Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 26:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದಲ್ಲದೆ ದೇವ ದರ್ಶಿಯಾದ ಸಮುವೇಲನೂ, ಕೀಷನ ಮಗನಾದ ಸೌಲನೂ, ನೇರನ ಮಗನಾದ ಅಬ್ನೇರನೂ, ಚೆರೂಯಳ ಮಗನಾದ ಯೋವಾಬನೂ ಹಾಗೆಯೇ ಮಾಡಿದರು. ಈ ಪ್ರಕಾರ ಪ್ರತಿಷ್ಠಿತವಾದದ್ದೆಲ್ಲವೂ ಶೆಲೋಮೋತನ ಮತ್ತು ಅವನ ಸಹೋದರರ ವಶದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇವರಲ್ಲದೆ ದರ್ಶಿಯಾದ ಸಮುವೇಲನೂ ಕೀಷನ ಮಗ ಸೌಲನೂ ನೇರನ ಮಗ ಅಬ್ನೇರನೂ ಜೆರೂಯಳ ಮಗ ಯೋವಾಬನೂ ಹಾಗೆಯೇ ಮಾಡಿದ್ದರು. ಈ ಪ್ರಕಾರ ಪ್ರತಿಷ್ಠಿತವಾದದ್ದೆಲ್ಲವೂ ಶೆಲೋಮೋತನ ಮತ್ತು ಅವನ ಸಹೋದರರ ವಶದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇವರಲ್ಲದೆ ದರ್ಶಿಯಾದ ಸಮುವೇಲನೂ ಕೀಷನ ಮಗನಾದ ಸೌಲನೂ ನೇರನ ಮಗನಾದ ಅಬ್ನೇರನೂ ಚೆರೂಯಳ ಮಗನಾದ ಯೋವಾಬನೂ ಹಾಗೆಯೇ ಮಾಡಿದ್ದರು. ಈ ಪ್ರಕಾರ ಪ್ರತಿಷ್ಠಿತವಾದದ್ದೆಲ್ಲವೂ ಶೆಲೋಮೋತನ ಮತ್ತು ಅವನ ಸಹೋದರರ ವಶದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಶೆಲೋಮೋತ್ ಮತ್ತು ಅವನ ಸಂಬಂಧಿಕರೂ ಪ್ರವಾದಿಯಾದ ಸಮುವೇಲನೂ ಕೀಷನ ಮಗನಾದ ಸೌಲನೂ ನೇರನ ಮಗನಾದ ಅಬ್ನೇರನೂ ಚೆರೂಯಳ ಮಗನಾದ ಯೋವಾಬನೂ ದೇವರಿಗೆಂದು ಕೊಟ್ಟಿದ್ದ ಪವಿತ್ರವಸ್ತುಗಳ ಮೇಲ್ವಿಚಾರಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಇದಲ್ಲದೆ ದರ್ಶಿಯಾದ ಸಮುಯೇಲನೂ, ಕೀಷನ ಮಗ ಸೌಲನೂ, ನೇರನ ಮಗ ಅಬ್ನೇರನೂ, ಚೆರೂಯಳ ಮಗ ಯೋವಾಬನೂ ಪ್ರತಿಷ್ಠೆ ಮಾಡಿದ್ದೆಲ್ಲವೂ ಮತ್ತು ಯಾರು ಪ್ರತಿಷ್ಠೆ ಮಾಡಿದ್ದರೋ, ಅದೆಲ್ಲವೂ ಶೆಲೋಮೋತನ ಕೈಕೆಳಗೂ, ಅವನ ಸಹೋದರರ ಕೈಕೆಳಗೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 26:28
7 ತಿಳಿವುಗಳ ಹೋಲಿಕೆ  

(ಪೂರ್ವ ಕಾಲದಲ್ಲಿ ಇಸ್ರಾಯೇಲ್ಯರಲ್ಲಿ ಯಾವನಾದರೂ ದೈವೋತ್ತರ ಕೇಳಬೇಕಾದರೆ “ದೇವ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ” ಎನ್ನುವರು. ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು, ಆ ಕಾಲದಲ್ಲಿ ದೇವದರ್ಶಿಗಳೆಂದು ಕರೆಯುತ್ತಿದ್ದರು.)


ದಾವೀದನು ಫಿಲಿಷ್ಟಿಯರೊಡನೆ ಯುದ್ಧಮಾಡುವುದಕ್ಕೆ ಹೊರಟದ್ದನ್ನು ಸೌಲನು ಕಂಡು ತನ್ನ ಸೇನಾಪತಿಯಾದ ಅಬ್ನೇರನನ್ನು, “ಅಬ್ನೇರನೇ ಈ ಹುಡುಗನು ಯಾರ ಮಗನು?” ಎಂದು ಕೇಳಿದ್ದಕ್ಕೆ ಅವನು ಸೌಲನಿಗೆ, “ಅರಸನೇ ನಿನ್ನ ಜೀವದಾಣೆ ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟನು.


ಇವರು ಯೆಹೋವನ ಆಲಯದ ವೃದ್ಧಿಗೋಸ್ಕರ ತಮಗೆ ಯುದ್ಧದಲ್ಲಿ ಸಿಕ್ಕಿದ ಕೊಳ್ಳೆಯ ಒಂದು ಭಾಗವನ್ನು ಯೆಹೋವನಿಗೆಂದು ಮುಡುಪಾಗಿ ಇಟ್ಟರು.


ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳು ಲೌಕೀಕೋದ್ಯೋಗದಲ್ಲಿದ್ದರು. ಅವರು ಇಸ್ರಾಯೇಲರ ಅಧಿಕಾರಿಗಳೂ ಮತ್ತು ನ್ಯಾಯಾಧಿಪತಿಗಳೂ ಆಗಿದ್ದರು.


ಇವನು ಯೆಹೋವನ ಆಲಯದ ಅಂಗಳಗಳು, ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಷ್ಠಿತ ವಸ್ತುಗಳು, ಭಂಡಾರಗಳು ಇವುಗಳ ವಿಷಯವಾಗಿಯೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು