Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗೆಲ್ಲಾ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೋಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ನ್ಯಾಯಸ್ಥಾಪಕನ್ನಾದರೂ ನೀವು ನನಗೋಸ್ಕರ ದೇವದಾರುಮರದ ಮನೆಯನ್ನು ಏಕೆ ಕಟ್ಟಲಿಲ್ಲ ಎಂದು ಕೇಳಿದೆನೋ ಎಂಬುದಾಗಿ ಯೆಹೋವನು ಅನ್ನುತ್ತಾನೆ’” ಎಂದು ಹೇಳು ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾನು ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಂದಿನಿಂದ ಇಂದಿನವರೆಗೆ ದೇವಾಲಯದಲ್ಲಿ ವಾಸಮಾಡಲಿಲ್ಲ; ಗುಡಾರದಲ್ಲೇ ವಾಸಿಸುತ್ತಿದ್ದೆನು. ಹೀಗೆ ಇಸ್ರಯೇಲರ ಮಧ್ಯೆ ಸಂಚರಿಸುತ್ತಿದ್ದಾಗಲೆಲ್ಲಾ ನನ್ನ ಜನರಾದ ಅವರನ್ನು ಪಾಲಿಸುವುದಕ್ಕೆ ನ್ಯಾಯಸ್ಥಾಪಕರನ್ನು ನೇಮಿಸಿದೆ. ಅವರಾರಿಂದಲೂ ‘ನೀವೇಕೆ ನನಗೆ ದೇವದಾರು ಮರದಿಂದ ದೇವಾಲಯವನ್ನು ಕಟ್ಟಿಸಲಿಲ್ಲ?’ ಎಂದು ಕೇಳಿದ್ದಿಲ್ಲ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಇಸ್ರಾಯೇಲ್ಯರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗೆಲ್ಲಾ ನನ್ನ ಜನರಾದ ಇಸ್ರಾಯೇಲ್ಯರನ್ನು ಪಾಲಿಸುವದಕ್ಕೋಸ್ಕರ ನನ್ನಿಂದ ನೇವಿುಸಲ್ಪಟ್ಟ ಯಾವ ನ್ಯಾಯಸ್ಥಾಪಕನನ್ನಾದರೂ - ನೀವು ನನಗೋಸ್ಕರ ದೇವದಾರುಮರದ ಮನೆಯನ್ನೇಕೆ ಕಟ್ಟಲಿಲ್ಲ ಎಂದು ಕೇಳಿದೆನೋ ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ನನ್ನ ಜನರಾದ ಇಸ್ರಾಯೇಲರನ್ನು ಪರಿಪಾಲಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಜೊತೆಯಾದರೂ, “ನೀವು ನನಗೆ ದೇವದಾರು ಮನೆಯನ್ನು ಏಕೆ ಕಟ್ಟಲಿಲ್ಲ,” ಎಂದು ನಾನು ಸಮಸ್ತ ಇಸ್ರಾಯೇಲಿನ ಸಂಗಡ ಸಂಚರಿಸಿದ ಯಾವ ಸ್ಥಳದಲ್ಲಾದರೂ, ಯಾವಾಗಲಾದರೂ ಕೇಳಿದೆನೋ?’

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:6
19 ತಿಳಿವುಗಳ ಹೋಲಿಕೆ  

ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೊಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ಕುಲನಾಯಕನನ್ನಾದರೂ ನೀವು ನನಗೋಸ್ಕರ ದೇವದಾರು ಮರದ ಮನೆಯನ್ನೇಕೆ ಕಟ್ಟಲಿಲ್ಲವೆಂದು ಕೇಳಿದೆನೋ?’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳು.


“ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ, ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ,


ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.


ಇಷ್ಟರೊಳಗೆ ಸುಮಾರು ನಾನೂರೈವತ್ತು ವರ್ಷಗಳು ಗತಿಸಿದವು. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದ ವರೆಗೆ ನ್ಯಾಯಾಧಿಪತಿಗಳನ್ನು ಕೊಟ್ಟನು.


“‘ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಸಣ್ಣದಲ್ಲ. ಏಕೆಂದರೆ ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕ ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಉದಯಿಸುವನು.’ ಎಂಬುದಾಗಿ ಪ್ರವಾದಿಯ ಮುಖಾಂತರ ಬರೆಯಲ್ಪಟಿದೆ” ಎಂದು ಹೇಳಿದರು.


ಆತನು ಯೆಹೋವನ ಬಲವನ್ನೂ, ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


“ನರಪುತ್ರನೇ, ಇಸ್ರಾಯೇಲಿನ ಮಂದೆಯ ಕುರುಬರಿಗೆ ಈ ಪ್ರವಾದನೆಯನ್ನು ನುಡಿ, ಪ್ರವಾದಿಸಿ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಯ್ಯೋ, ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವ ಇಸ್ರಾಯೇಲಿನ ಕುರುಬರ ಗತಿಯನ್ನು ಏನು ಹೇಳಲಿ! ಕುರಿಗಳನ್ನು ಮೇಯಿಸುವುದು ಕುರುಬರ ಧರ್ಮವಲ್ಲವೋ?


ನಾನು ಅವುಗಳ ಮೇಲೆ ಕುರುಬರನ್ನು ನೇಮಿಸುವೆನು, ಅವರು ಅವುಗಳನ್ನು ಮೇಯಿಸುವರು. ಅವು ಇನ್ನು ಕಳವಳಗೊಳ್ಳುವುದಿಲ್ಲ, ಭಯಪಡುವುದಿಲ್ಲ ಮತ್ತು ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ; ಇದು ಯೆಹೋವನ ನುಡಿ” ಎಂಬುದೇ.


ಸೌಲನ ಆಳ್ವಿಕೆಯಲ್ಲಿ ಇಸ್ರಾಯೇಲರ ದಳಾಧಿಪತಿಯಾಗಿ ಇದ್ದವನು ನೀನೇ. ನಿನ್ನ ಕುರಿತು ನಿನ್ನ ದೇವರಾದ ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವಿ’ ಎಂದು ವಾಗ್ದಾನ ಮಾಡಿದ್ದಾನೆ.” ಎಂದು ಹೇಳಿದರು.


ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ಬಿಡಿಸಿ ಸುರಕ್ಷಿತವಾಗಿ ಜೀವಿಸುವಂತೆ ಮಾಡಿದನು.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವುದಕ್ಕೂ, ಶತ್ರುಗಳನ್ನು ನಿಮ್ಮ ಕೈವಶಮಾಡುವುದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಆದುದರಿಂದ ಪಾಳೆಯವು ನಿಮರ್ಲವಾಗಿರಬೇಕು; ನಿಮ್ಮಲ್ಲಿ ಅಶುದ್ಧವೇನಾದರೂ ಕಂಡುಬಂದರೆ ಆತನು ನಿಮ್ಮನ್ನು ಬಿಟ್ಟುಹೋದಾನು.


ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, “ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ಕರೆದುಕೊಂಡು ಬಂದು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು.


ಆತನು, ‘ನಾನು ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದಿಂದ ಬರಮಾಡಿದಂದಿನಿಂದ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನು ಆರಿಸಿಕೊಂಡೆನೇ ಹೊರತು ನನ್ನ ನಾಮದ ನಿವಾಸಕ್ಕೋಸ್ಕರ ಆಲಯ ಸ್ಥಾನವನ್ನಾಗಿ ಇಸ್ರಾಯೇಲ್ ಕುಲಗಳ ಯಾವ ಪಟ್ಟಣವನ್ನೂ ಆರಿಸಿಕೊಳ್ಳಲಿಲ್ಲ’ ಎಂದು ಹೇಳಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು