Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅರಾಮ್ಯರು ಯುದ್ಧಕ್ಕೆ ನಿಂತಾಗ ಇಸ್ರಾಯೇಲರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳುಸಾವಿರ ರಥಗಳನ್ನು ಹಾಳುಮಾಡಿ, ನಲ್ವತ್ತು ಸಾವಿರ ಕಾಲಾಳುಗಳನ್ನು ಕೊಂದುಬಿಟ್ಟನು. ಅವನು ಸೇನಾಧಿಪತಿಯಾದ ಶೋಫಕನನ್ನೂ ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸಿರಿಯಾದವರು ಯುದ್ಧಕ್ಕೆ ನಿಂತಾಗ ಇಸ್ರಯೇಲರ ಮುಂದೆ ಸೋತು ಓಡಿಹೋದರು;ದಾವೀದನು ಸಿರಿಯಾದವರ ಏಳುಸಾವಿರ ರಥಗಳನ್ನು ಹಾಳುಮಾಡಿದನು. ನಲವತ್ತು ಸಾವಿರ ಮಂದಿ ಕಾಲಾಳುಗಳನ್ನು ಸದೆಬಡಿದನು. ಸೇನಾಪತಿಯಾದ ಶೋಫಕನನ್ನೂ ಕೊಂದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅರಾಮ್ಯರು ಯುದ್ಧಕ್ಕೆ ನಿಂತಾಗ ಇಸ್ರಾಯೇಲ್ಯರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳು ಸಾವಿರ ರಥಗಳನ್ನು ಹಾಳು ಮಾಡಿ ನಾಲ್ವತ್ತು ಸಾವಿರ ಮಂದಿ ಕಾಲಾಳುಗಳನ್ನು ಕೊಂದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅರಾಮ್ಯರು ಇಸ್ರೇಲರ ಎದುರು ನಿಲ್ಲಲಾರದೆ ಬೆನ್ನುಹಾಕಿ ಓಡಿದರು. ಆ ದಿವಸ ದಾವೀದನೂ ಅವನ ಸೈನಿಕರೂ ಅರಾಮ್ಯರ ಏಳು ಸಾವಿರ ಮಂದಿ ರಾಹುತರನ್ನೂ ನಲವತ್ತು ಸಾವಿರ ಮಂದಿ ಕಾಲಾಳುಗಳನ್ನೂ ಕೊಂದರು. ಇವರಲ್ಲಿ ಅರಾಮ್ಯರ ಸೇನಾಪತಿಯಾದ ಶೋಫಕನೂ ಕೊಲ್ಲಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ಅರಾಮ್ಯರು ಇಸ್ರಾಯೇಲರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ಸಾವಿರ ರಥಗಳನ್ನೂ ಹಾಳು ಮಾಡಿ, ನಲವತ್ತು ಸಾವಿರ ಕಾಲಾಳುಗಳನ್ನೂ, ಅವರ ಸೇನಾಧಿಪತಿಯಾದ ಶೋಫಕನನ್ನೂ ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:18
7 ತಿಳಿವುಗಳ ಹೋಲಿಕೆ  

ಅರಾಮ್ಯರು ಇಸ್ರಾಯೇಲ್ಯರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳುನೂರು ರಥ ಸಾರಥಿಗಳನ್ನು ನಾಶ ಮಾಡಿ, ನಲ್ವತ್ತು ಸಾವಿರ ಮಂದಿ ರಾಹುತರನ್ನು ಹತ್ಯೆಮಾಡಿದನು. ಸೇನಾಧಿಪತಿಯಾದ ಶೋಬಕನು ಗಾಯಗೊಂಡು ಅಲ್ಲೇ ಸತ್ತನು.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.


ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ.


ನನಗೆ ಶೌರ್ಯವೆಂಬ ನಡುಕಟ್ಟನ್ನು ಬಿಗಿಯುವವನೂ, ನನ್ನ ಮಾರ್ಗವನ್ನು ಸರಾಗ ಮಾಡುವವನೂ ದೇವರೇ.


ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಇಸ್ರಾಯೇಲರನ್ನು ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿ, ಅರಾಮ್ಯರ ಸಮೀಪಕ್ಕೆ ಬಂದು ಅವರೊಡನೆ ಕಾದಾಡುವುದಕ್ಕೊಸ್ಕರ ವ್ಯೂಹ ಕಟ್ಟಿದನು.


ಹದರೆಜರನ ದಾಸರು ಇಸ್ರಾಯೇಲರ ಮುಂದೆ ತಮ್ಮ ಕೈ ಸಾಗದೆಂದು ತಿಳಿದು ದಾವೀದನೊಡನೆ ಒಪ್ಪಂದ ಮಾಡಿಕೊಂಡು ಅವನ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯಮಾಡುವುದಕ್ಕೆ ಮನಸ್ಸು ಮಾಡಲ್ಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು