Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 26:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳು ಲೌಕೀಕೋದ್ಯೋಗದಲ್ಲಿದ್ದರು. ಅವರು ಇಸ್ರಾಯೇಲರ ಅಧಿಕಾರಿಗಳೂ ಮತ್ತು ನ್ಯಾಯಾಧಿಪತಿಗಳೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳೂ ಲೌಕಿಕೋದ್ಯೋಗದಲ್ಲಿದ್ದರು. ಅವರು ಇಸ್ರಯೇಲರ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳೂ ಲೌಕಿಕೋದ್ಯೋಗದಲ್ಲಿದ್ದರು. ಅವರು ಇಸ್ರಾಯೇಲ್ಯರ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಕೆನನ್ಯನು ಇಚ್ಹಾರ್ಯ ವಂಶದವನಾಗಿದ್ದನು. ಕೆನನ್ಯನೂ ಅವನ ಮಕ್ಕಳೂ ನ್ಯಾಯಾಧೀಶರಾಗಿಯೂ ಕಾನೂನು ಪಾಲಕರಾಗಿಯೂ ಇಸ್ರೇಲಿನ ಅನೇಕ ಕಡೆಗಳಲ್ಲಿ ಕೆಲಸ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಇಚ್ಹಾರರಲ್ಲಿ ಕೆನನ್ಯನನ್ನು, ಅವನ ಪುತ್ರರನ್ನು ಪಾರುಪತ್ಯಗಾರರಿಗೋಸ್ಕರವೂ, ನ್ಯಾಯಾಧಿಪತಿಗಳಿಗೋಸ್ಕರವೂ ಇಸ್ರಾಯೇಲಿನ ಮೇಲೆ ಹೊರಗಿನ ಕಾರ್ಯಗಳನ್ನು ನೋಡಲು ನೇಮಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 26:29
11 ತಿಳಿವುಗಳ ಹೋಲಿಕೆ  

ಲೇವಿಗೋತ್ರ ಪ್ರಧಾನರಲ್ಲಿ: ದೇವಾಲಯದ ಹೊರಗಿನ ಕಾರ್ಯಗಳ ಮೇಲ್ವಿಚಾರಕನಾದ ಶಬ್ಬೆತೈ, ಯೋಜಾಬಾದ್ ಎಂಬುವವರು,


ದಾವೀದನು ಯೆಹೋವನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗಾಗಿ ಇಪ್ಪತ್ತ ನಾಲ್ಕು ಸಾವಿರ ಜನರನ್ನು ನ್ಯಾಯಾಧಿಪತಿಗಳನ್ನಾಗಿ ಮತ್ತು ಅಧಿಕಾರಿಗಳನ್ನಾಗಿ ಆರು ಸಾವಿರ ಜನರನ್ನು,


ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರೆಹೊರುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನಡೆಸುತ್ತಿದ್ದರು; ಲೇವಿಯರಲ್ಲಿ ಕೆಲವರು ಲೇಖಕರೂ, ಕೆಲವರು ಅಧಿಕಾರಿಗಳೂ, ದ್ವಾರಪಾಲಕರೂ ಲೇವಿಯರೇ ಆಗಿದ್ದರು.


ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್,


ಕೆಹಾತನಿಗೆ ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಎಂಬ ನಾಲ್ಕು ಮಕ್ಕಳಿದ್ದರು.


ಕೆಹಾತ್ ವಂಶದವರಲ್ಲಿ ಅಮ್ರಾಮ್ ಗೋತ್ರದವರು, ಇಚ್ಹಾರ್ ಗೋತ್ರದವರೂ, ಹೆಬ್ರೋನ್ ಗೋತ್ರದವರೂ, ಉಜ್ಜೀಯೇಲ್ ಗೋತ್ರದವರೂ ಇದ್ದರು.


ಇದಲ್ಲದೆ ದೇವ ದರ್ಶಿಯಾದ ಸಮುವೇಲನೂ, ಕೀಷನ ಮಗನಾದ ಸೌಲನೂ, ನೇರನ ಮಗನಾದ ಅಬ್ನೇರನೂ, ಚೆರೂಯಳ ಮಗನಾದ ಯೋವಾಬನೂ ಹಾಗೆಯೇ ಮಾಡಿದರು. ಈ ಪ್ರಕಾರ ಪ್ರತಿಷ್ಠಿತವಾದದ್ದೆಲ್ಲವೂ ಶೆಲೋಮೋತನ ಮತ್ತು ಅವನ ಸಹೋದರರ ವಶದಲ್ಲಿತ್ತು.


ವಿಧವಿಧವಾದ ಕೊಲೆ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಅಥವಾ ಚರ್ಚೆಗಳು ನಿಮ್ಮ ಊರಿನಲ್ಲಿ ಉಂಟಾದಾಗ, ನ್ಯಾಯ ತೀರಿಸುವುದು ಕಷ್ಟವಾದರೆ, ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳಕ್ಕೆ ಹೋಗಬೇಕು.


ಅಲ್ಲಿ ಯಾಜಕಸೇವೆಯನ್ನು ಮಾಡುವ ಲೇವಿಯರ ಮತ್ತು ಆ ಕಾಲದ ನ್ಯಾಯಾಧಿಪತಿಯ ಬಳಿಗೆ ಹೋಗಿ ವಿಚಾರಿಸಲು ನೀವು ಕೊಡಬೇಕಾದ ತೀರ್ಪನ್ನು ಅವರು ತಿಳಿಸುವರು.


ಇಜ್ರಾಹ್ಯನಾದ ಶಮ್ಹೂತನು ಐದನೆಯ ವರ್ಗದ ನಾಯಕನು. ಐದನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು