1 ಪೂರ್ವಕಾಲ ವೃತ್ತಾಂತ 24:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ದಾವೀದನು ಎಲ್ಲಾಜಾರನ ಸಂತಾನದವನಾದ ಚಾದೋಕನೂ, ಈತಾಮಾರನ ಸಂತಾನದವನಾದ ಅಹೀಮೆಲೆಕನು ಯಾಜಕರನ್ನು ಸರದಿಯ ಮೇಲೆ ಸೇವೆಮಾಡತಕ್ಕ ವರ್ಗಗಳನ್ನಾಗಿ ವಿಭಾಗಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ದಾವೀದನೂ ಎಲ್ಲಾಜಾರನ ಸಂತಾನದವನಾದ ಚಾದೋಕನೂ ಈತಾಮಾರನ ಸಂತಾನದವನಾದ ಅಹೀಮೆಲೆಕನೂ ಯಾಜಕರನ್ನು ಸರದಿಯ ಮೇಲೆ ಸೇವೆ ಸಲ್ಲಿಸತಕ್ಕ ವರ್ಗಗಳನ್ನಾಗಿ ವಿಭಾಗಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ದಾವೀದನೂ ಎಲ್ಲಾಜಾರನ ಸಂತಾನದವನಾದ ಚಾದೋಕನೂ ಈತಾಮಾರನ ಸಂತಾನದವನಾದ ಅಹೀಮೆಲೆಕನೂ ಯಾಜಕರನ್ನು ಸರತಿಯ ಮೇಲೆ ಸೇವಿಸತಕ್ಕ ವರ್ಗಗಳನ್ನಾಗಿ ವಿಭಾಗಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಎಲ್ಲಾಜಾರ್ ಮತ್ತು ಈತಾಮಾರ್ ಕುಲದ ಯಾಜಕರನ್ನು ದಾವೀದನು ಪ್ರತ್ಯೇಕಿಸಿ ಚಾದೋಕ್ ಮತ್ತು ಅಹೀಮೆಲೆಕ್ ಯಾಜಕರ ಸಹಾಯದಿಂದ ಎರಡು ವರ್ಗಗಳನ್ನಾಗಿ ಮಾಡಿದನು. ಚಾದೋಕನು ಎಲ್ಲಾಜಾರನ ವಂಶದವನಾಗಿದ್ದನು ಮತ್ತು ಅಹೀಮೆಲೆಕನು ಈತಾಮಾರನ ವಂಶದವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದ್ದರಿಂದ ದಾವೀದನು ಎಲಿಯಾಜರನ ಮಕ್ಕಳಲ್ಲಿ ಚಾದೋಕನಿಗೂ, ಈತಾಮಾರನ ಮಕ್ಕಳಲ್ಲಿ ಅಹೀಮೆಲೆಕನಿಗೂ ಅವರ ಸೇವೆಯಲ್ಲಿರುವ ಪದ್ದತಿಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು. ಅಧ್ಯಾಯವನ್ನು ನೋಡಿ |
ನೆತನೇಲನ ಮಗನಾದ ಶೆಮಾಯನೆಂಬ ಲೇವಿಯ ಲೇಖಕನು ಅರಸನ ಮುಂದೆಯೂ, ಅಧಿಪತಿಗಳು, ಯಾಜಕನಾದ ಚಾದೋಕ್, ಎಬ್ಯಾತಾರನ ಮಗನಾದ ಅಹೀಮೆಲೆಕ್, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರು ಇವರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರನ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸಬೇಕೆಂದು ನೇಮಿಸಿ ಎಲ್ಲಾ ವರ್ಗಗಳ ಸರದಿಯನ್ನು ಚೀಟಿನಿಂದಲೇ ಗೊತ್ತುಮಾಡಿದರು.
ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.