Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 18:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನು ಫಿಲಿಷ್ಟಿಯರನ್ನು ಮುತ್ತಿಗೆಹಾಕಿ, ಅವರನ್ನು ಸೋಲಿಸಿ, ಅವರಿಂದ ಗತ್ ಪಟ್ಟಣವನ್ನೂ ಮತ್ತು ಅದರ ಗ್ರಾಮಗಳನ್ನೂ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. ಅವರಿಂದ ಗತ್‍ ಪಟ್ಟಣವನ್ನೂ ಅದರ ಗ್ರಾಮಗಳನ್ನೂ ವಶಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಬಿದ್ದು ಅವರನ್ನು ಸೋಲಿಸಿ ಅವರಿಂದ ಗತ್ ಪಟ್ಟಣವನ್ನೂ ಅದರ ಗ್ರಾಮಗಳನ್ನೂ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅನಂತರ ದಾವೀದನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋದನು. ಅವರನ್ನು ಸೋಲಿಸಿ ಗತ್ ಪಟ್ಟಣ ಮತ್ತು ಅದರ ಸುತ್ತಮುತ್ತಲಿದ್ದ ಊರುಗಳನ್ನು ವಶಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇದರ ತರುವಾಯ ದಾವೀದನು ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿ, ಅವರಿಂದ ಗತ್ ಪಟ್ಟಣವನ್ನೂ ಅದರ ಸುತ್ತಲಿನ ಗ್ರಾಮಗಳನ್ನೂ ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 18:1
8 ತಿಳಿವುಗಳ ಹೋಲಿಕೆ  

ಈ ಸಂಗತಿಯನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಹೆಂಗಸರು ಸಂತೋಷಿಸಾರು. ಸುನ್ನತಿಯಿಲ್ಲದವರ ಸ್ತ್ರೀಯರು ಉಲ್ಲಾಸಪಟ್ಟಾರು.


ದಾವೀದನು ತಪ್ಪಿಸಿಕೊಂಡು ಗತ್ ಊರಿಗೆ ಹೋದನೆಂಬ ವರ್ತಮಾನವನ್ನು ಸೌಲನು ಕೇಳಿದ ಮೇಲೆ ಅವನನ್ನು ಹುಡುಕಲೇ ಇಲ್ಲ.


ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ, “ಇಸ್ರಾಯೇಲಿನ ದೇವರ ಮಂಜೂಷವನ್ನು ಏನು ಮಾಡೋಣ?” ಎಂದು ಕೇಳಲು ಅವರು, “ಅದನ್ನು ಗತ್ ಊರಿಗೆ ಕಳುಹಿಸಿ ಕೊಡಬೇಕೆಂದು ನಿರ್ಣಯಿಸಿದರು.” ಅವರು ಹಾಗೆಯೇ ಇಸ್ರಾಯೇಲಿನ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.


ಈಗ ನೀನು ನಿನ್ನ ಸೇವಕನ ಮನೆಯನ್ನು ಆಶೀರ್ವದಿಸಿ, ಅದನ್ನು ಸದಾಕಾಲವೂ ನಿನ್ನ ಆಶ್ರಯದಲ್ಲಿಟ್ಟುಕೊಳ್ಳಬೇಕೆಂದು ಮನಸ್ಸು ಮಾಡಿದ್ದೀ. ಯೆಹೋವನೇ, ನೀನು ಅದನ್ನು ಆಶೀರ್ವದಿಸಿದ್ದೀ. ಅದು ನಿತ್ಯವೂ ಸೌಭಾಗ್ಯದಿಂದಿರುವುದು” ಎಂದು ಪ್ರಾರ್ಥಿಸಿದನು.


ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿದನು. ಅವರು ದಾವೀದನಿಗೆ ದಾಸರಾಗಿ ಕಪ್ಪಕೊಡಬೇಕಾಯಿತು.


ಅವರು ಎಕ್ರೋನ್ ಮೊದಲುಗೊಂಡು ಗತ್ ಊರಿನ ವರೆಗೆ ಇಸ್ರಾಯೇಲರಿಂದ ಕಿತ್ತುಕೊಂಡಿದ್ದ ಎಲ್ಲಾ ಪಟ್ಟಣಗಳು ಇಸ್ರಾಯೇಲರಿಗೇ ದೊರಕಿದವು. ಅವುಗಳಿಗೆ ಸೇರಿದ ಗ್ರಾಮಗಳನ್ನೂ ಇಸ್ರಾಯೇಲರು ಫಿಲಿಷ್ಟಿಯರಿಂದ ತೆಗೆದುಕೊಂಡರು. ಇಸ್ರಾಯೇಲರಿಗೂ ಅಮೋರಿಯರಿಗೂ ಸಮಾಧಾನವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು