1 ಪೂರ್ವಕಾಲ ವೃತ್ತಾಂತ 21:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ದಾವೀದನು ಕಣ್ಣೆತ್ತಿ ನೋಡಿ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನೂ, ಚಾಚಿದ ಕೈಯಲ್ಲಿ ಯೆರೂಸಲೇಮಿಗೆ ವಿರುದ್ಧವಾಗಿ ಹಿರಿದ ಕತ್ತಿಯಿರುವುದನ್ನೂ ಕಂಡಾಗ ಅವನೂ, ಹಿರಿಯರೂ ಗೋಣಿತಟ್ಟನ್ನು ಹೊದ್ದುಕೊಂಡು ಬೋರಲು ಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ದಾವೀದನು ಕಣ್ಣೆತ್ತಿ ನೋಡಿ ಸರ್ವೇಶ್ವರನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನೂ ಚಾಚಿದ ಕೈಯಲ್ಲಿ ಜೆರುಸಲೇಮಿಗೆ ವಿರೋಧವಾಗಿ ಹಿರಿದ ಕತ್ತಿ ಇರುವುದನ್ನೂ ಕಂಡನು. ಆಗ ಅವನೂ ಹಿರಿಯರೂ ಗೋಣಿತಟ್ಟನ್ನು ಉಟ್ಟುಕೊಂಡು ಬೋರಲಾಗಿ ಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ದಾವೀದನು ಕಣ್ಣೆತ್ತಿ ನೋಡಿ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವದನ್ನೂ ಚಾಚಿದ ಕೈಯಲ್ಲಿ ಯೆರೂಸಲೇವಿುಗೆ ವಿರೋಧವಾಗಿ ಹಿರಿದ ಕತ್ತಿಯಿರುವದನ್ನೂ ಕಂಡಾಗ ಅವನೂ ಹಿರಿಯರೂ ಗೋಣೀತಟ್ಟನ್ನು ಹೊದ್ದುಕೊಂಡವರಾಗಿ ಬೋರ್ಲಬಿದ್ದರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದಾವೀದನು ಮೇಲಕ್ಕೆ ನೋಡಿದಾಗ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನು ಕಂಡನು. ದೇವದೂತನು ತನ್ನ ಖಡ್ಗವನ್ನು ಜೆರುಸಲೇಮಿನ ಮೇಲೆ ಚಾಚಿದ್ದನು. ಆಗ ದಾವೀದನೂ ಅವನೊಂದಿಗಿದ್ದ ಹಿರಿಯರೂ ಬಗ್ಗಿ ನೆಲದ ಮೇಲೆ ಮುಖಗಳನ್ನಿಟ್ಟು ನಮಸ್ಕರಿಸಿದರು. ಅವರು ಶೋಕವಸ್ತ್ರಗಳನ್ನು ಧರಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ದಾವೀದನು ತನ್ನ ಕಣ್ಣೆತ್ತಿ ಭೂಮಿಗೂ, ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಯೆಹೋವ ದೇವರ ದೂತನನ್ನು ಕಂಡನು. ಅವನ ಕೈಯಲ್ಲಿ ಯೆರೂಸಲೇಮಿನ ಮೇಲೆ ಚಾಚಿದ್ದ ಹಿರಿದ ಖಡ್ಗ ಇತ್ತು. ಆಗ ದಾವೀದನೂ, ಇಸ್ರಾಯೇಲಿನ ಹಿರಿಯರೂ ಗೋಣಿತಟ್ಟುಗಳನ್ನು ಹೊದ್ದುಕೊಂಡು ಬೋರಲಾಗಿ ಬಿದ್ದರು. ಅಧ್ಯಾಯವನ್ನು ನೋಡಿ |