1 ಪೂರ್ವಕಾಲ ವೃತ್ತಾಂತ 15:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆ ಕಾಲದಲ್ಲಿ ದಾವೀದನು, “ಲೇವಿಯರ ಹೊರತಾಗಿ ಯಾರೂ ಮಂಜೂಷವನ್ನು ಹೊರಬಾರದು, ಅದನ್ನು ಹೊರುವುದಕ್ಕೂ, ಸದಾಕಾಲ ತನ್ನ ಸೇವೆಮಾಡುವುದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ‘ಲೇವಿಯರು ಮಾತ್ರವೇ ದೇವಮಂಜೂಷವನ್ನು ಹೊರಬೇಕು. ಏಕೆಂದರೆ ಸದಾಕಾಲ ತಮ್ಮ ಸೇವೆಮಾಡುವುದಕ್ಕೂ ಮಂಜೂಷವನ್ನು ಹೊರುವುದಕ್ಕೂ ಸರ್ವೇಶ್ವರನಿಂದ ಆಯ್ಕೆಯಾದವರು ಅವರೇ’ ಎಂದು ನಿಶ್ಚಯಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆ ಕಾಲದಲ್ಲಿ ದಾವೀದನು - ಲೇವಿಯರು ಹೊರತಾಗಿ ಯಾರೂ ದೇವಮಂಜೂಷವನ್ನು ಹೊರಬಾರದು; ಅದನ್ನು ಹೊರುವದಕ್ಕೂ ಸದಾಕಾಲ ತನ್ನ ಸೇವೆಮಾಡುವದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಲೇವಿಯರು ಮಾತ್ರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಬರಬೇಕು. ಯೆಹೋವನು ಅವರನ್ನೇ ತನ್ನ ನಿರಂತರವಾದ ಸೇವೆಗಾಗಿ ನೇಮಿಸಿದ್ದಾನೆ” ಎಂದು ದಾವೀದನು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ದಾವೀದನು, “ಲೇವಿಯರ ಹೊರತಾಗಿ ಮತ್ತ್ಯಾರೂ ದೇವರ ಮಂಜೂಷವನ್ನು ಹೊರಬಾರದು. ಯೆಹೋವ ದೇವರು ದೇವರ ಮಂಜೂಷವನ್ನು ಹೊರಲೂ, ಯುಗಯುಗಕ್ಕೆ ಅವರಿಗೆ ಸೇವೆಮಾಡಲೂ ಅವರನ್ನು ಆಯ್ದುಕೊಂಡಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |
ಎಲ್ಲಾ ಇಸ್ರಾಯೇಲರನ್ನು ಉಪದೇಶಿಸತಕ್ಕವರೂ, ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ, “ದಾವೀದನ ಮಗನೂ ಇಸ್ರಾಯೇಲ್ ರಾಜನೂ ಆದ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇರಿಸಿರಿ; ಅದನ್ನು ಹೆಗಲಿನ ಮೇಲೆ ಹೊತ್ತುಕೊಳ್ಳುವ ಅಗತ್ಯವಿಲ್ಲ. ಅದು ನಿಮ್ಮ ಹೆಗಲುಗಳಿಗೆ ಹೊರೆಯಾಗಿರಬಾರದು; ಇನ್ನು ಮುಂದೆ ನಿಮ್ಮ ದೇವರಾದ ಯೆಹೋವನನ್ನೂ, ಆತನ ಪ್ರಜೆಗಳಾದ ಇಸ್ರಾಯೇಲರನ್ನೂ ಸೇವಿಸಿರಿ.