1 ಪೂರ್ವಕಾಲ ವೃತ್ತಾಂತ 22:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
19 ಆದುದರಿಂದ ನೀವು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ಒಡಂಬಡಿಕೆ ಮಂಜೂಷವನ್ನೂ, ದೇವಾರಾಧನೆಯ ಪವಿತ್ರ ಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ” ಎಂದು ಹೇಳಿದನು.
19 ಆದುದರಿಂದ ನೀವು ಪೂರ್ಣಮನಸ್ಸಿನಿಂದ, ಪೂರ್ಣಪ್ರಾಣದಿಂದ ನಿಮ್ಮ ದೇವರಾದ ಸರ್ವೇಶ್ವರನ ದರ್ಶನವನ್ನು ಬಯಸಿರಿ. ಏಳಿ, ನಿಮ್ಮ ದೇವರಾದ ಸರ್ವೇಶ್ವರನ ನಿಬಂಧನ ಮಂಜೂಷವನ್ನೂ ದೇವಾರಾಧನೆಗೆ ಬೇಕಾದ ಸಾಮಗ್ರಿಗಳನ್ನೂ ಸರ್ವೇಶ್ವರನ ಹೆಸರಿಗಾಗಿ ಕಟ್ಟಲಾಗುವ ಮಂದಿರದಲ್ಲಿ ಇಡಿ,” ಎಂದು ಹೇಳಿದನು.
19 ಈಗ ನಿಮ್ಮ ಹೃದಯಗಳನ್ನೂ ಆತ್ಮಗಳನ್ನೂ ನಿಮ್ಮ ದೇವರಾದ ಯೆಹೋವನಿಗೆ ಕೊಡಿರಿ. ಆತನಿಗೆ ಪರಿಶುದ್ಧ ನಿವಾಸವನ್ನು ಆತನ ಹೆಸರಿಗಾಗಿ ಕಟ್ಟಿರಿ; ಒಡಂಬಡಿಕೆಯ ಪೆಟ್ಟಿಗೆಯನ್ನೂ ಇತರ ಪವಿತ್ರ ಸಾಮಾಗ್ರಿಗಳನ್ನೂ ಆತನ ಆಲಯಕ್ಕೆ ತನ್ನಿರಿ” ಎಂದು ಹೇಳಿದನು.
19 ನಿಮ್ಮ ದೇವರಾದ ಯೆಹೋವ ದೇವರನ್ನು ಹುಡುಕಲು ನಿಮ್ಮ ಹೃದಯವನ್ನೂ, ನಿಮ್ಮ ಪ್ರಾಣವನ್ನೂ ಒಪ್ಪಿಸಿ, ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ದೇವರ ಪರಿಶುದ್ಧ ಪಾತ್ರೆಗಳನ್ನು ಯೆಹೋವ ದೇವರ ನಾಮಕ್ಕಾಗಿ ಕಟ್ಟಲಾಗುವ ಆಲಯದೊಳಗೆ ತರುವ ಹಾಗೆ, ಎದ್ದು ಯೆಹೋವ ದೇವರಾದ ದೇವರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ,” ಎಂದನು.
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.
ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.
ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿ ಇಟ್ಟರು.
ಇದಲ್ಲದೆ ಐಗುಪ್ತದೇಶದಿಂದ ಬಿಡುಗಡೆ ಹೊಂದಿದ ನಮ್ಮ ಪೂರ್ವಿಕರಿಗೆ ಯೆಹೋವನಿಂದ ದೊರಕಿದ ನಿಬಂಧನಾಶಾಸನಗಳಿರುವ ಮಂಜೂಷಕ್ಕೆ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇರಿಸಿದೆನು” ಎಂದು ಹೇಳಿದನು.
“ಯೆಹೋವನ ಅನುಗ್ರಹದಿಂದ ನಮ್ಮ ತಂದೆಯಾದ ದಾವೀದನಿಗೆ ಎಲ್ಲಾ ಶತ್ರುಗಳು ವಶವಾಗುವವರೆಗೆ ಅವನು ತನ್ನ ಸುತ್ತಲೂ ಯುದ್ಧಗಳನ್ನು ನಡೆಸಬೇಕಾಯಿತು. ಆದುದರಿಂದ ಅವನು ತನ್ನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದನೆಂದು ನೀನು ಬಲ್ಲೇ.
ಬಡಗಿಗಳೂ, ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣಗಳ ಎಲ್ಲಾ ತರಹದ ಕೆಲಸವನ್ನು ಮಾಡುವುದರಲ್ಲಿ ಜಾಣರು ನಿನ್ನೊಂದಿಗಿರುತ್ತಾರೆ. ಅವರನ್ನು ಎಣಿಸಲು ಸಾಧ್ಯವಿಲ್ಲ. ಎದ್ದು ಸಿದ್ಧನಾಗಿ ಕೆಲಸಕ್ಕೆ ಕೈ ಹಾಕು, ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿದನು.