Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 18:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅಹೀಟೂಬನ ಮಗನಾದ ಚಾದೋಕನೂ ಮತ್ತು ಅಬೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು. ಶವ್ಷನು ಲೇಖಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಹೀಟೂಬನ ಮಗ ಚಾದೋಕನು ಹಾಗು ಅಬೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು; ಶವ್ಷನು ಅವನಿಗೆ ಲೇಖಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅಹೀಟೂಬನ ಮಗನಾದ ಚಾದೋಕನೂ ಅಬೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು; ಶವ್ಷನು ಲೇಖಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಬೀಮೆಲೆಕನೂ ಯಾಜಕರಾಗಿದ್ದರು. ಶವ್ಷನು ಲೇಖಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅಹೀಟೂಬನ ಮಗ ಚಾದೋಕನೂ, ಅಬಿಯಾತರನ ಮಗ ಅಹೀಮೆಲೆಕನೂ ಯಾಜಕರಾಗಿದ್ದರು. ಶವ್ಷನು ಕಾರ್ಯದರ್ಶಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 18:16
9 ತಿಳಿವುಗಳ ಹೋಲಿಕೆ  

ಅಹೀಟೂಬನ ಮಗನಾದ ಚಾದೋಕನೂ ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು, ಸೆರಾಯನು ಲೇಖಕನು,


ಶೆವನು ಕಾರ್ಯದರ್ಶಿ, ಚಾದೋಕ್ ಮತ್ತು ಎಬ್ಯಾತಾರರು ಯಾಜಕರು.


ಶೀಷನ ಮಕ್ಕಳಾದ ಎಲೀಹೋರೇಫ್ ಮತ್ತು ಅಹೀಯಾಹು ಎಂಬುವರು ಲೇಖಕರು. ಅಹೀಲೂದನ ಮಗನಾದ ಯೆಹೋಷಾಫಾಟನು ಅವನ ಮಂತ್ರಿಯು.


ನೆತನೇಲನ ಮಗನಾದ ಶೆಮಾಯನೆಂಬ ಲೇವಿಯ ಲೇಖಕನು ಅರಸನ ಮುಂದೆಯೂ, ಅಧಿಪತಿಗಳು, ಯಾಜಕನಾದ ಚಾದೋಕ್, ಎಬ್ಯಾತಾರನ ಮಗನಾದ ಅಹೀಮೆಲೆಕ್, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರು ಇವರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರನ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸಬೇಕೆಂದು ನೇಮಿಸಿ ಎಲ್ಲಾ ವರ್ಗಗಳ ಸರದಿಯನ್ನು ಚೀಟಿನಿಂದಲೇ ಗೊತ್ತುಮಾಡಿದರು.


ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗನಾದ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿಯೂ ಮತ್ತು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿಯೂ ನೇಮಿಸಿದನು.


ಚೆರೂಯಳ ಮಗನಾದ ಯೋವಾಬನು ಅವನ ಸೇನಾಧಿಪತಿಯೂ, ಅಹೀಲೂದನ ಮಗನಾದ ಯೆಹೋಷಾಫಾಟನು ಮಂತ್ರಿಯೂ ಆಗಿದ್ದರು.


ಯೆಹೋಯಾದನ ಮಗನಾದ ಬೆನಾಯನು, ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಮುಖ್ಯಸ್ಥನಾದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.


ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಎಬ್ಯಾತಾರನೆಂಬುವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದು,


ದಾವೀದನು ಎಲ್ಲಾಜಾರನ ಸಂತಾನದವನಾದ ಚಾದೋಕನೂ, ಈತಾಮಾರನ ಸಂತಾನದವನಾದ ಅಹೀಮೆಲೆಕನು ಯಾಜಕರನ್ನು ಸರದಿಯ ಮೇಲೆ ಸೇವೆಮಾಡತಕ್ಕ ವರ್ಗಗಳನ್ನಾಗಿ ವಿಭಾಗಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು