1 ಪೂರ್ವಕಾಲ ವೃತ್ತಾಂತ 23:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಹೀಗೆ ಅವರು ತಮ್ಮ ಸಹೋದರನಾದ ಆರೋನನ ಸಹಾಯಕರಾಗಿದ್ದು ದೇವದರ್ಶನದ ಗುಡಾರವನ್ನೂ, ಪರಿಶುದ್ಧವಾದ ಎಲ್ಲಾ ವಸ್ತುಗಳನ್ನು ನೋಡಿಕೊಳ್ಳುವುದೇ ಯೆಹೋವನ ಆಲಯದಲ್ಲಿ ಮಾಡತಕ್ಕ ಕರ್ತವ್ಯಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಹೀಗೆ ಅವರು ತಮ್ಮ ಸಹೋದರರಾದ ಆರೋನ್ಯರ ಸಹಾಯಕರಾಗಿದ್ದು, ದೇವದರ್ಶನದ ಗುಡಾರವನ್ನೂ ಪರಿಶುದ್ಧವಾದ ಎಲ್ಲಾ ಸಾಮಾನುಗಳನ್ನೂ ನೋಡಿಕೊಳ್ಳುವುದೇ ಸರ್ವೇಶ್ವರನ ಆಲಯದಲ್ಲಿ ಅವರು ಮಾಡಬೇಕಾಗಿದ್ದ ಪರಿಚರ್ಯೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಹೀಗೆ ಅವರು ತಮ್ಮ ಸಹೋದರರಾದ ಆರೋನ್ಯರ ಸಹಾಯಕರಾಗಿದ್ದು ದೇವದರ್ಶನದ ಗುಡಾರವನ್ನೂ ಪರಿಶುದ್ಧವಾದ ಎಲ್ಲಾ ಸಾಮಾನುಗಳನ್ನೂ ನೋಡಿಕೊಳ್ಳುವದೇ ಯೆಹೋವನ ಆಲಯದಲ್ಲಿ ಮಾಡತಕ್ಕ ಪರಿಚರ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಹೀಗೆ ಲೇವಿಯರು ತಾವು ಮಾಡಬೇಕಾದ ಕೆಲಸಗಳನ್ನೆಲ್ಲಾ ಮಾಡಿದರು. ಅವರು ಪವಿತ್ರ ಗುಡಾರವನ್ನು ಮತ್ತು ಪವಿತ್ರಸ್ಥಳವನ್ನು ನೋಡಿಕೊಂಡರು; ತಮ್ಮ ಸಂಬಂಧಿಕರೂ ಆರೋನನ ಕುಲದವರೂ ಆಗಿದ್ದ ಯಾಜಕರಿಗೆ ಸಹಾಯ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಯೆಹೋವ ದೇವರ ಮನೆಯ ಸೇವೆಯಲ್ಲಿ ದೇವದರ್ಶನ ಗುಡಾರದ ಕಾವಲನ್ನೂ, ಪರಿಶುದ್ಧ ಸ್ಥಾನದ ಕಾವಲನ್ನೂ, ತಮ್ಮ ಸಹೋದರರಾದ ಆರೋನನ ಪುತ್ರರ ಆಜ್ಞೆಯನ್ನೂ ಕೈಗೊಳ್ಳುವುದು ಅವರಿಗೆ ನೇಮಕವಾಗಿತ್ತು. ಅಧ್ಯಾಯವನ್ನು ನೋಡಿ |