Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ ಯೆಹೋವನವೇ ಎಂದು ಹೇಳಿ ಆತನನ್ನು ಘನಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಶಕ್ತಿಸಾಮರ್ಥ್ಯ ಸರ್ವೇಶ್ವರನವೇ ಎಂದು I ಜಗದ ರಾಷ್ಟ್ರಗಳು ಘನಪಡಿಸಲಿ ಆತನನು ಎಂದೆಂದೂ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ ಯೆಹೋವನವೇ ಎಂದು ಹೇಳಿ ಆತನನ್ನು ಘನಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ ಯೆಹೋವನವೇ ಎಂದು ಹೇಳಿ ಆತನನ್ನು ಘನಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಜನಾಂಗದ ಕುಟುಂಬಗಳೇ, ಯೆಹೋವ ದೇವರ ಮುಂದೆ, ನೀವು ಮಹಿಮೆಯನ್ನೂ ಬಲವನ್ನೂ ಅರ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:28
20 ತಿಳಿವುಗಳ ಹೋಲಿಕೆ  

ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.


ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ದೇವರ ಪ್ರತಾಪವನ್ನು ಕೊಂಡಾಡಿರಿ. ಆತನ ಗಾಂಭೀರ್ಯವು ಇಸ್ರಾಯೇಲರ ಆಶ್ರಯವಾಗಿದೆ; ಆತನ ಶಕ್ತಿಯು ಮೇಘಮಾರ್ಗದಲ್ಲೆಲ್ಲಾ ವ್ಯಾಪಿಸಿದೆ.


ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.


ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಜಯಘೋಷಮಾಡಿರಿ; ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ.


ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.


ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ, ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. ಸೆಲಾ


ನೀವು ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಗಡ್ಡೆ ಮತ್ತು ಇಲಿ ಇವುಗಳ ಸ್ವರೂಪಗಳನ್ನು ಚಿನ್ನದಿಂದ ಮಾಡಿಸಿ, ಇಸ್ರಾಯೇಲಿನ ದೇವರಿಗೆ ಅದನ್ನು ಅರ್ಪಿಸಿ ಮಹಿಮೆಯನ್ನು ಸಲ್ಲಿಸಿದರೆ, ಆತನ ಶಿಕ್ಷಾಹಸ್ತವು ನಿಮ್ಮನ್ನೂ, ನಿಮ್ಮ ದೇವತೆಗಳನ್ನೂ, ಪ್ರಾಂತ್ಯಗಳನ್ನೂ ಬಿಟ್ಟುಹೋದೀತು.


ಆತನ ಸಾನ್ನಿಧ್ಯದಲ್ಲಿ ಮಾನ ಮಹಿಮೆಗಳು ಆತನ ಪವಿತ್ರಾಲಯದಲ್ಲಿ ಮಹಿಮೆ, ಸ್ತುತಿಸ್ತೋತ್ರಗಳು, ಸಂತೋಷಗಳೂ ಇರುತ್ತವೆ.


ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ. ಕಾಣಿಕೆ ಸಹಿತ ಆತನ ಸನ್ನಿಧಿಗೆ ಬನ್ನಿರಿ. ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ.


ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ, ಯೆಹೋವನವೇ, ಎಂದು ಹೇಳಿ ಆತನನ್ನು ಘನಪಡಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು