Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅನಂತರ ದಾವೀದನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯಜನಗಳನ್ನು ಒಟ್ಟುಗೂಡಿಸುವುದಕ್ಕೆ ಆಜ್ಞಾಪಿಸಿ, ಅವರಲ್ಲಿದ್ದ ಕಲ್ಲುಕುಟಿಗರನ್ನು ದೇವಾಲಯದ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವುದಕ್ಕೆ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅನಂತರ ದಾವೀದನು ಇಸ್ರಯೇಲ್ ನಾಡಿನಲ್ಲಿದ್ದ ಅನ್ಯಜನಗಳನ್ನು ಕೂಡಿಸುವುದಕ್ಕೆ ಆಜ್ಞಾಪಿಸಿದನು. ಅವರಲ್ಲಿದ್ದ ಕಲ್ಲುಕುಟಿಗರನ್ನು ದೇವಾಲಯದ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವುದಕ್ಕೆ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅನಂತರ ದಾವೀದನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯಜನಗಳನ್ನು ಕೂಡಿಸುವದಕ್ಕೆ ಆಜ್ಞಾಪಿಸಿ ಅವರಲ್ಲಿದ್ದ ಕಲ್ಲು ಕುಟಿಗರನ್ನು ದೇವಾಲಯ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವದಕ್ಕೆ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇಸ್ರೇಲಿನಲ್ಲಿ ವಾಸಿಸುತ್ತಿದ್ದ ಪರದೇಶಸ್ಥರನ್ನೆಲ್ಲಾ ದಾವೀದನು ಬರಹೇಳಿ ಅವರಲ್ಲಿಂದ ಕಲ್ಲುಕುಟಿಗರನ್ನು ಆರಿಸಿ ತೆಗೆದುಕೊಂಡನು. ದೇವಾಲಯವನ್ನು ಕಟ್ಟಲು ಕಲ್ಲುಗಳನ್ನು ಕೆತ್ತಿ ತಯಾರಿಸುವ ಕೆಲಸ ಅವರದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದಾವೀದನು ಇಸ್ರಾಯೇಲ್ ದೇಶದಲ್ಲಿರುವ ಪರದೇಶಸ್ಥರನ್ನು ಕೂಡಿಸಲು ಹೇಳಿ, ದೇವರ ಆಲಯವನ್ನು ಕಟ್ಟಿಸುವುದಕ್ಕೆ ಕೆತ್ತಿದ ಕಲ್ಲುಗಳನ್ನು ಕಡಿಯುವ ಹಾಗೆ ಕಲ್ಲುಕುಟಿಗರನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:2
16 ತಿಳಿವುಗಳ ಹೋಲಿಕೆ  

ಆಮೇಲೆ ಸೊಲೊಮೋನನು ತನ್ನ ತಂದೆಯಾದ ದಾವೀದನು ಮಾಡಿಸಿದ ಜನಗಣತಿಯ ಆಧಾರದ ಮೇರೆಗೆ, ಇಸ್ರಾಯೇಲ್ ದೇಶದಲ್ಲಿ ಪ್ರವಾಸಿಗಳಾಗಿದ್ದ ಎಲ್ಲಾ ಅನ್ಯಜನರನ್ನು ಲೆಕ್ಕ ಮಾಡಿದಾಗ ಒಂದು ಲಕ್ಷದ ಐವತ್ತು ಮೂರು ಸಾವಿರದ ಆರುನೂರು ಮಂದಿ ಸಿಕ್ಕಿದರು.


ಅಂದು ನೀವು ಕ್ರಿಸ್ತನಿಂದ ದೂರವಿದವರೂ, ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.


ಆದರೆ ಪರ್ಷಿಯ ರಾಜನಾದ ಕೋರೆಷನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗರಿಗೆ ಮತ್ತು ಬಡಗಿಗಳಿಗೆ ಹಣವನ್ನೂ, ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರು ಮರಗಳನ್ನು ತರುತ್ತಿದ್ದ ಚೀದೋನ್ಯರಿಗೆ ಮತ್ತು ತೂರ್ಯರಿಗೆ ಅನ್ನಪಾನಗಳನ್ನೂ ಮತ್ತು ಎಣ್ಣೆಯನ್ನೂ ಕೊಟ್ಟಿದ್ದರು.


ತೂರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವುದಕ್ಕೋಸ್ಕರ ದೂತರನ್ನೂ, ದೇವದಾರುಮರಗಳನ್ನೂ, ಶಿಲ್ಪಿಗಳನ್ನೂ ಮತ್ತು ಬಡಗಿಗಳನ್ನು ಅವನ ಬಳಿಗೆ ಕಳುಹಿಸಿದನು.


ಬಡಗಿ, ಶಿಲ್ಪಿ, ಮೇಸ್ತ್ರಿ ಮೊದಲಾದವರ ಸಂಬಳಕ್ಕಾಗಿಯೂ, ದೇವಾಲಯಕ್ಕೆ ಬೇಕಾದ ಮರ, ಕೆತ್ತಿದ ಕಲ್ಲು ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಅದನ್ನು ಉಪಯೋಗಿಸಿಕೊಳ್ಳಲಿ,


ಮರ, ಕೆತ್ತಿದ ಕಲ್ಲುಗಳನ್ನು ಕೊಂಡುಕೊಳ್ಳುವುದಕ್ಕೂ, ಆಲಯವನ್ನು ದುರಸ್ತಿ ಮಾಡಲು ಬೇಕಾದ ಎಲ್ಲಾ ವೆಚ್ಚಕ್ಕಾಗಿಯೂ ಉಪಯೋಗಿಸಿದರು.


ದೇವಾಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಕಟ್ಟುವ ದಿನಗಳಲ್ಲಿ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವು ಕೇಳಿಸುತ್ತಿರಲಿಲ್ಲ.


ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ, ದೇವದಾರುಮರಗಳನ್ನೂ, ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ದಾವೀದನಿಗೋಸ್ಕರ ಅರಮನೆಯನ್ನು ಕಟ್ಟಿದರು.


ತರುವಾಯ ಅರಸನಾದ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನೇ ದೇವಾಲಯ ಕಟ್ಟಲು ಆರಿಸಿಕೊಂಡಿದ್ದಾನೆ. ಆದರೆ ಅವನು ಇನ್ನೂ ಎಳೇ ಪ್ರಾಯದವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟತಕ್ಕ ಮಂದಿರವು ದೇವರಾದ ಯೆಹೋವನಿಗಾಗಿಯೇ ಹೊರತು ಮನುಷ್ಯನಿಗಾಗಿಯಲ್ಲ.


ನಾವಾದರೋ ನಿನಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು ತೆಪ್ಪಗಳಾಗಿ ಕಟ್ಟಿ, ಸಮುದ್ರ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ಅಲ್ಲಿಂದ ನೀನು ಅವುಗಳನ್ನು ಯೆರೂಸಲೇಮಿಗೆ ತರಿಸಿಕೊಳ್ಳಬಹುದು” ಎಂಬುದಾಗಿ ಉತ್ತರ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು