Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಲ್ಲಿ ದಾವೀದನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿ, ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ, ಆಕಾಶದಿಂದ ಯಜ್ಞವೇದಿಯ ಮೇಲೆ ಬೆಂಕಿಯನ್ನು ಸುರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಲ್ಲಿ ಸರ್ವೇಶ್ವರಸ್ವಾಮಿಗಾಗಿ ಬಲಿಪೀಠವನ್ನು ಕಟ್ಟಿಸಿದನು. ಅದರ ಮೇಲೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಅರ್ಪಿಸಿ ಸರ್ವೇಶ್ವರನನ್ನು ಪ್ರಾರ್ಥಿಸಿದನು. ಸರ್ವೇಶ್ವರ ಅವನ ಮೊರೆಯನ್ನು ಆಲಿಸಿ, ಆಕಾಶದಿಂದ ಬಲಿಪೀಠದ ಮೇಲೆ ಬೆಂಕಿಯನ್ನು ಬರಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿ ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ ಆಕಾಶದಿಂದ ಯಜ್ಞವೇದಿಯ ಮೇಲೆ ಬೆಂಕಿಯನ್ನು ಸುರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅಲ್ಲಿ ದೇವರನ್ನು ಆರಾಧಿಸಲು ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ದಾವೀದನು ಅದರ ಮೇಲೆ ಸರ್ವಾಂಗಹೋಮವನ್ನೂ ಸಮಾಧಾನಯಜ್ಞವನ್ನೂ ಅರ್ಪಿಸಿದನು. ದಾವೀದನು ಯೆಹೋವನಿಗೆ ಪ್ರಾರ್ಥಿಸಿದನು. ಯೆಹೋವನು ಪರಲೋಕದಿಂದ ಬೆಂಕಿಯನ್ನು ಕಳುಹಿಸುವುದರ ಮೂಲಕ ದಾವೀದನಿಗೆ ಉತ್ತರಿಸಿದನು. ಸರ್ವಾಂಗಹೋಮಗಳ ಯಜ್ಞವೇದಿಕೆಯ ಮೇಲೆ ಬೆಂಕಿಯು ಇಳಿದುಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ದಾವೀದನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿ ಯೆಹೋವ ದೇವರನ್ನು ಪ್ರಾರ್ಥಿಸಿದನು. ಆಗ ಅವರು ಆಕಾಶದಿಂದ ದಹನಬಲಿಪೀಠದ ಮೇಲೆ ಅಗ್ನಿಯಿಂದ ಅವನಿಗೆ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:26
18 ತಿಳಿವುಗಳ ಹೋಲಿಕೆ  

ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ, ಅಡ್ಡಬಿದ್ದು ನಮಸ್ಕರಿಸಿದರು.


ಅನಂತರ ಯೆಹೋವನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ, ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು; ಯೆಹೋವನ ದೂತನು ಅದೃಶ್ಯನಾದನು.


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.


ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ, ಕಟ್ಟಿಗೆ, ಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.


‘ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ಆಗ ಅವರು ಬೇಡುವುದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.


ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ. ನಮ್ಮ ಯೆಹೋವ ದೇವರು ಪರಿಶುದ್ಧನು.


ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;


ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರಮಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.


ಸೊಲೊಮೋನನು ಪ್ರಾರ್ಥಿಸುವುದನ್ನು ಮುಗಿಸಿದ ಕೂಡಲೆ, ಆಕಾಶದಿಂದ ಬೆಂಕಿಯು ಬಿದ್ದು ಸರ್ವಾಂಗಹೋಮಗಳನ್ನೂ, ಯಜ್ಞಮಾಂಸವನ್ನೂ ದಹಿಸಿ ಬಿಟ್ಟಿತು, ಯೆಹೋವನ ತೇಜಸ್ಸು ಆಲಯದ ತುಂಬಾ ತುಂಬಿಕೊಂಡಿತು.


ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ, ಯೆಹೋವನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ಆಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದನು. ಇದು ಮುಂಚೆ ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು ದಾವೀದನು ಇದಕ್ಕೋಸ್ಕರ ಸಿದ್ಧಮಾಡಿದ್ದನು.


ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ, ಅನಂತರ ನಾನು ಯೆಹೋವನ ಹೆಸರು ಹೇಳಿ ಪ್ರಾರ್ಥಿಸುವೆನು. ಆ ಇಬ್ಬರಲ್ಲಿ ಯಾವನು ಲಾಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದೂ ನಿರ್ಣಯಿಸೋಣ” ಅಂದನು. ಎಲ್ಲಾ ಜನರು, “ಸರಿ ನೀನು ಹೇಳಿದಂತೆಯೇ ಆಗಲಿ” ಎಂದು ಉತ್ತರಕೊಟ್ಟರು.


ಏನೆಂದರೆ ಅವನು ಯಜ್ಞವೇದಿಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿಜ್ವಾಲೆಯೊಳಗೆ ಮೇಲಕ್ಕೇರಿ ಹೋದನು. ಅವರು ಇದನ್ನು ನೋಡುತ್ತಲೆ ನೆಲದ ಮೇಲೆ ಬೋರಲುಬಿದ್ದರು.


ಕತ್ತಿಯನ್ನು ಒರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದನು. ಅವನು ಹಾಗೆಯೇ ಮಾಡಿದನು.


ಆ ವ್ಯಾಧಿ ಶಮನವಾದಾಗ ಆರೋನನು ದೇವದರ್ಶನದ ಗುಡಾರದ ಬಾಗಿಲಿಗೆ ಮೋಶೆಯ ಬಳಿಗೆ ಹಿಂತಿರುಗಿ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು