Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:51 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಬೇತ್ಲೆಹೇಮ್ಯರ ಮೂಲಪುರುಷನಾದ ಸಲ್ಮ ಮತ್ತು ಬೇತ್ಗಾದೇರಿನ ಮೂಲಪುರುಷನಾದ ಹಾರೇಫ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಅವನ ಇನ್ನೊಬ್ಬ ಮಗ ಸಲ್ಮ ಬೆತ್ಲೆಹೇಮನ್ನೂ ಅವನ ಮೂರನೆಯ ಮಗ ಹಾರೇಫ್, ಬೇತ್ಗಾದೇರ್ ಪಟ್ಟಣವನ್ನೂ ಕಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಬೇತ್ಗಾದೇರಿನವರ ಮೂಲಪುರುಷನಾದ ಹಾರೇಫ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಬೆತ್ಲೆಹೇಮನ್ನು ಕಟ್ಟಿದವನಾದ ಸಲ್ಮ ಮತ್ತು ಬೇತ್ಗಾದೇರ್ ಕಟ್ಟಿದವನಾದ ಹಾರೇಫ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಅವನ ಇನ್ನೊಬ್ಬ ಮಗ ಸಲ್ಮ ಬೇತ್ಲೆಹೇಮನ್ನೂ, ಅವನ ಮೂರನೆಯ ಮಗ ಹಾರೇಫ್, ಬೇತ್ಗಾದೇರ್ ಪಟ್ಟಣವನ್ನೂ ಕಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:51
11 ತಿಳಿವುಗಳ ಹೋಲಿಕೆ  

ಗೆದೋರಿನ ಮೂಲಪುರುಷನು ಪೆನೂವೇಲನು. ಹೂಷಾಹ್ಯರ ಮೂಲಪುರುಷನು ಏಜೆರ್. ಇವರು ಎಫ್ರಾತಾಹಳ ಚೊಚ್ಚಲ ಮಗನಾದ ಹೂರನ ಮಕ್ಕಳು. ಈ ಹೂರನೇ ಬೇತ್ಲೆಹೇಮ್ಯರ ಮೂಲಪುರುಷನು.


ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದಲ್ಲವೇ?” ಅಂದರು.


“‘ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಸಣ್ಣದಲ್ಲ. ಏಕೆಂದರೆ ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕ ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಉದಯಿಸುವನು.’ ಎಂಬುದಾಗಿ ಪ್ರವಾದಿಯ ಮುಖಾಂತರ ಬರೆಯಲ್ಪಟಿದೆ” ಎಂದು ಹೇಳಿದರು.


ಅರಸನಾದ ಹೆರೋದನ ಕಾಲದಲ್ಲಿ; ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಿನಲ್ಲಿ ಯೇಸು ಹುಟ್ಟಿದಾಗ ಪೂರ್ವದೇಶದ ಜ್ಞಾನಿಗಳು ಯೆರೂಸಲೇಮಿಗೆ ಬಂದು,


ಅದಕ್ಕೆ ಊರ ಬಾಗಿಲಲ್ಲಿ ಕೂಡಿ ಬಂದಿದ್ದ ಹಿರಿಯರೂ, ಎಲ್ಲಾ ಜನರೂ “ಹೌದು, ನಾವೇ ಸಾಕ್ಷಿಗಳು; ಯೆಹೋವನು ಇಸ್ರಾಯೇಲನ ಮನೆಯನ್ನು ಕಟ್ಟಿದ. ರಾಹೇಲ್, ಲೇಯಾ ಎಂಬ ಸ್ತ್ರೀಯರನ್ನು ಹೇಗೋ ಹಾಗೆಯೇ ನಿನ್ನ ಮನೆಗೆ ಬರುವ ಈ ಸ್ತ್ರೀಯನ್ನೂ ಅಭಿವೃದ್ಧಿಪಡಿಸಲಿ. ಎಫ್ರಾತದಲ್ಲಿ ಅಭಿವೃದ್ಧಿ ಹೊಂದು, ಬೇತ್ಲೆಹೇಮಿನಲ್ಲಿ ಪ್ರಸಿದ್ಧನಾಗು.


ಆಗ ಬೋವಜನು ಬೇತ್ಲೆಹೇಮಿನಿಂದ ಹೊಲಕ್ಕೆ ಬಂದು ಕೊಯ್ಯುವವರಿಗೆ, “ಯೆಹೋವನು ನಿಮ್ಮ ಸಂಗಡ ಇರಲಿ” ಅಂದನು. ಅವರು, “ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಎಂದು ಹರಸಿದರು.


ಹಾಗೆಯೇ ಪ್ರಯಾಣಮಾಡಿಕೊಂಡು ಅವರಿಬ್ಬರೂ ಬೇತ್ಲೆಹೇಮಿಗೆ ಬಂದು ಊರೊಳಕ್ಕೆ ಹೋದಾಗ ಅಲ್ಲಿಯ ಜನರಲ್ಲಿ ಕುತೂಹಲ ಮೂಡಿತು. ಸ್ತ್ರೀಯರು, “ಈಕೆಯು ನವೊಮಿಯಲ್ಲವೇ?” ಎಂದು ವಿಚಾರಿಸಲು


ರಾಹೇಲಳು ಸತ್ತ ಮೇಲೆ, ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಆಕೆಯನ್ನು ಸಮಾಧಿಮಾಡಿದರು.


ಕಾಲೇಬನ ಹೆಂಡತಿಯಾದ ಎಫ್ರಾತಳ ಚೊಚ್ಚಲ ಮಗನಾದ ಹೂರನ ಮಕ್ಕಳು ಕಿರ್ಯತ್ಯಾರೀಮರ ಮೂಲಪುರುಷನಾದ ಶೋಬಾಲ್,


ಕಿರ್ಯತ್ಯಾರೀಮಿನ ಮೂಲಪುರುಷನಾದ ಶೋಬಾಲನ ಸಂತಾನದವರು ಹಾರೋಯೆ, ಮಾನಹತಿಯರ ಅರ್ಧ ಜನರು,


ನ್ಯಾಯಸ್ಥಾಪಕರು ಆಳುತ್ತಿದ್ದ ಕಾಲದಲ್ಲಿ ಒಮ್ಮೆ ದೇಶದಲ್ಲಿ ಬರ ಬಂದಿದ್ದರಿಂದ ಯೆಹೂದ ಪ್ರಾಂತ್ಯದ ಬೇತ್ಲೆಹೇಮಿನವನೊಬ್ಬನು ತನ್ನ ಹೆಂಡತಿ, ಇಬ್ಬರು ಪುತ್ರರ ಸಹಿತವಾಗಿ ಮೋವಾಬ್‍ ದೇಶದಲ್ಲಿ ವಾಸಮಾಡುವುದಕ್ಕಾಗಿ ಹೊರಟುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು