Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿನ್ನ ಆಯುಷ್ಕಾಲವು ಮುಗಿದು ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅಭಿವೃದ್ಧಿಪಡಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿನ್ನ ಆಯುಷ್ಕಾಲವು ಮುಗಿದು ನೀನು ಪಿತೃಗಳ ಬಳಿಗೆ ಸೇರಿದ ಮೇಲೆ ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅಭಿವೃದ್ಧಿಪಡಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀನು ಸತ್ತು ನಿನ್ನ ಪೂರ್ವಿಕರ ಬಳಿ ಸೇರಿದಾಗ ನಾನು ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಮಾಡುವೆನು. ನಾನು ಅವನ ರಾಜ್ಯವನ್ನು ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿನ್ನ ಆಯುಷ್ಕಾಲವು ಮುಗಿದ ಮೇಲೆ, ನೀನು ನಿನ್ನ ಪಿತೃಗಳ ಬಳಿಗೆ ಹೋಗಿ ವಿಶ್ರಮಿಸುವಾಗ, ನಾನು ನಿನ್ನ ಸಂತತಿಯಲ್ಲಿ ಒಬ್ಬನನ್ನು ನಿನ್ನ ಉತ್ತರಾಧಿಕಾರಿಯನ್ನಾಗಿ ನೇಮಿಸಿ, ಅವನ ರಾಜ್ಯವನ್ನು ಸ್ಥಿರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:11
21 ತಿಳಿವುಗಳ ಹೋಲಿಕೆ  

ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವುದಿಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;


“ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.


“ಸಹೋದರರೇ, ಮೂಲಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತನಾಡಬಹುದು ಏನೆಂದರೆ,, ಅವನು ಮರಣಹೊಂದಿ ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿ ಇದೆ.


ಅವನು ಐಶ್ವರ್ಯ, ಮಾನ, ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದ ನಂತರ ತುಂಬಾ ವೃದ್ಧನಾಗಿ ಮರಣ ಹೊಂದಿದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಅರಸನಾದನು.


ನಾವು ನಿನ್ನ ದೃಷ್ಟಿಯಲ್ಲಿ ಪರದೇಶಿಗಳೂ, ನಮ್ಮ ಪೂರ್ವಿಕರೆಲ್ಲರಂತೆ ಪ್ರವಾಸಿಗಳೂ ಆಗಿದ್ದೇವೆ. ನಮ್ಮ ಆಯುಷ್ಕಾಲವು ನೆರಳಿನಂತಿದೆ. ನಮಗೆ ಯಾವ ನಿರೀಕ್ಷೆಯೂ ಇಲ್ಲ.


ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೋಸ್ಕರ ಆರಿಸಿಕೊಂಡನು.


ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದನು. ಆತನ ವಾಗ್ದಾನದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲ್ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಈ ಆಲಯವನ್ನು ಕಟ್ಟಿದೆನು.


ಅನಂತರ ದಾವೀದನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು.


ನನ್ನ ಒಡೆಯನೂ, ಅರಸನೂ ಆದ ನೀವೂ ಹಾಗೆ ಮಾಡದೆ ಪೂರ್ವಿಕರ ಬಳಿಗೆ ಸೇರುವುದಾದರೆ ನಾನೂ ಮತ್ತು ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು” ಎಂದು ಹೇಳಿದಳು.


ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ನೀನಂತೂ ಸಮಾಧಾನದೊಡನೆ ಪೂರ್ವಿಕರ ಬಳಿಗೆ ಸೇರುವಿ, ಬಹಳ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.


ನಿನ್ನಿಂದ ಹುಟ್ಟುವ ಮಗನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕು’ ಎಂದು ಹೇಳಿದನು.


ಪೂರ್ವಕಾಲದಲ್ಲೂ, ನಾನು ನನ್ನ ಜನರಾದ ಇಸ್ರಾಯೇಲರಿಗಾಗಿ ನೇಮಿಸಿದ ನ್ಯಾಯಸ್ಥಾಪಕರ ಕಾಲದಿಂದೀಚೆಗೆ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವುದಿಲ್ಲ. ನಿನ್ನ ಶತ್ರುಗಳನ್ನು ನಿನಗೆ ಅಧೀನಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನು ಎಂದು ಮಾತುಕೊಡುತ್ತೇನೆ.


ಅವನು ನನಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.


ಯೆಹೋವನು ಇಂತೆನ್ನುತ್ತಾನೆ, “ದಾವೀದನ ವಂಶವು ನಿಂತು ಹೋಗದೆ ಆ ಸಂತಾನದವರು ಇಸ್ರಾಯೇಲರ ಸಿಂಹಾಸನದಲ್ಲಿ ತಪ್ಪದೆ ಆಸೀನರಾಗುತ್ತಾ ಬರುವರು.


ಆದರೆ ನೀನು ಆಲಯವನ್ನು ಕಟ್ಟಬಾರದು; ನಿನ್ನಿಂದ ಹುಟ್ಟುವ ಮಗನೇ ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಿಸುವನು’ ಎಂದು ಹೇಳಿದನು.


ಯೆಹೋವನೇ, ಗಗನವು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವುದು; ನಿನ್ನ ಸತ್ಯವನ್ನು ಪರಿಶುದ್ಧರ ಸಭೆಯಲ್ಲಿ ಕೀರ್ತಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು