1 ಪೂರ್ವಕಾಲ ವೃತ್ತಾಂತ 2:55 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
55 ಯಾಬೇಚಿನಲ್ಲಿ ವಾಸಿಸುವ ಬರವಣಿಗೆಯಲ್ಲಿ ಮತ್ತು ದಾಖಲೆಗಳನ್ನು ಬರೆಯುವುದರಲ್ಲೂ ಮತ್ತು ಪ್ರತಿಗಳನ್ನು ಮಾಡುವುದರಲ್ಲೂ ಪ್ರವೀಣರಾದ ತಿರ್ರಾತ್ಯರು, ಶಿಮ್ಗಾತ್ಯರು ಮತ್ತು ಸೂಕಾತ್ಯರು, ಇವರು ರೇಕಾಬನ ಮನೆಯವರ ಮೂಲ ಪುರುಷನಾಗಿರುವ ಹಮತನಿಂದ ಹುಟ್ಟಿದ ಕೇನ್ಯರು.
55 ಬರವಣಿಗೆಯಲ್ಲಿ ಮತ್ತು ದಾಖಲೆಗಳನ್ನು ನಕಲು ಮಾಡುವುದರಲ್ಲಿ ಪ್ರವೀಣರಾದ ತಿರ್ರಾತ್ಯರು, ಶಿಮ್ಗಾತ್ಯರು, ಸುಕಾತ್ಯರು ಯಾಬೇಚಿನಲ್ಲಿ ವಾಸಿಸಿದ್ದರು. ರೇಕಾಬ್ಬರೊಂದಿಗೆ ಅಂತರ್ ವಿವಾಹ ಮಾಡಿಕೊಂಡ ಕೇನ್ಯರು ಇವರೇ.
55 ಶಾಸ್ತ್ರಿಗಳ ಸಂತಾನ: ಯಾಬೇಚ್, ತಿರ್ರಾತ್ಯ, ಶಿಮ್ಗಾತ್ಯ ಮತ್ತು ಸೂಕಾತ್ಯ ಎಂಬ ಸ್ಥಳಗಳಲ್ಲಿ ವಾಸಿಸುವರು. ಇವರು ಹಮಾತಿನಿಂದ ಬಂದ ಕೇನ್ಯರು. ಬೆತ್‌ರೇಕಾಬನ್ನು ಹಮಾತನು ಸ್ಥಾಪಿಸಿದನು.
ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ, ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿ, “ನಿನ್ನ ವಿಷಯದಲ್ಲಿ, ನನ್ನ ಹೃದಯವು ಯಥಾರ್ಥವಾಗಿರುವಂತೆ ನಿನ್ನ ಹೃದಯವು ಯಥಾರ್ಥವಾಗಿರುವುದೋ?” ಎಂದು ಕೇಳಿದನು. ಅವನು, “ಹೌದು” ಎಂದು ಉತ್ತರ ಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಯನ್ನು ಕೊಡು” ಎನ್ನಲು ಅವನು ತನ್ನ ಕೈಯನ್ನು ಕೊಟ್ಟನು. ಯೇಹುವು ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.
ರೇಕಾಬನ ಮಗನಾದ ಯೋನಾದಾಬನ ಸಂತಾನದವರೊಳಗೆ ನನ್ನ ಸಮ್ಮುಖದಲ್ಲಿ ಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು. ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇದನ್ನು ನುಡಿದಿದ್ದಾನೆ’” ಎಂಬುದೇ.
(ಕೇನ್ಯನಾದ) ಹೆಬೆರನು ಉಳಿದ ಕೇನ್ಯರಿಂದ ತನ್ನನ್ನು ಪ್ರತ್ಯೇಕಿಸಿಕೊಂಡನು. ಕೇನ್ಯರು ಮೋಶೆಯ ಮಾವನಾದ ಹೋಬಾಬನ ವಂಶದವರು. ಹೆಬೆರನು ಕೆದೆಷಿನ ಹತ್ತಿರ ಇರುವ ಚಾನನ್ನೀಮೆಂಬ ಊರಿನ ಏಲೋನ್ ವೃಕ್ಷದ ವರೆಗೆ ಬಂದು ಅಲ್ಲಿ ಗುಡಾರ ಹಾಕಿಕೊಂಡಿದ್ದನು.
ಆದರೆ ಅವನು ಕೇನ್ಯರಿಗೆ, “ನೀವು ಅಮಾಲೇಕ್ಯರನ್ನು ಬಿಟ್ಟುಹೋಗಿರಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ. ಇಸ್ರಾಯೇಲರು ಐಗುಪ್ತದಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರಲ್ಲಾ” ಎಂದು ಹೇಳಿಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.