1 ಪೂರ್ವಕಾಲ ವೃತ್ತಾಂತ 16:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವರಲ್ಲಿ ಆಸಾಫನು ಪ್ರಧಾನನು. ಜೆಕರ್ಯನು ಎರಡನೆಯವನು. ಯೆಗೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್, ಯೆಗೀಯೇಲ್ ಇವರು ಸ್ವರಮಂಡಲ, ಕಿನ್ನರಿ ಮೊದಲಾದ ವಾದ್ಯಗಳನ್ನು ನುಡಿಸುವವರು, ಆಸಾಫನು ಕೈತಾಳ ಹಾಕುವುದಕ್ಕೆ ನೇಮಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವರಲ್ಲಿ ಆಸಾಫನು ಮುಖ್ಯಸ್ಥನಾಗಿಯೂ ಜೆಕರ್ಯ ಅವನ ಸಹಾಯಕನಾಗಿಯೂ ನೇಮಕಗೊಂಡರು. ಯೇಗೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್ ಹಾಗು ಯೆಗೀಯೇಲ್ ಸ್ವರಮಂಡಲಗಳನ್ನು ಬಾರಿಸಲು ನೇಮಕವಾದರು. ಆಸಾಫನು ತಾಳಗಳನ್ನು ಬಾರಿಸಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವರಲ್ಲಿ ಆಸಾಫನು ಪ್ರಧಾನನು; ಜೆಕರ್ಯನು ಎರಡನೆಯವನು. ಯೆಗೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್, ಯೆಗೀಯೇಲ್ ಇವರು ಸ್ವರಮಂಡಲ ಕಿನ್ನರಿ ಮೊದಲಾದ ವಾದ್ಯಗಳನ್ನು ಬಾರಿಸುವವರು; ಆಸಾಫನು ತಾಳಹೊಡೆಯುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಮೊದಲನೇ ಗುಂಪಿನ ಗಾಯಕರಿಗೆ ಆಸಾಫನು ಮುಖಂಡನಾಗಿದ್ದನು. ಆಸಾಫನ ಗುಂಪಿನವರು ತಾಳ ಬಾರಿಸಿದರು. ಜೆಕರ್ಯನು ಎರಡನೇ ಗುಂಪಿನ ನಾಯಕನು. ಬೇರೆ ಲೇವಿಯರು ಯಾರೆಂದರೆ: ಉಜ್ಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್ ಮತ್ತು ಯೆಗೀಯೇಲ್. ಇವರು ಲೈರ್ ಮತ್ತು ಹಾರ್ಪ್ ವಾದ್ಯಗಳನ್ನು ಬಾರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರು ಯಾರೆಂದರೆ: ಮುಖ್ಯಸ್ಥನಾದ ಆಸಾಫನೂ, ಅವನ ತರುವಾಯ ಜೆಕರ್ಯನೂ, ಯೆಜೀಯೇಲನೂ, ಶೆಮೀರಾಮೋತನೂ, ಯೆಹೀಯೇಲನೂ, ಮತ್ತಿತ್ಯನೂ, ಎಲೀಯಾಬನೂ, ಬೆನಾಯನೂ, ಓಬೇದ್ ಏದೋಮನೂ, ಯೆಹಿಯೇಲನೂ ಇವರು ವೀಣೆಗಳನ್ನೂ, ಕಿನ್ನರಿಗಳನ್ನೂ ಬಾರಿಸುತ್ತಿದ್ದರು. ಆದರೆ ಆಸಾಫನು ತಾಳಗಳನ್ನು ಬಾರಿಸುತ್ತಿದ್ದನು. ಅಧ್ಯಾಯವನ್ನು ನೋಡಿ |