Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 24:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಉಜ್ಜೀಯೇಲನ ಮಗನಾದ ಮೀಕನ ಸಂತಾನದವರಲ್ಲಿ ಶಾಮೀರನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಉಜ್ಜಿಯೇಲನ ಮಗ ಮೀಕನ ಸಂತಾನದವರಲ್ಲಿ ಶಾಮೀರನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಉಜ್ಜೀಯೇಲನ ಮಗನಾದ ಮೀಕನ ಸಂತಾನದವರಲ್ಲಿ ಶಾಮೀರನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಉಜ್ಜೀಯೇಲನ ಮಗನು ಮೀಕ. ಮೀಕನ ಮಗ ಶಾಮೀರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಉಜ್ಜೀಯೇಲನ ಕುಮಾರರಲ್ಲಿ ಮೀಕನು; ಮೀಕನ ಪುತ್ರರಲ್ಲಿ ಶಾಮೀರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 24:24
7 ತಿಳಿವುಗಳ ಹೋಲಿಕೆ  

ಉಜ್ಜೀಯೇಲನ ಮಕ್ಕಳಲ್ಲಿ ಮೀಕನು ಪ್ರಧಾನನು, ಇಷ್ಷೀಯನು ಎರಡನೆಯವನು.


ಹೆಬ್ರೋನನ ಸಂತಾನದವರಲ್ಲಿ ಯೆರೀಯನು ಪ್ರಧಾನನು, ಅಮರ್ಯನು ಎರಡನೆಯವನು, ಯಹಜೀಯೇಲನು, ಮೂರನೆಯವನು ಮತ್ತು ಯೆಕಮ್ಮಾಮನು ನಾಲ್ಕನೆಯವನು,


ಮೀಕನ ತಮ್ಮನಾದ ಇಷ್ಷೀಯನ ಸಂತಾನದವರಲ್ಲಿ ಜೆಕರ್ಯನು ಪ್ರಧಾನರು.


ಇಗೋ, ಯಾಜಕರ ಮತ್ತು ಲೇವಿಯರ ವರ್ಗಗಳವರು ದೇವಾಲಯಕ್ಕೆ ಸಂಬಂಧಪಟ್ಟ ಕೆಲಸವನ್ನು ಮಾಡುವುದಕ್ಕೆ ಸಿದ್ಧರಾಗಿದ್ದಾರೆ. ಯಾವ ಕೆಲಸವಿದ್ದರೂ ಎಲ್ಲವನ್ನು ಜಾಣತನದಿಂದ ಮಾಡುವುದಕ್ಕೆ ಸಿದ್ಧಮನಸ್ಸು ಉಳ್ಳವರು ನಿನ್ನ ಹತ್ತಿರ ಬೆಂಬಲವಾಗಿ ಇರುತ್ತಾರೆ. ಅಧಿಪತಿಗಳೂ, ಎಲ್ಲಾ ಪ್ರಜೆಗಳೂ ನಿನ್ನ ಆಜ್ಞೆಗೆ ಒಳಗಾಗುವರು” ಎಂದು ಹೇಳಿದನು.


ಲೇವಿಯ ಎಲ್ಲಾ ಯೆಹೂದ್ಯರೂ ಯಾಜಕನಾದ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು ಸಬ್ಬತ್ ದಿನದಲ್ಲಿ ಸೇವಾ ವಿಮುಕ್ತರಾದ ವರ್ಗಗಳವರನ್ನು ಕಳುಹಿಸಿಬಿಡಲಿಲ್ಲ; ಆದುದರಿಂದ ಪ್ರತಿಯೊಬ್ಬನು ಸಬ್ಬತ್ ದಿನ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈಕೆಳಗಿನವರನ್ನು ಸೇರಿಸಿಕೊಂಡನು.


ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ಸರ್ವಾಂಗಹೋಮ, ಸಮಾಧಾನ ಯಜ್ಞ, ಇವುಗಳನ್ನು ಸಮರ್ಪಿಸುವುದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ, ಕೀರ್ತಿಸುತ್ತಾ, ಕೃತಜ್ಞತಾಸ್ತುತಿಮಾಡುತ್ತಾ ಇರುವುದಕ್ಕೂ ನೇಮಿಸಿದನು.


ಆ ಮೇಲೆ ಯಾಜಕರ ಮತ್ತು ಲೇವಿಯರ ಆಯಾ ಮಾರ್ಗಗಳನ್ನು ಮೋಶೆಯ ಧರ್ಮಶಾಸ್ತ್ರ ನಿಯಮದ ಪ್ರಕಾರ ಯೆರೂಸಲೇಮಿನ ದೇವರ ಸೇವೆಗೆ ನೇಮಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು