Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಇಸ್ರಾಯೇಲರನ್ನು ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿ, ಅರಾಮ್ಯರ ಸಮೀಪಕ್ಕೆ ಬಂದು ಅವರೊಡನೆ ಕಾದಾಡುವುದಕ್ಕೊಸ್ಕರ ವ್ಯೂಹ ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಈ ಸುದ್ದಿ ದಾವೀದನಿಗೆ ಮುಟ್ಟಿದಾಗ ಅವನು ಇಸ್ರಯೇಲರೆಲ್ಲರನ್ನೂ ಕೂಡಿಸಿಕೊಂಡು ಜೋರ್ಡನ್ ನದಿಯನ್ನು ದಾಟಿ, ಸಿರಿಯಾದವರ ಸಮೀಪಕ್ಕೆ ಬಂದು, ಅವರೊಡನೆ ಕಾಳಗ ನಡೆಸಲು ವ್ಯೂಹಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಇಸ್ರಾಯೇಲ್ಯರೆಲ್ಲರನ್ನೂ ಕೂಡಿಸಿಕೊಂಡು ಯೊರ್ದನ್‍ಹೊಳೆ ದಾಟಿ ಅರಾಮ್ಯರ ಸಮೀಪಕ್ಕೆ ಬಂದು ಅವರೊಡನೆ ಕಾದುವದಕ್ಕೋಸ್ಕರ ವ್ಯೂಹಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅರಾಮ್ಯರು ಯುದ್ಧಕ್ಕೆ ಜನಕೂಡಿಸುತ್ತಾರೆಂಬ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಇಸ್ರೇಲ್ ಸೈನ್ಯವನ್ನು ಒಟ್ಟುಗೂಡಿಸಿ ಜೋರ್ಡನ್ ನದಿಯನ್ನು ದಾಟಿ ಅರಾಮ್ಯರೊಂದಿಗೆ ಯುದ್ಧಮಾಡಿದನು. ಯುದ್ಧಸನ್ನದ್ಧರಾಗಿ ಕಾಳಗವನ್ನು ಆರಂಭಿಸಿಯೇ ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅದನ್ನು ದಾವೀದನಿಗೆ ತಿಳಿಸಿದಾಗ, ಅವನು ಸಮಸ್ತ ಇಸ್ರಾಯೇಲರನ್ನು ಕೂಡಿಸಿಕೊಂಡು, ಯೊರ್ದನನ್ನು ದಾಟಿ, ಅವರಿಗೆದುರಾಗಿ ವ್ಯೂಹ ಕಟ್ಟಿದನು. ದಾವೀದನು ಅರಾಮ್ಯರಿಗೆದುರಾಗಿ ಸೈನ್ಯವನ್ನು ವ್ಯೂಹ ಕಟ್ಟಿದ ಮೇಲೆ, ಅವರು ಅವನ ವಿರುದ್ಧ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:17
5 ತಿಳಿವುಗಳ ಹೋಲಿಕೆ  

ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರ ಬಾಗಿಲಿನ ಬಳಿಯಲ್ಲಿ ವ್ಯೂಹಕಟ್ಟಿದರು. ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಮೈದಾನದಲ್ಲಿ ನಿಂತರು.


ಅರಾಮ್ಯರಿಗೆ ತಾವು ಇಸ್ರಾಯೇಲರಿಂದ ಅಪಜಯ ಹೊಂದಿದ್ದೇವೆಂದು ಗೊತ್ತಾದಾಗ ಅವರು ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅರಾಮ್ಯರನ್ನು ಕರೆಕಳುಹಿಸಿದರು. ಹದರೆಜರನ ಸೇನಾಧಿಪತಿಯಾದ ಶೋಫಕನು ಅವರ ನಾಯಕನಾದನು.


ಅರಾಮ್ಯರು ಯುದ್ಧಕ್ಕೆ ನಿಂತಾಗ ಇಸ್ರಾಯೇಲರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳುಸಾವಿರ ರಥಗಳನ್ನು ಹಾಳುಮಾಡಿ, ನಲ್ವತ್ತು ಸಾವಿರ ಕಾಲಾಳುಗಳನ್ನು ಕೊಂದುಬಿಟ್ಟನು. ಅವನು ಸೇನಾಧಿಪತಿಯಾದ ಶೋಫಕನನ್ನೂ ಕೊಂದನು.


ಈ ಸುದ್ದಿಯು ದಾವೀದನಿಗೆ ತಲುಪಿದಾಗ ಅವನು ಇಸ್ರಾಯೇಲರೆಲ್ಲರನ್ನು ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿ ಹೇಲಾಮಿಗೆ ಬಂದನು. ಅರಾಮ್ಯರು ವ್ಯೂಹರಚಿಸಿ ದಾವೀದನೊಡನೆ ಯುದ್ಧಕ್ಕೆ ನಿಂತಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು