1 ಪೂರ್ವಕಾಲ ವೃತ್ತಾಂತ 17:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಿನ್ನ ಇಸ್ರಾಯೇಲ್ ಪ್ರಜೆಗೆ ಸಮಾನವಾದ ಜನಾಂಗವು ಭೂಲೋಕದಲ್ಲಿ ಯಾವುದಿರುತ್ತದೆ? ದೇವರಾದ ನೀನೇ ಚಿತ್ತೈಯಿಸಿ, ಅದನ್ನು ವಿಮೋಚಿಸಿ, ಸ್ವಪ್ರಜೆಯಾಗಿ ಮಾಡಿಕೊಂಡಿ. ಭಯಂಕರವಾದ ಮಹತ್ಕಾರ್ಯಗಳಿಂದ ನಿನ್ನ ಹೆಸರನ್ನು ಪ್ರಸಿದ್ಧಿಪಡಿಸಿದಿ. ನೀನು ಐಗುಪ್ತರ ಕೈಯೊಳಗಿಂದ ತಪ್ಪಿಸಿ ರಕ್ಷಿಸಿದ ನಿನ್ನ ಪ್ರಜೆಯ ಎದುರಿನಿಂದ ಅನ್ಯಜನಾಂಗಗಳನ್ನು ಹೊರಡಿಸಿಬಿಟ್ಟಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ತಮ್ಮ ಇಸ್ರಯೇಲ್ ಪ್ರಜೆಗೆ ಸಮನಾದ ಜನಾಂಗ ಲೋಕದಲ್ಲಿ ಬೇರೆ ಯಾವುದಿದೆ? ದೇವರಾದ ತಾವೇ ಬಂದು ಅದನ್ನು ವಿಮೋಚಿಸಿ ಸ್ವಪ್ರಜೆಯನ್ನಾಗಿಸಿಕೊಂಡಿರಿ; ಆಶ್ಚರ್ಯಕರವಾದ ಅದ್ಭುತಕಾರ್ಯಗಳಿಂದ ನಿಮ್ಮ ನಾಮವನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟರ ಕೈಯಿಂದ ತಮ್ಮ ಪ್ರಜೆಯನ್ನು ತಪ್ಪಿಸಿ, ರಕ್ಷಿಸಿದಿರಿ. ಅನ್ಯಜನಾಂಗಗಳನ್ನು ಅವರ ನಾಡಿನಿಂದ ಹೊರಡಿಸಿಬಿಟ್ಟಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಿನ್ನ ಇಸ್ರಾಯೇಲ್ ಪ್ರಜೆಗೆ ಸಮಾನವಾದ ಜನಾಂಗವು ಭೂಲೋಕದಲ್ಲಿ ಯಾವದಿರುತ್ತದೆ? ದೇವನಾದ ನೀನೇ ಚಿತ್ತಯಿಸಿ ಅದನ್ನು ವಿಮೋಚಿಸಿ ಸ್ವಪ್ರಜೆಯನ್ನಾಗಿ ಮಾಡಿಕೊಂಡಿ; ಭಯಂಕರವಾದ ಮಹತ್ಕಾರ್ಯಗಳಿಂದ ನಿನ್ನ ಹೆಸರನ್ನು ಪ್ರಸಿದ್ಧಪಡಿಸಿದಿ. ನೀನು ಐಗುಪ್ತ್ಯರ ಕೈಯೊಳಗಿಂದ ತಪ್ಪಿಸಿ ರಕ್ಷಿಸಿದ ನಿನ್ನ ಪ್ರಜೆಯ ಎದುರಿನಿಂದ ಅನ್ಯಜನಾಂಗಗಳನ್ನು ಹೊರಡಿಸಿಬಿಟ್ಟಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಇಸ್ರೇಲಿಗೆ ಸಮಾನವಾದ ಜನಾಂಗ ಭೂಲೋಕದಲ್ಲಿ ಎಲ್ಲಿದೆ? ನೀನು ಇಂಥ ಅದ್ಭುತಕಾರ್ಯಗಳನ್ನು ಮಾಡಿರುವುದು ಇಸ್ರೇಲ್ ಜನಾಂಗಕ್ಕಾಗಿಯೇ. ನೀನು ನಮ್ಮನ್ನು ಈಜಿಪ್ಟಿನಿಂದ ಹೊರತಂದು ಸ್ವತಂತ್ರರನ್ನಾಗಿ ಮಾಡಿದೆ. ಹೀಗೆ ನೀನು ನಿನ್ನ ಹೆಸರನ್ನು ಪ್ರಖ್ಯಾತಿಮಾಡಿದೆ. ನೀನು ನಿನ್ನ ಜನರ ಮುಂದೆ ಹೋಗುತ್ತಾ, ಅನ್ಯಜನರು ತಮ್ಮ ದೇಶವನ್ನು ಬಿಟ್ಟುಹೋಗುವಂತೆ ಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಭೂಲೋಕದಲ್ಲಿ ನಿಮ್ಮ ಜನರಾದ ಇಸ್ರಾಯೇಲರಿಗೆ ಸಮಾನವಾದ ಜನಾಂಗ ಯಾವುದು? ದೇವರಾದ ನೀವೇ ಹೋಗಿ ಅವರನ್ನು ಸ್ವಜನರಾಗಿ ವಿಮೋಚಿಸಿ ನಿಮ್ಮ ಹೆಸರನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟಿನಿಂದ ವಿಮೋಚಿಸಿ ತಂದ ನಿಮ್ಮ ಪ್ರಜೆಗಳ ಎದುರಿನಿಂದ ಜನಾಂಗಗಳನ್ನು ಓಡಿಸುವ ಮೂಲಕ ವಿಸ್ಮಯಕರವಾದ ಮಹಾ ಅದ್ಭುತಗಳನ್ನು ಮಾಡಿದ್ದೀರಲ್ಲವೇ? ಅಧ್ಯಾಯವನ್ನು ನೋಡಿ |