Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 25:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇವರೆಲ್ಲರು ಅರಸನ ದರ್ಶಿಯಾದ ಹೇಮಾನನ ಮಕ್ಕಳು. ದೇವರು ಹೇಮಾನನಿಗೆ, “ನೀನು ಅಭಿವೃದ್ಧಿ ಹೊಂದುವಹಾಗೆ ಮಾಡುವೆನು” ಎಂಬುದಾಗಿ ವಾಗ್ದಾನ ಮಾಡಿದ್ದನು. ಅದರಂತೆಯೇ ಆತನು ಅವನಿಗೆ ಹದಿನಾಲ್ಕು ಗಂಡುಮಕ್ಕಳನ್ನೂ, ಮೂರು ಹೆಣ್ಣುಮಕ್ಕಳನ್ನೂ ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇವರೆಲ್ಲರೂ ಅರಸನ ದರ್ಶಿಯಾದ ಹೇಮಾನನ ಮಕ್ಕಳು. ದೇವರು ಅವನಿಗೆ, “ನೀನು ಅಭಿವೃದ್ಧಿಯಾಗುವ ಹಾಗೆ ಮಾಡುವೆನು,” ಎಂಬುದಾಗಿ ವಾಗ್ದಾನ ಮಾಡಿದ್ದರು. ಅದರಂತೆಯೇ ಅವನಿಗೆ ಹದಿನಾಲ್ಕು ಮಂದಿ ಗಂಡುಮಕ್ಕಳನ್ನೂ ಮೂರು ಮಂದಿ ಹೆಣ್ಣುಮಕ್ಕಳನ್ನೂ ದಯಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೇವರು ಅವನಿಗೆ - ನೀನು ಅಭಿವೃದ್ಧಿಯಾಗುವ ಹಾಗೆ ಮಾಡುವೆನು ಎಂಬದಾಗಿ ವಾಗ್ದಾನ ಮಾಡಿದ್ದನು. ಅದರಂತೆಯೇ ಆತನು ಅವನಿಗೆ ಹದಿನಾಲ್ಕು ಮಂದಿ ಗಂಡುಮಕ್ಕಳನ್ನೂ ಮೂರು ಮಂದಿ ಹೆಣ್ಣುಮಕ್ಕಳನ್ನೂ ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇವರೆಲ್ಲರೂ ಹೇಮಾನನ ಮಕ್ಕಳು. ಹೇಮಾನನು ದಾವೀದನ ಪ್ರವಾದಿಯಾಗಿದ್ದನು. ಅವನನ್ನು ಬಲಿಷ್ಠನನ್ನಾಗಿ ಮಾಡುವುದಾಗಿ ದೇವರು ವಾಗ್ದಾನ ಮಾಡಿದ್ದನು. ಆದ್ದರಿಂದ ಅವನಿಗೆ ಹದಿನಾಲ್ಕು ಮಂದಿ ಗಂಡುಮಕ್ಕಳೂ ಮೂವರು ಹೆಣ್ಣುಮಕ್ಕಳೂ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೇಮಾನನ ಪುತ್ರರು. ದೇವರು ಹೇಮಾನನಿಗೆ ಹದಿನಾಲ್ಕು ಮಂದಿ ಪುತ್ರರನ್ನೂ, ಮೂರು ಮಂದಿ ಪುತ್ರಿಯರನ್ನೂ ಕೊಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 25:5
9 ತಿಳಿವುಗಳ ಹೋಲಿಕೆ  

ಯೆಹೋವನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನೆಂದರೆ,


ಆಹಾ, ನಾನೂ, ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲರ ಮಧ್ಯದಲ್ಲಿದ್ದೇವೆ.


ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ.


ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೋಸ್ಕರ ಆರಿಸಿಕೊಂಡನು.


ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಯೆಹೋವನು ದರ್ಶನದಲ್ಲಿ,


(ಪೂರ್ವ ಕಾಲದಲ್ಲಿ ಇಸ್ರಾಯೇಲ್ಯರಲ್ಲಿ ಯಾವನಾದರೂ ದೈವೋತ್ತರ ಕೇಳಬೇಕಾದರೆ “ದೇವ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ” ಎನ್ನುವರು. ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು, ಆ ಕಾಲದಲ್ಲಿ ದೇವದರ್ಶಿಗಳೆಂದು ಕರೆಯುತ್ತಿದ್ದರು.)


ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು, “ನಿನ್ನ ಜೊತೆಯಲ್ಲಿರುವ ಜನರು ಯಾರು?” ಎಂದು ಕೇಳಲು ಯಾಕೋಬನು ಅವನಿಗೆ, “ದೇವರು ನಿನ್ನ ಸೇವಕನಿಗೆ ಕೃಪೆಯಿಂದ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು” ಎಂದು ಹೇಳಿದನು.


ಹೇಮಾನ್ಯರಲ್ಲಿ ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂವೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ, ಗಿದ್ದಲ್ತಿ, ರೋಮಮ್ತಿಯೆಜೆರ್, ಯೊಷ್ಬೆಕಾಷ, ಮಲ್ಲೋತಿ, ಹೋತೀರ್ ಮತ್ತು ಮಹಜೀಯೋತ್.


ಆಸಾಫ್ಯರಾದ ಗಾಯಕರು, ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್, ಅರಸನ ದರ್ಶಿಯಾದ ಯೆದುತೂನ್ ಇವರ ಆಜ್ಞಾನುಸಾರವಾಗಿ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಿಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ ಭೋಜನಕ್ಕೆ ಸಿದ್ಧಮಾಡುತ್ತಿದ್ದದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವುದಕ್ಕೆ ಕಾರಣವಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು