Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಓಬೇದ ಹಾಗೂ ಜೆಸ್ಸೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸಲ್ಮನು ಬೋವಜನನ್ನು ಪಡೆದನು; ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12-13 ಬೋವಜನು ಓಬೇದನ ತಂದೆ. ಓಬೇದನು ಇಷಯನ ತಂದೆ. ಇಷಯನು ಎಲೀಯಾಬನ ತಂದೆ. ಎಲೀಯಾಬನು ಇಷಯನ ಚೊಚ್ಚಲಮಗನು; ಎರಡನೆಯವನು ಅಬೀನಾದಾಬ್; ಮೂರನೆಯವನು ಶಿಮ್ಮ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಬೋವಜನು ಓಬೇದನ ತಂದೆ, ಓಬೇದನು ಇಷಯನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:12
11 ತಿಳಿವುಗಳ ಹೋಲಿಕೆ  

ಮತ್ತೊಮ್ಮೆ, ಯೆಶಾಯನು ಹೇಳುವುದೇನಂದರೆ, “ಇಷಯನ ವಂಶಸ್ಥನೂ ಅಂದರೆ ಜನಾಂಗಗಳನ್ನು ಆಳತಕ್ಕವನು ಬರುತ್ತಾನೆ. ಜನಾಂಗಗಳು ಆತನನ್ನು ನಿರೀಕ್ಷಿಸುತ್ತಿರುವರು.”


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.


ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು.


ಯೆಹೋವನು ಅವನನ್ನು ಕೊಲ್ಲಿಸಿ, ರಾಜ್ಯವನ್ನು ಇಷಯನ ಮಗನಾದ ದಾವೀದನಿಗೆ ಒಪ್ಪಿಸಿದನು.


ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.


ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.


ಆ ಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ನೇಮಕಮಾಡಿ; ‘ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನ್ನ ಹೃದಯಕ್ಕೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವನು’ ಎಂಬುದಾಗಿ ಅವನ ವಿಷಯವಾಗಿ ಸಾಕ್ಷಿಹೇಳಿದನು.


ದಾವೀದನು ಇಷಯನ ಮಗನು; ಇಷಯನು ಓಬೇದನ ಮಗನು; ಓಬೇದನು ಬೋವಜನ ಮಗನು; ಬೋವಜನು ಸಲ್ಮೋನನ ಮಗನು; ಸಲ್ಮೋನನು ನಹಶೋನನ ಮಗನು;


ಸಲ್ಮೋನನ ಮಗನಾದ ಬೋವಜನು ರಾಹಾಬಳಲ್ಲಿ ಹುಟ್ಟಿದವನು. ಬೋವಜನ ಮಗನು ಓಬೇದನು ರೂತಳಲ್ಲಿ ಹುಟ್ಟಿದವನು. ಓಬೇದನ ಮಗನು ಇಷಯನು.


ನಹಶೋನನು ಸಲ್ಮನನ್ನು ಪಡೆದನು; ಸಲ್ಮನು ಬೋವಜನನ್ನು ಪಡೆದನು.


ಇಷಯನ ಚೊಚ್ಚಲ ಮಗನು ಎಲೀಯಾಬ್, ಎರಡನೆಯ ಮಗ ಅಬೀನಾದಾಬ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು