Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಯೆಹೋವನ ಮುಂದೆ ತಪ್ಪದೆ ನಡೆಯುವ ಸರ್ವಾಂಗಹೋಮ, ಸಮರ್ಪಣೆಯ ಹೊತ್ತಿನಲ್ಲಿ ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವುದೂ ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನಿಯವಿುತ ಸಂಖ್ಯೆಗೆ ಸರಿಯಾಗಿ ಸಬ್ಬತ್‍ದಿನ ಅಮಾವಾಸ್ಯೆ ಜಾತ್ರೆ ಇವುಗಳಲ್ಲಿ ಯೆಹೋವನ ಮುಂದೆ ತಪ್ಪದೆ ನಡೆಯುವ ಸರ್ವಾಂಗಹೋಮ ಸಮರ್ಪಣೆಯ ಹೊತ್ತಿನಲ್ಲಿ ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವದೂ ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಬೇರೆ ವಿಶೇಷ ದಿನಗಳಲ್ಲಿಯೂ ದೇವರಿಗೆ ಸಮರ್ಪಿಸುವ ಸರ್ವಾಂಗಹೋಮವನ್ನು ತಯಾರು ಮಾಡುತ್ತಿದ್ದರು. ಪ್ರತಿದಿನ ಎಷ್ಟು ಮಂದಿ ಲೇವಿಯರು ಸೇವೆಮಾಡಬೇಕೆಂಬುದನ್ನು ಮೊದಲೇ ಗೊತ್ತುಪಡಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯೆಹೋವ ದೇವರ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ ಕಟ್ಟಳೆಯ ಪ್ರಕಾರವಾಗಿ ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:31
11 ತಿಳಿವುಗಳ ಹೋಲಿಕೆ  

ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯು, ಹಬ್ಬಗಳಲ್ಲಿಯು, ಅಮಾವಾಸ್ಯೆಗಳಲ್ಲಿಯು ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ಆ ತುತ್ತೂರಿಯ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು, ನಾನೇ ನಿಮ್ಮ ದೇವರಾದ ಯೆಹೋವನು.”


“‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ ಮತ್ತು ತೋಪುಗಳ ಬೆಳೆಯನ್ನು ಕೂಡಿಸಿದ ನಂತರ ಯೆಹೋವನು ನೇಮಿಸಿದ ಪರ್ಣಶಾಲೆಗಳ ಜಾತ್ರೆಯನ್ನು ಏಳು ದಿನಗಳ ವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿಯೂ ಮತ್ತು ಎಂಟನೆಯ ದಿನದಲ್ಲಿಯೂ ಯಾವ ಕೆಲಸವನ್ನು ಮಾಡದೆ ಸಂಪೂರ್ಣ ವಿರಾಮದಿಂದಿರಬೇಕು.


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತ್ತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಸೇರಬೇಕು.


ಹೀಗಿರುವುದರಿಂದ, ಅನ್ನಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ.


ಅದಕ್ಕೆ ಅವನು, “ಇದು ಅಮಾವಾಸ್ಯೆಯಲ್ಲ, ಸಬ್ಬತ್ತಲ್ಲ. ಈ ಹೊತ್ತು ಯಾಕೆ ಹೋಗುತ್ತೀ?” ಎಂದನು. ಅದಕ್ಕೆ ಆಕೆಯು, “ಎಲ್ಲವು ಸರಿಯೇ” ಎಂದು ಹೇಳಿದಳು.


ಪ್ರತಿದಿನ ಪ್ರಾತಃಕಾಲ ಸಾಯಂಕಾಲಗಳಲ್ಲಿ ನಿಯಮಿತ ಸಂಖ್ಯೆಗೆ ಸರಿಯಾಗಿ


ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ, ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ, ಯಜ್ಞಸಮರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮಯಜ್ಞವು ನಡೆಯುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು