Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 25:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇವರಲ್ಲಿ ಹಿರಿಯರು, ಕಿರಿಯರು, ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾ ಕ್ರಮವನ್ನು ಗೊತ್ತುಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇವರಲ್ಲಿ ಹಿರಿಕಿರಿಯರೂ ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾಕ್ರಮವನ್ನು ಗೊತ್ತುಮಾಡಿಕೊಳ್ಳುತ್ತಿದ್ದರು. ಈ ಚೀಟಿನ ಪ್ರಕಾರ ಇನ್ನೂರ ಎಂಬತ್ತೆಂಟು ಮಂದಿ ಸದಸ್ಯರು ಇಪ್ಪತ್ತನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದ್ದರು. ಪ್ರತಿಯೊಂದು ಗುಂಪಿಗೆ ಒಬ್ಬ ನಾಯಕನು, ಅವನ ಸಹೋದರರು ಹಾಗೂ ಮಕ್ಕಳು ಕೂಡಿ ಹನ್ನೆರಡು ಮಂದಿ ಸದಸ್ಯರು ಇದ್ದರು. ಕ್ರಮಾನುಸಾರ ಇಪ್ಪತ್ತನಾಲ್ಕು ನಾಯಕರ ಹೆಸರುಗಳು ಇವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇವರಲ್ಲಿ ಹಿರಿಕಿರಿಯರೂ ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾಕ್ರಮವನ್ನು ಗೊತ್ತುಮಾಡಿಕೊಂಡರು. ಚೀಟಿನ ಪ್ರಕಾರವಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪ್ರತಿಯೊಬ್ಬರಿಗೂ ಕೆಲಸಗಳನ್ನು ಗೊತ್ತುಪಡಿಸಲು ಚೀಟುಹಾಕಿ ನೇಮಕ ಮಾಡಿದರು. ಅವರು ಯಾವ ಪಕ್ಷಪಾತವನ್ನೂ ಮಾಡಲಿಲ್ಲ. ದೊಡ್ಡವರು, ಚಿಕ್ಕವರು, ಉಪಾಧ್ಯಾಯರು, ವಿದ್ಯಾರ್ಥಿಗಳು ಎಂಬ ಬೇಧಭಾವವಿಲ್ಲದೆ ಆರಿಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ, ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆ ಎದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 25:8
13 ತಿಳಿವುಗಳ ಹೋಲಿಕೆ  

ಅವರು ಕನಿಷ್ಠ ಕುಟುಂಬವೆಂದೂ, ಶ್ರೇಷ್ಠ ಕುಟುಂಬವೆಂದೂ ವ್ಯತ್ಯಾಸ ಮಾಡದೆ ತಮ್ಮಲ್ಲಿ ಪ್ರತಿಯೊಬ್ಬನು ಕಾಯತಕ್ಕ ಹೆಬ್ಬಾಗಿಲುಗಳನ್ನು ಚೀಟಿನಿಂದಲೇ ಗೊತ್ತುಮಾಡಿಕೊಂಡರು.


ಮಡಲಿನಲ್ಲಿ ಚೀಟು ಹಾಕಬಹುದು, ಅದರ ತೀರ್ಪು ಯೆಹೋವನದೇ.


ಆನಂತರ ಅವರಿಗೋಸ್ಕರ ಚೀಟುಹಾಕಿದರು; ಚೀಟು ಮತ್ತೀಯನ ಪರವಾಗಿ ಬಿದ್ದುದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಸೇರಿಕೊಂಡನು.


ಈ ಲೇವಿಯರ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಅದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನಾದ ಎಜ್ರ ಇವರ ಕಾಲದಲ್ಲಿದ್ದವರು:


ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತ್ತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ನುಡಿಸುತ್ತಾ ಕೀರ್ತನೆಗಳನ್ನು ಹಾಡುತ್ತಿದ್ದರು. ಇದನ್ನು ಕಂಡಕೂಡಲೆ ಅತಲ್ಯಳು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ” ಎಂದು ಕೂಗಿದಳು.


ಶುಪ್ಪೀಮ್ ಮತ್ತು ಹೋಸ ಎಂಬುವರಿಗೆ ಪಶ್ಚಿಮದ ಬಾಗಿಲೂ ಅದರ ಸಮೀಪದಲ್ಲಿರುವ ಶಲ್ಲೆಕೆತ್ ಎಂಬ ಬಾಗಿಲು ಚೀಟಿನಿಂದ ನೇಮಕವಾದವು. ಶೆಲ್ಲೆಕೆತ್ ಬಾಗಿಲು ಪಟ್ಟಣದಿಂದ ದೇವಾಲಯಕ್ಕೆ ಏರಿಹೋಗುವ ದಾರಿಯಲ್ಲಿದೆ.


ಇವರೆಲ್ಲಾ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ, ಕಿರಿಯರೂ ತಮ್ಮ ಕುಲ ಬಂಧುಗಳಾದ ಆರೋನ್ಯರಂತೆ ಅರಸನಾದ ದಾವೀದ ಚಾದೋಕ್ ಅಹೀಮೆಲೆಕ್ ಇವರ ಮುಂದೆಯೂ, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರ ಮುಂದೆಯೂ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು.


ಈ ವರ್ಗಗಳ ವಿಷಯವಾಗಿ ಚೀಟು ಹಾಕಿದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯದ ಅಧಿಪತಿಗಳು, ದೈವಿಕ ಕಾರ್ಯಗಳ ಅಧ್ಯಕ್ಷರೂ ಇರುವುದರಿಂದ ಉಭಯ ಸಂತಾನದವರು ಸಮಾನ ಸ್ಥಾನದವರಾಗಿದ್ದರು.


ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವ ಲೇವಿಯರಲ್ಲಿ ನಾಯಕನೂ ಆಗಿದ್ದ ಕೆನನ್ಯನು ಮಂಜೂಷ ಹೊತ್ತವರಿಗೆ ಮೇಲ್ವಿಚಾರಕನಾಗಿದ್ದನು.


ಆಗ ಅವನು ಆ ಹೋತಗಳಲ್ಲಿ ಒಂದು ಯೆಹೋವನಿಗೋಸ್ಕರವೆಂದು ಮತ್ತೊಂದು ಅಜಾಜೇಲನಿಗೋಸ್ಕರವೆಂದು ಚೀಟುಗಳನ್ನು ಬರೆದು ಹಾಕಬೇಕು.


ಚೀಟಿನ ಪ್ರಕಾರವಾಗಿ, ಮೊದಲನೆಯದಾಗಿ ಆಸಾಫ್ಯನಾದ ಯೋಸೇಫನು. ಎರಡನೆಯವನು ಗೆದಲ್ಯ. ಇವನೂ ಇವನ ಸಹೋದರರೂ, ಮಕ್ಕಳು ಒಟ್ಟು ಹನ್ನೆರಡು ಜನರು.


ಆಸಾಫ್ಯರಲ್ಲಿ ಜಕ್ಕೂರ್, ಯೋಸೇಫ್, ನೆತನ್ಯ, ಅಶರೇಲ ಎಂಬವರು. ಇವರು ಅರಮನೆಯ ಗಾಯಕನಾದ ಆಸಾಫನ ಸಹಾಯಕರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು