1 ಪೂರ್ವಕಾಲ ವೃತ್ತಾಂತ 23:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದ್ವಾರಪಾಲಕರನ್ನಾಗಿ, ನಾಲ್ಕು ಸಾವಿರ ಜನರನ್ನು ಮತ್ತು ತಾನು ಸಿದ್ಧಪಡಿಸಿದ ವಾದ್ಯಗಳಿಂದ ಯೆಹೋವನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನೂ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ದ್ವಾರಪಾಲಕರನ್ನಾಗಿ ನಾಲ್ಕು ಸಾವಿರ ಹಾಗು ತಾನು ಒದಗಿಸಿದ್ದ ವಾದ್ಯಗಳಿಂದ ಸರ್ವೇಶ್ವರನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನು ದಾವೀದನು ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅಧಿಕಾರಿಗಳನ್ನಾಗಿ ಆರು ಸಾವಿರ ಮಂದಿಯನ್ನೂ ದ್ವಾರಪಾಲಕರನ್ನಾಗಿ ನಾಲ್ಕು ಸಾವಿರ ಮಂದಿಯನ್ನೂ ತಾನು ಸಿದ್ಧಮಾಡಿಸಿದ ವಾದ್ಯಗಳಿಂದ ಯೆಹೋವನನ್ನು ಭಜಿಸುವದಕ್ಕಾಗಿ ನಾಲ್ಕು ಸಾವಿರ ಮಂದಿಯನ್ನೂ ನೇವಿುಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಾಲ್ಕು ಸಾವಿರ ಮಂದಿ ಲೇವಿಯರು ದ್ವಾರಪಾಲಕರಾಗಿಯೂ ನಾಲ್ಕು ಸಾವಿರ ಮಂದಿ ಲೇವಿಯರು ಗಾಯಕರಾಗಿಯೂ ಸೇವೆ ಮಾಡಬೇಕು. ನಾನು ಅವರಿಗಾಗಿ ವಿಶೇಷ ವಾದ್ಯಗಳನ್ನು ತಯಾರಿಸಿಟ್ಟಿರುತ್ತೇನೆ. ಅವರು ಅವುಗಳನ್ನು ನುಡಿಸುತ್ತಾ ದೇವರಿಗೆ ಸ್ತೋತ್ರ ಮಾಡಬೇಕು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು. ನಾಲ್ಕು ಸಾವಿರ ಮಂದಿ ಸ್ತುತಿಸುವುದಕ್ಕೆ ತಾನು ಸಿದ್ಧಮಾಡಿದ ವಾದ್ಯಗಳಿಂದ ಯೆಹೋವ ದೇವರನ್ನು ಸ್ತುತಿಸಿದರು.” ಅಧ್ಯಾಯವನ್ನು ನೋಡಿ |
ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.