41-42 ಹೇಮಾನ್ ಮತ್ತು ಯೆದುತೂನ್ ಅವರೊಂದಿಗಿದ್ದು ತುತ್ತೂರಿಯನ್ನೂದುತ್ತಾ ತಾಳ ಬಾರಿಸುತ್ತಾ ಇತರ ವಾದ್ಯಗಳನ್ನು ನುಡಿಸುತ್ತಾ ಯೆಹೋವನಿಗೆ ಸ್ತುತಿಗೀತೆಗಳನ್ನು ಹಾಡಿದರು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿದ್ದರು.
ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಏಕ ಸ್ವರದಿಂದ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವುದಕ್ಕಾಗಿ ತುತ್ತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತ್ತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿಯೊಡನೆ ಹೀಗೆ ಹಾಡಿದರು, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವುದು” ಎಂದು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ, ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.
ಅವರು ಪರಸ್ಪರ ಹಾಡುತ್ತಾ, ಯೆಹೋವನನ್ನು ಸಂಕೀರ್ತಿಸುತ್ತಾ, “ಆತನು ಒಳ್ಳೆಯವನು; ಆತನ ಕೃಪೆಯು ಇಸ್ರಾಯೇಲರೊಂದಿಗೆ ಶಾಶ್ವತವಾಗಿರುತ್ತದೆ” ಎಂದು ಕೃತಜ್ಞತಾಸ್ತುತಿಮಾಡಿದರು. ಯೆಹೋವನ ಕೀರ್ತನೆ ಕೇಳಿಸಿದ ಕೂಡಲೆ ಯೆಹೋವನ ಆಲಯದ ಅಸ್ತಿವಾರವು ಹಾಕಲ್ಪಟ್ಟಿರುತ್ತದೆಂದು ಜನರೆಲ್ಲರೂ ಉತ್ಸಾಹಧ್ವನಿಯಿಂದ ಜಯಘೋಷ ಮಾಡಿದರು.
ಆ ನಂತರ ಅವನು ಜನರೊಂದಿಗೆ ಸಮಾಲೋಚನೆ ಮಾಡಿ ಯೆಹೋವನನ್ನು ಸ್ತುತಿಸಿ ಹಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ, “ಪರಿಶುದ್ಧವಸ್ತ್ರ ಅಲಂಕಾರ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ, ‘ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಆತನ ಕೃಪೆಯು ಶಾಶ್ವತವಾದದ್ದು’ ಎಂದು ಭಜಿಸಿರಿ” ಎಂಬುದಾಗಿ ಆಜ್ಞಾಪಿಸಿದನು.
ಇಸ್ರಾಯೇಲರೆಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಗಿ ಯೆಹೋವನನ್ನು ಆರಾಧಿಸಿ, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು” ಎಂದು ಕೃತಜ್ಞತಾಸ್ತುತಿ ನಮನ ಮಾಡಿದರು.
ದಾವೀದನೂ ಅವನ ಮುಖ್ಯಸ್ಥರನ್ನು ಲೇವಿಯರೊಂದಿಗೆ ಸೇವೆಗಾಗಿ ಕೊಟ್ಟು ದೇವಸ್ಥಾನ ಪರಿಚಾರಕರಲ್ಲಿ ಇನ್ನೂರಿಪ್ಪತ್ತು ಜನರನ್ನೂ ನಮ್ಮ ಬಳಿಗೆ ಕರೆದುಕೊಂಡು ಬಂದರು. ಇವರೆಲ್ಲರ ಹೆಸರುಗಳು ಪಟ್ಟಿಯಲ್ಲಿದ್ದವು.
ಆ ಮೇಲೆ ಅವನು ನನ್ನನ್ನು ಒಳಗಣ ಅಂಗಳಕ್ಕೆ ಕರೆ ತಂದನು. ಇಗೋ, ಅಲ್ಲಿ ಎರಡು ಕೋಣೆಗಳು ಕಾಣಿಸಿದವು. ಉತ್ತರದ ಹೆಬ್ಬಾಗಿಲ ಪಕ್ಕದಲ್ಲಿ ಒಂದು ಕೋಣೆಯು ದಕ್ಷಿಣಕ್ಕೆ ಅಭಿಮುಖವಾಗಿತ್ತು; ಒಂದು ಕೋಣೆಯು ಉತ್ತರಕ್ಕೂ, ಇನ್ನೊಂದು ಕೋಣೆಯು ದಕ್ಷಿಣಕ್ಕೂ ಇತ್ತು.