Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 15:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೆಹೋವನ ಒಡಂಬಡಿಕೆ ಮಂಜೂಷವು ದಾವೀದನ ನಗರಕ್ಕೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿನೋಡಿ ದಾವೀದನು ಜಿಗಿಯುತ್ತಾ, ಕುಣಿಯುತ್ತಾ, ನೃತ್ಯಮಾಡುತ್ತಾ ಇರುವುದನ್ನು ಕಂಡು ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆ ಮಂಜೂಷ ಪಟ್ಟಣದೊಳಗೆ ಬರುತ್ತಿದ್ದಂತೆ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿ ನೋಡಿದಳು. ದಾವೀದನು ಸಂತೋಷದಿಂದ ಕುಣಿಯುತ್ತಾ ನರ್ತಿಸುತ್ತಾ ಇದ್ದುದನ್ನು ಕಂಡಳು. ಅದನ್ನು ನೋಡಿ ಅವನ ಬಗ್ಗೆ ಅವಳಲ್ಲಿ ತಿರಸ್ಕಾರ ಭಾವ ಮೂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯೆಹೋವನ ನಿಬಂಧನ ಮಂಜೂಷವು ದಾವೀದನಗರಕ್ಕೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹಣಕಿನೋಡಿ ದಾವೀದನು ಕುಣಿಯುತ್ತಾ ಹಾರುತ್ತಾ ಇರುವದನ್ನು ಕಂಡು ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ದಾವೀದನ ನಗರದಲ್ಲಿ ಮೆರವಣಿಗೆಯು ಬಂದಾಗ ದಾವೀದನ ಹೆಂಡತಿಯಾದ ಮೀಕಲಳು ಕಿಟಿಕಿಯಿಂದ ನೋಡಿದಳು. (ಇವಳು ಸೌಲನ ಮಗಳು.) ದಾವೀದನು ಕುಣಿಯುತ್ತಾ ಹಾಡುವದನ್ನು ಆಕೆ ಕಂಡಳು. ತನ್ನ ಗಂಡನ ಮೇಲೆ ಆಕೆಗಿದ್ದ ಗೌರವವು ಕಡಿಮೆಯಾಯಿತು. ಯಾಕೆಂದರೆ ದಾವೀದನು ಒಬ್ಬ ಸಾಮಾನ್ಯ ವ್ಯಕ್ತಿಯಂತೆ ಬುದ್ಧಿ ಇಲ್ಲದ ಕೆಲಸ ಮಾಡುತ್ತಿರುವನೆಂದು ಆಕೆಯು ಅಂದುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ, ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ನೋಡಿ, ಕುಣಿಯುತ್ತಾ, ಹಾಡುತ್ತಾ ಇರುವ ಅರಸನಾದ ದಾವೀದನನ್ನು ಕಂಡು, ತನ್ನ ಹೃದಯದಲ್ಲಿ ಅವನನ್ನು ತಿರಸ್ಕರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 15:29
26 ತಿಳಿವುಗಳ ಹೋಲಿಕೆ  

ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಿಕಿಯಿಂದ ಇಣಿಕಿ ನೋಡಿ, ದಾವೀದನು ಯೆಹೋವನ ಮುಂದೆ ಜಿಗಿಯುತ್ತಾ, ಕುಣಿಯುತ್ತಾ ಇರುವುದನ್ನು ಕಂಡು, ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು


ಅದರಲ್ಲಿ ಚಿನ್ನದ ಧೂಪಾರತಿಯು ಮತ್ತು ಚಿನ್ನದ ತಗಡಿನಿಂದ ಹೊದಿಸಿದ ಒಡಂಬಡಿಕೆಯ ಮಂಜೂಷಗಳಿದ್ದವು. ಆ ಮಂಜೂಷದೊಳಗೆ ಮನ್ನ ಇಟ್ಟಿದ್ದ ಚಿನ್ನದ ಪಾತ್ರೆಯೂ, ಆರೋನನ ಚಿಗುರಿದ ಕೋಲೂ, ಒಡಂಬಡಿಕೆಯ ಕಲ್ಲಿನ ಹಲಿಗೆಗಳೂ ಇದ್ದವು.


ನಮಗೆ ಬುದ್ಧಿಭ್ರಮಣೆಯಾಗಿದ್ದರೆ ಅದು ದೇವರ ಮಹಿಮೆಗಾಗಿಯೇ; ಹಾಗೂ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ಪ್ರಯೋಜನಕ್ಕಾಗಿಯೇ.


ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತನಾಗಿ ತೋರುತ್ತವೆ; ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು.


ಆದರೆ ಬೇರೆ ಕೆಲವರು, “ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಹಾಸ್ಯ” ಮಾಡಿದರು.


ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.”


ಅವುಗಳೊಳಗಿಂದ ಸ್ತೋತ್ರವೂ ಮತ್ತು ಸಂತೋಷದಿಂದ ನಲಿಯುವ ಧ್ವನಿಯೂ ಕೇಳಿಸುವವು. ನಾನು ಆ ಜನರನ್ನು ಹೆಚ್ಚಿಸುವೆನು, ಅವರು ಇನ್ನು ಅಲ್ಪರಾಗಿರರು, ಅವರನ್ನು ಘನಪಡಿಸುವೆನು, ಅವರು ಇನ್ನು ಹೀನರಾಗಿರರು.


ನೀವು ದೇಶದಲ್ಲಿ ಹೆಚ್ಚಿ ಅಭಿವೃದ್ಧಿಗೆ ಬಂದ ಕಾಲದಲ್ಲಿ, ‘ಯೆಹೋವನ ನಿಬಂಧನ ಮಂಜೂಷ’ ಇದರ ಪ್ರಸ್ತಾವವಿರದು. ಅದು ಜ್ಞಾಪಕಕ್ಕೆ ಬಾರದು, ಯಾರೂ ಸ್ಮರಿಸರು, ಅದು ಇಲ್ಲವಲ್ಲಾ ಎಂದು ದುಃಖಿಸರು, ಹೊಸದಾಗಿ ಕಲ್ಪಿಸಿಕೊಳ್ಳರು” ಇದು ಯೆಹೋವನ ನುಡಿ.


ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ,


ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.


ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ.


ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು, ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ.


ಸೌಲನು ದಾವೀದನ ಹೆಂಡತಿಯಾಗಿದ್ದ ಮೀಕಲಳೆಂಬ ತನ್ನ ಮಗಳನ್ನು ಪುನಃ ಗಲ್ಲೀಮ್ ಊರಿನ ಲಯಿಷನ ಮಗನಾದ ಪಲ್ಟೀ ಎಂಬವನಿಗೆ ಮದುವೆ ಮಾಡಿಕೊಟ್ಟನು.


ಇಸ್ರಾಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರ ಹಿರಿಯರು ಅವರಿಗೆ, “ಯೆಹೋವನು ಈ ಹೊತ್ತು ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶೀಲೋವಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸೋಣ; ಆತನು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ತಪ್ಪಿಸಲಿ” ಎಂದು ಆಲೋಚನೆ ಹೇಳಿದ್ದರಿಂದ ಅವರು ಜನರನ್ನು ಕಳುಹಿಸಿ


ಆ ಕಾಲದಲ್ಲಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಊರೊಳಗಿತ್ತು;


“ನೀವು ಈ ಧರ್ಮಶಾಸ್ತ್ರ ಪುಸ್ತಕವನ್ನು ನಿಮ್ಮ ವಶಕ್ಕೆ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಆಜ್ಞಾಶಾಸನಗಳ ಮಂಜೂಷದ ಬಳಿಯಲ್ಲಿ ಇಡಿರಿ. ಇಸ್ರಾಯೇಲರೇ, ಅಲ್ಲಿ ಇದು ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುವುದಾಗಿರಲಿ.


ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡುವುದಕ್ಕಾಗಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿನಗಳು ಅವರ ಮುಂದಾಗಿ ಹೋಗುತ್ತಿತ್ತು.


ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ಕೈಗಳಲ್ಲಿ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯ ಹಿಂದೆ ಹೋದರು.


ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿನ ಅವನು ಪ್ರವಾದಿಯಾದ ನಾತಾನನನ್ನು ಬರಲು ಹೇಳಿ, “ನೋಡು, ನಾನು ದೇವದಾರುಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಯೆಹೋವನ ಒಡಂಬಡಿಕೆ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ” ಎಂದು ಹೇಳಿದನು.


ನೀವು ಅವರಿಗೆ ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿ ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತು ಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲಕ್ಕೂ ಸಾಕ್ಷಿಗಳಾಗಿರುವವು” ಅಂದನು.


ಹೀಗೆ ಎಲ್ಲಾ ಇಸ್ರಾಯೇಲರು ಆನಂದ ಘೋಷಣೆಗಳಿಂದಲೂ, ಕೊಂಬು ಮತ್ತು ತುತ್ತೂರಿಗಳನ್ನು, ತಾಳ, ತಂತಿ ವಾದ್ಯಗಳ ಸಂಗೀತದಿಂದ ತಾಳಹಾಕುತ್ತಾ ಕಿನ್ನರಿ ಸ್ವರಮಂಡಲಗಳನ್ನು ನುಡಿಸುತ್ತಾ, ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು