Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ದಾವೀದನು, “ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾಗಿದ್ದೇನೆ. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ದೇವರನ್ನು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ದಾವೀದನು, “ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ,” ಎಂದು ದೇವರನ್ನು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ದಾವೀದನು - ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾಗಿದ್ದೇನೆ; ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷವಿುಸು ಎಂದು ದೇವರನ್ನು ಪ್ರಾರ್ಥಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದಾವೀದನು ದೇವರಿಗೆ, “ನಾನು ಕೇವಲ ಹುಚ್ಚು ಕೆಲಸ ಮಾಡಿದೆನು. ಇಸ್ರೇಲರ ಜನಗಣತಿ ಮಾಡಿ ಪಾಪಮಾಡಿದೆನು. ಈಗ ನಿನ್ನ ಸೇವಕನಾದ ನನ್ನ ಪಾಪವನ್ನು ನಿರ್ಮೂಲ ಮಾಡು” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದಾವೀದನು ದೇವರಿಗೆ, “ನಾನು ಈ ಕಾರ್ಯವನ್ನು ಮಾಡಿದ್ದರಿಂದ, ಮಹಾಪಾಪ ಮಾಡಿದೆನು. ನೀವು ದಯಮಾಡಿ ನಿಮ್ಮ ಸೇವಕನ ಅಕ್ರಮವನ್ನು ಪರಿಹರಿಸಿರಿ. ಏಕೆಂದರೆ ನಾನು ಇದರಲ್ಲಿ ಬಹಳ ಬುದ್ಧಿಹೀನನಾಗಿ ನಡೆದೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:8
16 ತಿಳಿವುಗಳ ಹೋಲಿಕೆ  

ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇನೆ” ಎಂದು ಹೇಳಿದನು. ನಾತಾನನು ಅವನಿಗೆ “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ, ನೀನು ಸಾಯುವುದಿಲ್ಲ.


ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.


ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.


ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.


ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ.


ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ


ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; ಆದರೂ ನಿನ್ನ ಹೆಸರಿನ ನಿಮಿತ್ತ ಅದನ್ನು ಕ್ಷಮಿಸು.


“ನನ್ನ ತಂದೆಯು ಹೇರಿದ ನೊಗವನ್ನು ಹಗುರ ಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು? ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.


ಜನಗಣತಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚತೊಡಗಿತು. ಆದುದರಿಂದ ಅವನು ಯೆಹೋವನನ್ನು, “ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ಪ್ರಾರ್ಥಿಸಿದನು.


ಈ ಅಪಮಾನವನ್ನು ನಾನು ಮರೆಮಾಡುವುದಾದರೂ ಹೇಗೆ? ನಿನಗಂತೂ ಇಸ್ರಾಯೇಲರಲ್ಲಿ ನೀಚನೆಂಬ ಹೆಸರು ತಪ್ಪದು. ಆದುದರಿಂದ ದಯವಿಟ್ಟು ಅರಸನ ಸಂಗಡ ಮಾತನಾಡು. ಅವನು ನನ್ನನ್ನು ನಿನಗೆ ಕೊಡದಿರಲಾರನು” ಎಂದಳು.


ಆಗ ಸೌಲನು ಅವನಿಗೆ, “ನಾನು ಪಾಪಮಾಡಿದೆನು, ದಾವೀದನೇ ನನ್ನ ಮಗನೇ ಹಿಂದಿರುಗಿ ಬಾ. ಈ ಹೊತ್ತು ನನ್ನ ಜೀವವು ನಿನ್ನ ದೃಷ್ಟಿಯಲ್ಲಿ ಬಹು ಬೆಲೆಯುಳ್ಳದೆಂದು ಎಣಿಸಲ್ಪಟ್ಟಿತು. ಆದ್ದರಿಂದ ನಾನು ಇನ್ನು ಮುಂದೆ ನಿನಗೆ ಕೇಡುಮಾಡುವುದಿಲ್ಲ. ಈ ವರೆಗೆ ನಾನು ಮಾಡಿದ್ದು ಹುಚ್ಚುತನವೂ ದೊಡ್ಡ ತಪ್ಪೂ ಆಗಿದೆ” ಎಂದು ಹೇಳಿದನು


ಆಗ ಸಮುವೇಲನು, “ನೀನು ಬುದ್ಧಿಹೀನಕಾರ್ಯವನ್ನು ಮಾಡಿದೆ; ನೀನು ನಿನ್ನ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕೈಕೊಂಡಿದ್ದರೆ ಆತನು ನಿನ್ನ ರಾಜ್ಯವನ್ನು ಇಸ್ರಾಯೇಲ್ಯರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದನು.


ಯಾಕೋಬನ ಗಂಡುಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದಾಗ ವ್ಯಸನಪಟ್ಟು ಬಹಳ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳ ಮಾನಭಂಗ ಮಾಡಿ ಇಸ್ರಾಯೇಲರೊಳಗೆ ಬಹಳ ಅವಮಾನಕರವಾದ ಕೆಲಸವನ್ನು ಮಾಡಿದನು.


ಜನಗಣತಿ ಮಾಡಿದ್ದು ದೇವರಿಗೆ ಕೆಟ್ಟದ್ದೆಂದು ಕಂಡದ್ದರಿಂದ ಆತನು ಇಸ್ರಾಯೇಲರನ್ನು ಬಾಧಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು