1 ಪೂರ್ವಕಾಲ ವೃತ್ತಾಂತ 16:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ನಮ್ಮ ಸಹಾಯಕನಾಗಿರುವ ದೇವರೇ, ನಮ್ಮನ್ನು ರಕ್ಷಿಸು; ಅನ್ಯಜನಗಳಲ್ಲಿ ಚದುರಿಹೋಗಿರುವ ನಮ್ಮನ್ನು ಬಿಡಿಸಿ ಒಟ್ಟುಗೂಡಿಸು; ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು ಅನ್ನಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಹೇ ದೇವಾ, ನಮ್ಮ ಸಹಾಯಕ, ನಮ್ಮನ್ನು ಉದ್ಧರಿಸು I ನಾಡು ನಾಡುಗಳಿಂದ ನಮ್ಮನ್ನು ಒಂದುಗೂಡಿಸು I ನಿನ್ನ ಪವಿತ್ರ ನಾಮವನು ಭಜಿಸುವೆವು ನಾವು I ನಿನ್ನ ಸ್ತುತಿಸ್ತೋತ್ರಗಳಲಿ ಹೆಚ್ಚಳಪಡುವೆವು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ನಮ್ಮ ಸಹಾಯಕನಾಗಿರುವ ದೇವರೇ, ನಮ್ಮನ್ನು ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ಬಿಡಿಸಿ ಕೂಡಿಸು; ಆಗ ನಿನ್ನ ಪರಿಶುದ್ಧನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು ಅನ್ನಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 “ರಕ್ಷಕನಾದ ಯೆಹೋವನೇ, ನಮ್ಮನ್ನು ರಕ್ಷಿಸು; ನಮ್ಮನ್ನು ಒಂದುಗೂಡಿಸು; ಅನ್ಯಜನಾಂಗಗಳಿಂದ ನಮ್ಮನ್ನು ರಕ್ಷಿಸು. ಆಗ ನಾವು ನಿನ್ನ ಪರಿಶುದ್ಧ ನಾಮವನ್ನು ಕೀರ್ತಿಸುವೆವು. ನಮ್ಮ ಹಾಡುಗಳಿಂದ ನಿನ್ನನ್ನು ಘನಪಡಿಸುವೆವು” ಎಂದು ಆತನಿಗೆ ಹೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ನಮ್ಮ ರಕ್ಷಣೆಯ ದೇವರೇ, “ನಾವು ನಿಮ್ಮ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ, ನಿಮ್ಮ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸಿರಿ, ಜನಾಂಗಗಳೊಳಗಿಂದ ನಮ್ಮನ್ನು ಬಿಡುಗಡೆ ಮಾಡಿ ಒಂದುಗೂಡಿಸಿರಿ.” ಅಧ್ಯಾಯವನ್ನು ನೋಡಿ |