Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ದಾವೀದನು, “ಇದೇ ದೇವರಾದ ಯೆಹೋವನ ಆಲಯ. ಇದೇ ಇಸ್ರಾಯೇಲರು ಯಜ್ಞವನ್ನು ಅರ್ಪಿಸತಕ್ಕ ಯಜ್ಞವೇದಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಇದೇ ದೇವರಾದ ಸರ್ವೇಶ್ವರನ ಆಲಯ; ಇದೇ ಇಸ್ರಯೇಲರು ಬಲಿ ಅರ್ಪಿಸತಕ್ಕ ಪೀಠ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇದೇ ದೇವರಾದ ಯೆಹೋವನ ಆಲಯ, ಇದೇ ಇಸ್ರಾಯೇಲ್ಯರು ಯಜ್ಞವರ್ಪಿಸತಕ್ಕ ವೇದಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಗ ದಾವೀದನು, “ದೇವರ ಆಲಯವೂ ಆತನ ಯಜ್ಞವೇದಿಕೆಯೂ ಇದೇ ಸ್ಥಳದಲ್ಲಿ ಕಟ್ಟಲ್ಪಡುವದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ದಾವೀದನು, “ಇದೇ ದೇವರಾದ ಯೆಹೋವ ದೇವರ ಆಲಯ, ಮತ್ತು ಇದೇ ಇಸ್ರಾಯೇಲರ ದಹನಬಲಿಪೀಠ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:1
16 ತಿಳಿವುಗಳ ಹೋಲಿಕೆ  

ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ, ಯೆಹೋವನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ಆಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದನು. ಇದು ಮುಂಚೆ ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು ದಾವೀದನು ಇದಕ್ಕೋಸ್ಕರ ಸಿದ್ಧಮಾಡಿದ್ದನು.


ಅವನು ಭಯಪಟ್ಟವನಾಗಿ, “ಈ ಸ್ಥಳವು ಪವಿತ್ರವಾದ್ದದು. ಇದು ದೇವರ ಮನೆಯೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು” ಎಂದನು.


ಒಂದು ವೇಳೆ ನೀವು, ‘ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ’ ಎಂದು ಹೇಳುವುದಾದರೆ ಹಿಜ್ಕೀಯನು, ‘ಯೆರೂಸಲೇಮಿನ ಯಜ್ಞವೇದಿಯ ಮುಂದೆಯೇ ಆರಾಧನೆಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ, ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದ್ದಾನಲ್ಲಾ,


ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.


ತಾನು ಜನರ ಮಧ್ಯದಲ್ಲಿ ವಾಸಿಸುವುದಕ್ಕೋಸ್ಕರ, ಶಿಲೋವ್ ಪಟ್ಟಣದಲ್ಲಿ ಹಾಕಿಸಿದ ನಿವಾಸಸ್ಥಾನವನ್ನು ತ್ಯಜಿಸಿಬಿಟ್ಟು,


ಹಿಜ್ಕೀಯನು ಒಂದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲಾ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಕೆಡವಿಸಿ ಬಿಟ್ಟನಲ್ಲವೆ?


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ, ಬೆಳೆಯ ದಶಮಾಂಶಗಳನ್ನೂ, ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ಆ ಕಾಲದಲ್ಲಿ ದಾವೀದನಿಗೆ ಯೆಹೋವನಿಂದ ಸದುತ್ತರ ದೊರಕಿತು.


ನಿಮ್ಮ ಕುಲಗಳಲ್ಲಿ ಯಾವುದೋ ಒಂದು ಕುಲದಲ್ಲಿ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲೇ ನಿಮ್ಮ ಸರ್ವಾಂಗಹೋಮಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸಿದ ಎಲ್ಲಾ ಆಚಾರಗಳನ್ನು ನಡೆಸಬೇಕು.


ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು