Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 20:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮರುವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಯೋವಾಬನು ಬಲವಾದ ಸೈನ್ಯವನ್ನು ಯುದ್ಧಕ್ಕೆ ಮುನ್ನಡೆಸಿ, ಅಮ್ಮೋನಿಯರ ಪ್ರಾಂತ್ಯಗಳನ್ನು ವಶಪಡಿಸಿಕೊಂಡು ರಬ್ಬಕ್ಕೆ ಹೋಗಿ ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮರುವರ್ಷ, ಅರಸರು ಯುದ್ಧಕ್ಕೆ ಹೊರಡುವ ಕಾಲದಲ್ಲಿ ಯೋವಾಬನು ಅಮ್ಮೋನಿಯರ ಪ್ರಾಂತ್ಯಗಳನ್ನು ಹಾಳುಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದನು. ಅವನೊಡನೆ ಬಲವಾದ ಸೈನ್ಯವಿತ್ತು. ದಾವೀದನು ಜೆರುಸಲೇಮಿನಲ್ಲೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಅದನ್ನು ಹಾಳುಮಾಡಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮರುವರುಷ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಯೋವಾಬನು ಬಲವಾದ ಸೈನ್ಯವನ್ನು ಯುದ್ಧಕ್ಕೆ ನಡಿಸಿ ಅಮ್ಮೋನಿಯರ ಪ್ರಾಂತಗಳನ್ನು ಹಾಳುಮಾಡಿ ರಬ್ಬಕ್ಕೆ ಹೋಗಿ ಅದಕ್ಕೆ ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇವಿುನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಹಾಳುಮಾಡಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ವಸಂತಕಾಲದಲ್ಲಿ ರಾಜರುಗಳು ಯುದ್ಧಕ್ಕೆ ಹೊರಡುವ ಸಮಯ. ಯೋವಾಬನೂ ತನ್ನ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟನು. ಆದರೆ ದಾವೀದನು ಜೆರುಸಲೇಮಿನಲ್ಲಿಯೇ ಉಳಿದುಕೊಂಡನು. ಇಸ್ರೇಲಿನ ಸೈನ್ಯವು ಅಮ್ಮೋನ್ ದೇಶದೊಳಗೆ ನುಗ್ಗಿ ಅದನ್ನು ನಾಶಮಾಡಿದರು. ಆಮೇಲೆ ರಬ್ಬ ಪಟ್ಟಣಕ್ಕೆ ಮುತ್ತಿಗೆಹಾಕಿ ಸಂಪೂರ್ಣವಾಗಿ ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮರು ವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ, ಯೋವಾಬನು ಬಲವಾದ ಸೈನ್ಯವನ್ನು ಕರೆದುಕೊಂಡು ಹೋಗಿ, ಅಮ್ಮೋನಿಯರ ಪ್ರಾಂತಗಳನ್ನು ಹಾಳು ಮಾಡಿ, ರಬ್ಬ ನಗರಕ್ಕೆ ಮುತ್ತಿಗೆಹಾಕಿದನು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣದ ಮೇಲೆ ದಾಳಿಮಾಡಿ, ಅದನ್ನು ನಾಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 20:1
15 ತಿಳಿವುಗಳ ಹೋಲಿಕೆ  

ರಾಜರೆಲ್ಲರು ಸಾಮಾನ್ಯವಾಗಿ ವಸಂತಕಾಲದ ಪ್ರಾರಂಭದಲ್ಲಿ ಯುದ್ಧಕ್ಕೆ ಹೊರಡುವ ಸಮಯವನ್ನು ಗೊತ್ತುಮಾಡುತ್ತಿದ್ದರು. ದಾವೀದನು ಯೋವಾಬನನ್ನೂ, ತನ್ನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ನಾಶ ಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು.


ನಾನು ರಬ್ಬದ ಕೋಟೆಯನ್ನು ಬೆಂಕಿಯಿಂದ ಉರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು; ಆ ಯುದ್ಧದ ದಿನದಲ್ಲಿ ಆರ್ಭಟವಾಗುವುದು, ಆ ಸುಂಟರಗಾಳಿಯಂತ ದಿನದಲ್ಲಿ ಪ್ರಚಂಡ ಕಾದಾಟವೂ ಉಂಟಾಗುವುದು.


(ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈ ಅಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)


ನಾನು ರಬ್ಬಾ ಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿಯೂ, ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ತಂಗುವ ಸ್ಥಳವನ್ನಾಗಿಯೂ ಮಾಡುವೆನು. ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’”


ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ, ಯೆಹೂದದೊಳಗೆ ಕೋಟೆ ಕೊತ್ತಲಗಳಿಂದ ಕೂಡಿದ ಯೆರೂಸಲೇಮಿಗೂ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು.


ಕೇಳು, ಕೆಂಡವನ್ನು ಊದುತ್ತಾ ಉಪಯುಕ್ತವಾದ ಆಯುಧವನ್ನು ಉಂಟುಮಾಡುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ, ಹಾಳುಮಾಡುವ ಕೆಡುಕನನ್ನು ನಿರ್ಮಿಸಿದವನೂ ನಾನೇ.


ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.


ಎಲೀಷನು ಮರಣ ಹೊಂದಲು, ಅವನ ಶವವನ್ನು ಅವರು ಸಮಾಧಿಮಾಡಿದರು. ಮೋವಾಬ್ಯರು ಪ್ರತಿ ವರ್ಷದ ಪ್ರಾರಂಭದಲ್ಲಿ ಸುಲಿಗೆ ಮಾಡುವುದಕ್ಕೋಸ್ಕರ ಗುಂಪು ಗುಂಪಾಗಿ ಬರುತ್ತಿದ್ದರು.


ಒಂದು ವರ್ಷ ದಾಟಿದ ನಂತರ ಬೆನ್ಹದದನು ಅರಾಮ್ಯರನ್ನು ಕೂಡಿಸಿಕೊಂಡು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಅಫೇಕಕ್ಕೆ ಹೋದನು.


ಆಗ ಪ್ರವಾದಿಯು ಪುನಃ ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಅರಾಮ್ಯರ ಅರಸನು ಮುಂದಿನ ವರ್ಷದಲ್ಲಿ ಇನ್ನೊಮ್ಮೆ ನಿನಗೆ ವಿರುದ್ಧವಾಗಿ ಬರುತ್ತಾನೆ. ಆದುದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೋ, ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬುದನ್ನು ಆಲೋಚಿಸು” ಎಂದನು.


ದಾವೀದನು ಮಹನಯಿಮಿಗೆ ಬಂದಾಗ ಅಮ್ಮೋನಿಯರ ರಬ್ಬಾ ಊರಿನವನಾದ ನಾಹಾಷನ ಮಗ ಶೋಬಿ, ಲೋದೆಬಾರಿನ ಅಮ್ಮೀಯೇಲನ ಮಗನಾದ ಮಾಕೀರ್, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವರು


ಹದರೆಜರನ ದಾಸರು ಇಸ್ರಾಯೇಲರ ಮುಂದೆ ತಮ್ಮ ಕೈ ಸಾಗದೆಂದು ತಿಳಿದು ದಾವೀದನೊಡನೆ ಒಪ್ಪಂದ ಮಾಡಿಕೊಂಡು ಅವನ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯಮಾಡುವುದಕ್ಕೆ ಮನಸ್ಸು ಮಾಡಲ್ಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು