1 ಪೂರ್ವಕಾಲ ವೃತ್ತಾಂತ 22:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದಾವೀದನು ಸೊಲೊಮೋನನಿಗೆ, “ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಅಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ದೇವಾಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದಾವೀದನು ಸೊಲೊಮೋನನಿಗೆ, “ನನ್ನ ಮಗನೇ, ನಾನು ನನ್ನ ದೇವರ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದಾವೀದನು ಸೊಲೊಮೋನನಿಗೆ, “ನನ್ನ ಮಗನೇ, ನಾನು ನನ್ನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಆಲಯವನ್ನು ಕಟ್ಟಿಸಬೇಕೆಂಬುದು ನನ್ನ ಹೃದಯದಲ್ಲಿ ಇತ್ತು. ಅಧ್ಯಾಯವನ್ನು ನೋಡಿ |
ಮತ್ತು ತನ್ನ ಹೆಸರನ್ನು ಸ್ಥಾಪಿಸುವುದಕ್ಕೋಸ್ಕರ ಆ ಸ್ಥಳವನ್ನು ಆರಿಸಿಕೊಂಡ ದೇವರು ಈ ಆಜ್ಞೆಯನ್ನು ಬದಲಿಸುವುದಕ್ಕೂ, ಯೆರೂಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಮತ್ತು ಪ್ರತಿಯೊಂದು ಜನಾಂಗವನ್ನೂ ಕೆಡವಿ ಹಾಕಲಿ. ದಾರ್ಯಾವೆಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಉದಾಸೀನತೆಯಿಂದ ಅಲಕ್ಷಿಸದೆ ಕೈಕೊಳ್ಳಬೇಕು” ಎಂದು ತಿಳಿಸಿದನು.
ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ, ಇಸ್ರಾಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ, ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೂ, ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವುದಕ್ಕೂ, ಉದಯಕಾಲದಲ್ಲಿಯೂ, ಸಾಯಂಕಾಲದಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಯ ದಿನಗಳಲ್ಲಿಯೂ, ನಮ್ಮ ದೇವರಾದ ಯೆಹೋವನ ಹಬ್ಬಗಳಲ್ಲಿಯೂ ಇವುಗಳಲ್ಲಿ ಸರ್ವಾಂಗಹೋಮವನ್ನರ್ಪಿಸುವುದಕ್ಕೂ ಈ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.