Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 24:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಎಲ್ಲಾಜಾರನ ಸಂತಾನದ ಕುಟುಂಬ ಪ್ರಧಾನರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡು ಬಂದುದರಿಂದ ಎಲ್ಲಾಜಾರರ ಕುಟುಂಬಗಳನ್ನು ಪ್ರಧಾನರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ, ಈತಾಮಾರ್ಯರ ಕುಟುಂಬಗಳನ್ನು ಎಂಟು ವರ್ಗಗಳನ್ನಾಗಿಯೂ ಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಎಲ್ಲಾಜಾರನ ಸಂತಾನದಲ್ಲಿ ಕುಟುಂಬ ಮುಖ್ಯಸ್ಥರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡುಬಂದುದರಿಂದ, ಎಲ್ಲಾಜಾರ್ಯರ ಕುಟುಂಬಗಳನ್ನು ಮುಖ್ಯಸ್ಥರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ ಈತಾಮಾರ್ಯರ ಕುಟುಂಬಗಳನ್ನು ಎಂಟು ವರ್ಗಗಳನ್ನಾಗಿಯೂ ಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಎಲ್ಲಾಜಾರನ ಸಂತಾನದ ಕುಟುಂಬಪ್ರಧಾನರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡುಬಂದದರಿಂದ ಎಲ್ಲಾಜಾರ್ಯರ ಕುಟುಂಬಗಳನ್ನು ಪ್ರಧಾನರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ ಈತಾಮಾರ್ಯರ ಕುಟುಂಬಗಳನ್ನು ಎಂಟು ವರ್ಗಗಳನ್ನಾಗಿಯೂ ಮಾಡಿ ಈ ವರ್ಗಗಳ ವಿಷಯವಾಗಿ ಚೀಟುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಈತಾಮಾರನ ಸಂತತಿಗಿಂತಲೂ ಎಲ್ಲಾಜಾರನ ಸಂತತಿಯವರಲ್ಲಿ ಹೆಚ್ಚು ಮಂದಿ ನಾಯಕರಿದ್ದರು. ಎಲ್ಲಾಜಾರನ ಸಂತತಿಯವರಲ್ಲಿ ಹದಿನಾರು ಮಂದಿ ಮತ್ತು ಈತಾಮಾರನ ಸಂತತಿಯವರಲ್ಲಿ ಎಂಟು ಮಂದಿ ನಾಯಕರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಈತಾಮಾರನ ಪುತ್ರರಿಗಿಂತ ಎಲಿಯಾಜರನ ಪುತ್ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದುದರಿಂದ, ಅವರು ಸಹ ಹೀಗೆಯೇ ವಿಭಾಗಿಸಿದ್ದರು. ಎಲಿಯಾಜರನ ಪುತ್ರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಪುತ್ರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟು ಮಂದಿ ಮುಖ್ಯಸ್ಥರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 24:4
7 ತಿಳಿವುಗಳ ಹೋಲಿಕೆ  

ಲೇವಿಯರ ಪಟ್ಟಿಯಲ್ಲಿ ಬರೆಯಲ್ಪಟ್ಟ ಹೆಸರುಗಳ ಪ್ರಕಾರ ಇವರೇ ಆಯಾ ಲೇವಿ ವರ್ಗಗಳ ಕುಟುಂಬದ ಪ್ರಧಾನರು. ಇವರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರು ಯೆಹೋವನ ಆಲಯದಲ್ಲಿ ಸೇವೆಮಾಡತಕ್ಕವರಾಗಿದ್ದರು.


ದಾವೀದನು ಎಲ್ಲಾಜಾರನ ಸಂತಾನದವನಾದ ಚಾದೋಕನೂ, ಈತಾಮಾರನ ಸಂತಾನದವನಾದ ಅಹೀಮೆಲೆಕನು ಯಾಜಕರನ್ನು ಸರದಿಯ ಮೇಲೆ ಸೇವೆಮಾಡತಕ್ಕ ವರ್ಗಗಳನ್ನಾಗಿ ವಿಭಾಗಿಸಿದರು.


ಈ ವರ್ಗಗಳ ವಿಷಯವಾಗಿ ಚೀಟು ಹಾಕಿದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯದ ಅಧಿಪತಿಗಳು, ದೈವಿಕ ಕಾರ್ಯಗಳ ಅಧ್ಯಕ್ಷರೂ ಇರುವುದರಿಂದ ಉಭಯ ಸಂತಾನದವರು ಸಮಾನ ಸ್ಥಾನದವರಾಗಿದ್ದರು.


ಆಗ ಸೊಲೊಮೋನನು ಸಮಸ್ತ ಇಸ್ರಾಯೇಲರ ಶತಾಧಿಪತಿಗಳೊಂದಿಗೂ, ಸಹಸ್ರಾಧಿಪತಿಗಳೊಂದಿಗೂ, ನ್ಯಾಯಾಧಿಪತಿಗಳೊಂದಿಗೂ, ಗೋತ್ರ ಪ್ರಧಾನರಾದವರೊಂದಿಗೂ, ಇಸ್ರಾಯೇಲ್ ಪ್ರಭುಗಳೊಂದಿಗೂ ಮಾತನಾಡಿದನು.


ಯೋಯಾಕೀಮನ ಕಾಲದಲ್ಲಿ ಯಾಜಕರಾಗಿದ್ದ ಗೋತ್ರಪ್ರಧಾನರು: ಸೆರಾಯನ ಗೋತ್ರದ ಮೆರಾಯ, ಯೆರೆಮೀಯನ ಗೋತ್ರದ ಹನನ್ಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು