Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಸೆಗೂಬನು ಯಾಯೀರನನ್ನು ಪಡೆದನು; ಇವನಿಗೆ ಗಿಲ್ಯಾದ್ ದೇಶದಲ್ಲಿ ಇಪ್ಪತ್ತ್ಮೂರು ಪಟ್ಟಣಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸೆಗೂಬನಿಗೆ ಯಾಯೀರ ಎಂಬ ಮಗ ಜನಿಸಿದ. ಯಾಯೀರ ಗಿಲ್ಯಾದನ ಇಪ್ಪತ್ಮೂರು ಪಟ್ಟಣಗಳ ಮೇಲೆ ಆಡಳಿತ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಸೆಗೂಬನು ಯಾಯೀರನನ್ನು ಪಡೆದನು. ಇವನಿಗೆ ಗಿಲ್ಯಾದ್ ದೇಶದಲ್ಲಿ ಇಪ್ಪತ್ತಮೂರು ಪಟ್ಟಣಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಸೆಗೂಬನು ಯಾಯೀರನ ತಂದೆ. ಇವನಿಗೆ ಗಿಲ್ಯಾದ್ ಪ್ರಾಂತ್ಯದಲ್ಲಿ ಇಪ್ಪತ್ತಮೂರು ಪಟ್ಟಣಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಸೆಗೂಬನು ಯಾಯೀರನ ತಂದೆ, ಇವನಿಗೆ ಗಿಲ್ಯಾದಿನ ದೇಶದಲ್ಲಿ ಇಪ್ಪತ್ತು ಮೂರು ಪಟ್ಟಣಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:22
7 ತಿಳಿವುಗಳ ಹೋಲಿಕೆ  

ಮೋಶೆಯು ಮನಸ್ಸೆ ಕುಲದ ಅರ್ಧ ಗೋತ್ರಗಳಿಗೆ ಕೊಟ್ಟನು. ಯಾಯೀರನ ಗ್ರಾಮಗಳೆನ್ನಿಸಿಕೊಳ್ಳುವ ಅರವತ್ತು ಊರುಗಳು ಇದರೊಂದಿಗೆ ಇರುತ್ತವೆ.


(ಬಾಷಾನ್ ದೇಶವು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡನು. ಅವನು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನ ವರೆಗೂ ಉಂಟು.)


ಮನಸ್ಸೆಯ ವಂಶದವನಾದ ಯಾಯೀರನು ಯುದ್ಧಕ್ಕೆ ಹೊರಟು ಅಮೋರಿಯರ ಗ್ರಾಮಗಳನ್ನು ಸ್ವಾಧೀನಮಾಡಿಕೊಂಡು ಅವುಗಳಿಗೆ ಯಾಯೀರನ ಗ್ರಾಮಗಳೆಂದು ಹೆಸರಿಟ್ಟನು.


ಹೆಚ್ರೋನನು ಅರವತ್ತು ವರ್ಷದವನಾದಾಗ ಗಿಲ್ಯಾದ್ಯರ ಮೂಲಪುರುಷನಾದ ಮಾಕೀರನ ಮಗಳನ್ನು ಮದುವೆಮಾಡಿಕೊಂಡನು. ಆಕೆಯು ಅವನಿಂದ ಸೆಗೂಬನನ್ನು ಪಡೆದಳು.


ಗೆಷೂರ್ಯರು ಮತ್ತು ಅರಾಮ್ಯರು ಯಾಯೀರನ ಸಂತಾನದವರಿಂದ ಯಾಯೀರಿನ ಗ್ರಾಮಗಳನ್ನೂ ಕೆನತ್ ಪ್ರಾಂತ್ಯದ ಗ್ರಾಮಗಳನ್ನು, ಒಟ್ಟು ಅರವತ್ತು ಸಂಸ್ಥಾನಗಳನ್ನು ಗೆದ್ದುಕೊಂಡರು. ಈ ಸಂಸ್ಥಾನದವರೆಲ್ಲರೂ ಗಿಲ್ಯಾದ್ಯರ ಮೂಲಪುರುಷನಾದ ಮಾಕೀರನ ಗೋತ್ರದವರು.


ಮೋಶೆಯು ಮನಸ್ಸೆಯ ಮಗನಾದ ಮಾಕೀರನ ಸಂತತಿಯವರಿಗೆ ಗಿಲ್ಯಾದ್ ಪ್ರದೇಶವನ್ನು ಕೊಡಲಾಗಿ ಅವರು ಅಲ್ಲೇ ವಾಸಮಾಡಿಕೊಂಡರು.


ನಾನು ಗಿಲ್ಯಾದ್ ದೇಶವನ್ನು ಮಾಕೀರನಿಗೂ ಗಿಲ್ಯಾದ್ ಮೊದಲುಗೊಂಡು (ದಕ್ಷಿಣದ) ಅರ್ನೋನ್ ತಗ್ಗಿನ ವರೆಗೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು