Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಇಸ್ರಾಯೇಲರ ಎಲ್ಲಾ ಅಧಿಪತಿಗಳನ್ನೂ, ಯಾಜಕರನ್ನೂ ಮತ್ತು ಲೇವಿಯರನ್ನೂ ತನ್ನ ಬಳಿಯಲ್ಲಿ ಒಟ್ಟುಗೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಇಸ್ರಯೇಲರ ಎಲ್ಲಾ ಅಧಿಪತಿಗಳನ್ನು, ಯಾಜಕರನ್ನು ಹಾಗು ಲೇವಿಯರನ್ನು ತನ್ನ ಬಳಿಯಲ್ಲಿ ಸಭೆ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ಯರ ಎಲ್ಲಾ ಅಧಿಪತಿಗಳನ್ನೂ ಯಾಜಕರನ್ನೂ ಲೇವಿಯರನ್ನೂ ತನ್ನ ಬಳಿಯಲ್ಲಿ ಕೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದಾವೀದನು ರಾಜ್ಯದ ಎಲ್ಲಾ ಮುಖಂಡರುಗಳನ್ನೂ ಯಾಜಕರನ್ನೂ ಲೇವಿಯರನ್ನೂ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ತಾನು ಇಸ್ರಾಯೇಲಿನ ಸಮಸ್ತ ಪ್ರಧಾನರನ್ನೂ ಯಾಜಕರನ್ನೂ ಲೇವಿಯರನ್ನೂ ಒಟ್ಟುಗೂಡಿಸಿ ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:2
8 ತಿಳಿವುಗಳ ಹೋಲಿಕೆ  

ದಾವೀದನು ಇಸ್ರಾಯೇಲರ ಎಲ್ಲಾ ಗೋತ್ರಗಳ ಅಧಿಪತಿಗಳನ್ನು, ಅರಸನ ಸೇವೆಮಾಡುತ್ತಿರುವ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು ಅರಸನ ದನಕುರಿ ಮೊದಲಾದ ಸಂಪತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ಯುದ್ಧವೀರರು ಹಾಗೂ ಎಲ್ಲಾ ಪ್ರಧಾನರನ್ನು ಯೆರೂಸಲೇಮಿಗೆ ಕರೆಯಿಸಿದನು.


ದಾವೀದನು ಸಹಸ್ರಾಧಿಪತಿ, ಶತಾಧಿಪತಿ ಮೊದಲಾದ ಸರ್ವಪ್ರಭುಗಳೊಡನೆ ಸಮಾಲೋಚನೆ ಮಾಡಿದ ನಂತರ ಇಸ್ರಾಯೇಲ್ಯರ ಸಮಸ್ತ ಸಮೂಹದವರಿಗೆ,


ತರುವಾಯ ಯೆಹೋಶುವನು ಇಸ್ರಾಯೇಲ್ಯರ ಎಲ್ಲಾ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ಪ್ರಧಾನರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಕಾಣಿಸಿಕೊಂಡರು.


ಆತನು ಇಸ್ರಾಯೇಲ್ಯರ ಹಿರಿಯ ಪ್ರಭುಗಳು, ನ್ಯಾಯಾಧಿಪತಿಗಳು, ಅಧಿಕಾರಿಗಳು ಅಲ್ಲದೆ ಎಲ್ಲಾ ಇಸ್ರಾಯೇಲರ ಜನರನ್ನು ತನ್ನ ಬಳಿಗೆ ಕರಿಸಿ ಅವರಿಗೆ, “ನಾನು ದಿನತುಂಬಿದ ಮುದುಕನಾಗಿದ್ದೇನೆ.


ದಾವೀದನು ವಯೋವೃದ್ಧನಾಗಿ ತನ್ನ ಜೀವಮಾನದ ಕೊನೆಯ ದಿನಗಳಲ್ಲಿ ತನ್ನ ಮಗನಾದ ಸೊಲೊಮೋನನನ್ನು ಇಸ್ರಾಯೇಲರ ಅರಸನನ್ನಾಗಿ ನೇಮಿಸಿದನು.


ಮೂವತ್ತು ವರ್ಷಕ್ಕಿಂತ ಹೆಚ್ಚಾದ ವಯಸ್ಸುಳ್ಳ ಲೇವಿಯರನ್ನು ಲೆಕ್ಕಿಸಿದಾಗ ಗಂಡಸರ ಸಂಖ್ಯೆಯು ಮೂವತ್ತೆಂಟು ಸಾವಿರವಾಗಿತ್ತು.


ದೇವಾಲಯದ ಸೇವಕರೂ ಅವರ ವಂಶಾವಳಿಯೂ: ಕೆಹಾತ್ಯನಾದ ಹೇಮಾನನು ಮೊದಲನೆಯವನು. ಪ್ರಥಮ ಸಂಗೀತ ಮಂಡಳಿಯ ಗಾಯಕನಾದ ಇವನು ಯೋವೇಲನ ಮಗ, ಇವನು ಸಮುವೇಲನ ಮಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು