Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 25:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರಾದ ಯೆಹೋವನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ಕೈಕೆಳಗಿದ್ದುಕೊಂಡು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಆಸಾಫ ಯೆದುತೂನ್ ಹೇಮಾನರು ಅರಸನ ಸೇವೆಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದೇವರಾದ ಸರ್ವೇಶ್ವರನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ನೇತೃತ್ವದಲ್ಲಿ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಆಸಾಫ್, ಯೆದುತೂನ್, ಹೇಮಾನರು ಅರಸನ ಸೇವೆಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೇವರಾದ ಯೆಹೋವನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ಕೈಕೆಳಗಿದ್ದುಕೊಂಡು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನಮಾಡುತ್ತಿದ್ದರು. ಆಸಾಫ್ ಯೆದುತೂನ್ ಹೇಮಾನರು ಅರಸನ ಸೇವೆಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹೇಮಾನನು ತನ್ನ ಮಕ್ಕಳೆಲ್ಲರನ್ನು ದೇವಾಲಯದಲ್ಲಿ ಹಾಡುವದಕ್ಕಾಗಿ ಬಳಸಿಕೊಂಡನು. ಅವರು ಹಾರ್ಪ್ ಮತ್ತು ಲೈರ್ ವಾದ್ಯಗಳನ್ನೂ ತಾಳಗಳನ್ನೂ ಬಾರಿಸಿದರು. ಹೀಗೆ ದೇವಾಲಯದಲ್ಲಿ ಸೇವೆಮಾಡುವುದಕ್ಕಾಗಿ ಅರಸನಾದ ದಾವೀದನು ಅವರನ್ನು ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ, ಇವರೆಲ್ಲರೂ ತಮ್ಮ ತಂದೆಯ ನೇತೃತ್ವದಲ್ಲಿ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಹೀಗೆ ಆಸಾಫ್, ಯೆದುತೂನ್, ಹೇಮಾನರು ಅರಸನ ಸೇವೆಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 25:6
17 ತಿಳಿವುಗಳ ಹೋಲಿಕೆ  

ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.


ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ.


ಮುಂಭಾಗದಲ್ಲಿ ಹಾಡುವವರೂ, ಹಿಂಭಾಗದಲ್ಲಿ ವಾದ್ಯಬಾರಿಸುವವರೂ, ಸುತ್ತಲೂ ದಮ್ಮಡಿಬಡಿಯುವ ಸ್ತ್ರೀಯರೂ ಹೋಗುತ್ತಾ,


ದ್ವಾರಪಾಲಕರನ್ನಾಗಿ, ನಾಲ್ಕು ಸಾವಿರ ಜನರನ್ನು ಮತ್ತು ತಾನು ಸಿದ್ಧಪಡಿಸಿದ ವಾದ್ಯಗಳಿಂದ ಯೆಹೋವನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನೂ ನೇಮಿಸಿದನು.


ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವ ಲೇವಿಯರಲ್ಲಿ ನಾಯಕನೂ ಆಗಿದ್ದ ಕೆನನ್ಯನು ಮಂಜೂಷ ಹೊತ್ತವರಿಗೆ ಮೇಲ್ವಿಚಾರಕನಾಗಿದ್ದನು.


ಗಾಯಕರಾದ ಹೇಮಾನ್, ಆಸಾಫ್ ಮತ್ತು ಏತಾನರು ಗಟ್ಟಿಯಾಗಿ ಕಂಚಿನ ತಾಳಗಳನ್ನು ಬಾರಿಸಿವವರು.


ಆಗ ದಾವೀದನು ಲೇವಿಯರ ಪ್ರಧಾನರಿಗೆ, “ಗಾಯಕರಾದ ನಿಮ್ಮ ಸಹೋದರರನ್ನು ಸ್ವರಮಂಡಲ, ಕಿನ್ನರಿ, ತಾಳ ಮೊದಲಾದ ವಾದ್ಯಗಳಿಂದ ಉತ್ಸಾಹಧ್ವನಿ ಮಾಡುವುದಕ್ಕಾಗಿ ನೇಮಿಸಿರಿ” ಎಂದು ಆಜ್ಞಾಪಿಸಿದನು.


ದಾವೀದನೂ ಎಲ್ಲಾ ಇಸ್ರಾಯೇಲರೂ ಶಂಕುಮರದಿಂದ (ಸೈಪ್ರಸ್ ಮರ) ಮಾಡಿದ ಕಿನ್ನರಿ, ಸ್ವರಮಂಡಲ, ದಮ್ಮಡಿ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ಯೆಹೋವನ ಮುಂದೆ ನರ್ತನ ಮಾಡುತ್ತಾ ಹೋದರು.


ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕೋಸ್ಕರ ಲೇವಿಯರನ್ನು, ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ನಿಲ್ಲಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.


ಅರಸನು ಸುಗಂಧದ ಮರದಿಂದ ಯೆಹೋವನ ಆಲಯ ಮತ್ತು ಅರಮನೆ ಇವುಗಳಿಗೆ ಸ್ತಂಭಗಳನ್ನು, ಗಾಯಕರಿಗೋಸ್ಕರ ಕಿನ್ನರಿಗಳನ್ನೂ, ಸ್ವರಮಂಡಲಗಳನ್ನೂ ಮಾಡಿಸಿದನು. ಆಗ ಬಂದಷ್ಟು ಸುಗಂಧದ ಮರವು ಇಂದಿನ ವರೆಗೂ ಆ ದೇಶಕ್ಕೆ ಬರಲಿಲ್ಲ ಮತ್ತು ಕಾಣಲಿಲ್ಲ.


ಅವರು ಸ್ವರಮಂಡಲ, ಕಿನ್ನರಿ, ತುತ್ತೂರಿ, ಇವುಗಳೊಡನೆ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬಂದರು.


ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತ್ತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ನುಡಿಸುತ್ತಾ ಕೀರ್ತನೆಗಳನ್ನು ಹಾಡುತ್ತಿದ್ದರು. ಇದನ್ನು ಕಂಡಕೂಡಲೆ ಅತಲ್ಯಳು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ” ಎಂದು ಕೂಗಿದಳು.


ಎಲೀಚಾಫಾನ್ಯರಲ್ಲಿ ಶಿಮ್ರಾ, ಯೆಗೀಯೇಲ್, ಆಸಾಫ್ಯರಲ್ಲಿ ಜೆಕರ್ಯ ಮತ್ತು ಮತ್ತನ್ಯ,


ಮೀಕನ ಮಗನೂ, ಜಬ್ದೀಯನ ಮೊಮ್ಮಗನೂ, ಆಸಾಫನ ಮರಿಮಗನೂ, ಪ್ರಾರ್ಥನೆಯ ಸಮಯದಲ್ಲಿ ಕೃತಜ್ಞತಾಸ್ತುತಿಯನ್ನು ಆರಂಭಿಸುತ್ತಾ ಆರಾಧನೆಯಲ್ಲಿ ಜನರನ್ನು ನಡೆಸುತ್ತಿದ್ದ ಮತ್ತನ್ಯ, ತನ್ನ ಬಂಧುಗಳಲ್ಲಿ ದ್ವಿತೀಯ ಸ್ಥಾನದವನಾದ ಬಕ್ಬುಕ್ಯ, ಶಮ್ಮೂವನ ಮಗನೂ, ಗಾಲಾಲನ ಮೊಮ್ಮಗನೂ, ಯೆದೂತೂನನ ಮರಿಮಗನೂ ಆದ ಅಬ್ದ ಎಂಬುವವರು,


ಈ ಲೇವಿಯರ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಅದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನಾದ ಎಜ್ರ ಇವರ ಕಾಲದಲ್ಲಿದ್ದವರು:


ಪೂರ್ವಕಾಲದಲ್ಲಿ ಅಂದರೆ ದಾವೀದನ ಮತ್ತು ಆಸಾಫನ ಕಾಲದಲ್ಲಿ ಗಾಯನಮಂಡಳಿಯ ನಾಯಕರು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುವ ಕೀರ್ತನೆಗಳು ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು