ಈ ರಾತ್ರಿಯಲ್ಲೇ ಫಿಲಿಷ್ಟಿಯರನ್ನು ಬೆನ್ನಟ್ಟಿ, ಬೆಳಗಾಗುವವರೆಗೆ ಅವರನ್ನು ಸುಲಿದುಕೊಂಡು, ಒಬ್ಬನನ್ನೂ ಉಳಿಸದೆ ಕೊಂದುಹಾಕೋಣ” ಎಂದು ಕರೆದನು. ಅವರು, “ನಿನ್ನ ಇಷ್ಟದಂತೆ ಆಗಲಿ” ಎಂದು ಹೇಳಿದರು. ಆದರೆ ಯಾಜಕನು, “ಇತ್ತ ಬನ್ನಿರಿ; ನಾವು ದೇವರನ್ನು ವಿಚಾರಿಸೋಣ” ಎಂದನು.


ಅನಂತರ ಸೌಲನು ಅಹೀಯನಿಗೆ, “ಏಫೋದನ್ನು ತೆಗೆದುಕೊಂಡು ಬಾ” ಎಂದು ಆಜ್ಞಾಪಿಸಿದನು. ಆ ಕಾಲದಲ್ಲಿ ಇವನು ಇಸ್ರಾಯೇಲರೊಳಗೆ ಏಫೋದನ್ನು ಧರಿಸುತ್ತಿದ್ದನಷ್ಟೆ.


ಇಗೋ, ಅದು ಎಫ್ರಾತದಲ್ಲಿರುತ್ತದೆಂದು ಕೇಳಿದೆವು; ಯಹಾರ್ ಮೈದಾನದಲ್ಲಿ ನಮಗೆ ಸಿಕ್ಕಿತು.


“ನಿಮ್ಮ ಸಮ್ಮತಿಯೂ ಮತ್ತು ನಮ್ಮ ದೇವರಾದ ಯೆಹೋವನ ಚಿತ್ತವೂ ಇರುವುದಾದರೆ, ನಾವು ಎಲ್ಲಾ ಇಸ್ರಾಯೇಲ್ ಪ್ರಾಂತ್ಯಗಳಲ್ಲಿರುವ ನಮ್ಮ ಸಹೋದರರನ್ನೂ ಗೋಮಾಳಸಹಿತವಾದ ತಮ್ಮ ಪಟ್ಟಣಗಳಲ್ಲಿರುವ ಯಾಜಕ ಲೇವಿಯರನ್ನೂ ಬೇಗನೆ ಕರೆಕಳುಹಿಸೋಣ.


ಅವರೆಲ್ಲರೂ ಆ ಮಾತಿಗೆ ಒಪ್ಪಿ ಅದರಂತೆ ಮಾಡಬೇಕೆಂದು ಹೇಳಿದರು.


ನೀವು ಮೊದಲನೆಯ ಸಾರಿ ಇರಲಿಲ್ಲವಾದುದರಿಂದ ನಮ್ಮ ದೇವರಾದ ಯೆಹೋವನು ತನ್ನ ಸನ್ನಿಧಿಗೆ ಧರ್ಮವಿಧಿ ವಿರೋಧವಾಗಿ ನಮ್ಮಲ್ಲಿಗೆ ಬಂದ ಒಬ್ಬನನ್ನು ಸಂಹರಿಸಿದನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು